ಕರ್ನಾಟಕ

ರೈತರ ಸಾಲ ಮನ್ನಾ ಮಾಡಿ, ಮೋದಿಗೆ ಸವಾಲ್ ಹಾಕಿದ ಸಿದ್ದರಾಮಯ್ಯ!!!

587

ಬಿಜೆಪಿ ಆಡಳಿತ ಸರ್ಕಾರವಿರುವ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ರೈತರ ಸಾಲಮನ್ನಾ, ಹಾಗೂ ಕಾಂಗ್ರೆಸ್ ಆಡಳಿತದ ಪಂಜಾಬ್ ನಲ್ಲಿಯೂ ರೈತರ ಸಾಲ ಮನ್ನಾ ಘೋಷಣೆಯಾದ ನಂತರ ಕರ್ನಾಟಕದಲ್ಲಿಯೂ ರೈತರ ಸಾಲ ಮನ್ನಾ ಮಾಡಬೇಕೆಂದು ಪ್ರತಿಪಕ್ಷಗಳು ತೀವ್ರವಾಗಿ ಆಗ್ರಹಿಸಿದ್ದವು. ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುಧವಾರ ವಿಧಾನಸಭೆ ಕಲಾಪದಲ್ಲಿ ರೈತರ ಅಲ್ಪಾವಧಿ ಸಾಲಮನ್ನಾ ಮಾಡುವುದಾಗಿ ಘೋಷಿಸಿದ್ದಾರೆ.

ಮುಖ್ಯಮಂತ್ರಿಗಳು ರೈತರ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿದ್ದು, ಇದೀಗ ಕೇಂದ್ರ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಮನವಿ ಮಾಡಿದ್ದಾರೆ.

ನೀವು ವಾಣಿಜ್ಯ ಬ್ಯಾಂಕ್ ಗಳಲ್ಲಿ ರೈತರ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿಯವರಿಗೆ ಟ್ವಿಟ್ಟರ್ ಮೂಲಕ ಸಿಎಂ ಪರೋಕ್ಷವಾಗಿಯೇ ಚಾಲೆಂಜ್ ಹಾಕಿದ್ದಾರೆ.

ಹಾಗಾದ್ರೆ ಎಷ್ಟು ಮತ್ತು ಯಾವ ರೀತಿಯ ಸಾಲ ಮನ್ನಾ ಆಗಿದೆ? 

ರಾಜ್ಯ ಸರ್ಕಾರದಿಂದ ಸಹಕಾರಿ ಬ್ಯಾಂಕ್‍ಗಳಿಂದ ರೈತರು ಪಡೆದ ಅಲ್ಪವಾಧಿ 50 ಸಾವಿರ ಸಾಲವನ್ನು ಮನ್ನಾ ಮಾಡಲಾಗುವುದು. 2017ರ ಜೂನ್ 20ಕ್ಕೆ ಕೊನೆಗೊಂಡಂತೆ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಲಾಗುವುದು. ಒಟ್ಟು 8165 ಕೋಟಿ ರೂ. ಅಲ್ಪವಾಧಿ ಸಾಲ ಮನ್ನಾವಾಗಲಿದ್ದು ಇದರಿಂದಾಗಿ 22 ಲಕ್ಷ ರೈತರಿಗೆ ಸಹಾಯವಾಗಲಿದೆ ಎಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಒಂದೇ ದಿನಕ್ಕೆ 1.26 ಲಕ್ಷ ಸರ್ಕಾರಿ ಉದ್ಯೋಗ….! ಯಾರ್ಯಾರಿಗೆ,ಇಲ್ಲಿದೆ ನೋಡಿ ಮಾಹಿತಿ,.!!

    ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • ಜ್ಯೋತಿಷ್ಯ

    ಪರಮೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…