ರಾಜಕೀಯ

ಸುಮಲತಾ ಅಂಬರೀಷ್ ರವರಿಂದ ಸಿಎಂ ಕುಮಾರಸ್ವಾಮಿಗೆ ತಿರುಗೇಟು?ಏಕೆ ಗೊತ್ತಾ?

239

ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ.

ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ.

ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ ನಾಯಕರ ಪ್ರಚಾರ, ವಾಕ್ಸಮರ ಶುರುವಾಗಿದೆ.

ಅಂಬರೀಶ್ ಅವರು ಮೃತಪಟ್ಟ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಗೆ ಅವರ ಮೃತದೇಹವನ್ನು ತಂದವರು ಯಾರು? ಮಂಡ್ಯ ಜಿಲ್ಲೆಗೆ ಅಂಬರೀಶ್ ಕೊಡುಗೆ ಏನೂ ಇಲ್ಲದಿದ್ದರೂ ನಾನು ಕರ್ತವ್ಯ ಮೆರೆದಿದ್ದೇನೆ. ಅನುಕಂಪಕ್ಕೆ ಮರುಳಾಗದಿರಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎನ್ನಲಾಗಿದೆ.

ಇದಕ್ಕೆ ತಿರುಗೇಟು ನೀಡಿರುವ ಸುಮಲತಾ, ಅಂಬರೀಶ್ ಎಂದಿಗೂ ತಾವು ಮಾಡಿದ ಕೆಲಸಗಳನ್ನು ಹೇಳಿಕೊಂಡು ತಿರುಗಿಲ್ಲ. ಅವರು ಏನೆಲ್ಲಾ ಮಾಡಿದ್ದಾರೆ ಎಂಬುದು ಜನರಿಗೇ ಗೊತ್ತಿದೆ ಎಂದು ಹೇಳಿದ್ದಾರೆ. ಸುಮಲತಾ ಅಂಬರೀಶ್ ಕಾಂಗ್ರೆಸ್ ನಿಂದ ಮಂಡ್ಯ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಬಯಸಿದ್ದು, ಒಂದು ವೇಳೆ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಕಣಕ್ಕೆ ಇಳಿಯುವುದು ನಿಶ್ಚಿತವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕದ ಸಾಧಕರು

    ಸಿಂಪಲ್ ಕನ್ನಡಿಗನ ಮೇರು ಸಾಧನೆ.!ಇವರು ವಿಶಿಷ್ಟ ಶೈಲಿಯ ಸಂಗೀತಗಾರನಾಗಿದ್ದೇ ರೋಚಕ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    ಹೊಸ ತಲೆಮಾರಿನ ಸಂಗೀತ ಸಂಯೋಜಕ ಗಾಯಕರಲ್ಲಿ ರಘು ದೀಕ್ಷಿತ್ ಅವರದು ಒಂದು ವಿಶಿಷ್ಟ ಸ್ಥಾನ. ಕನ್ನಡದ ಇಂಟರ್ ನ್ಯಾಷನಲ್ ರಾಕ್ ಸ್ಟಾರ್’ ಆಗುವ ಮೂಲಕ ವಿಶ್ವದಾದ್ಯಂತ ಕನ್ನಡ ಕೀರ್ತಿ ಪತಾಕೆ ಹಾರಿಸಿದ್ದಾರೆ.ಇವರು ನಮ್ಮ ಕನ್ನಡದ ಹೆಮ್ಮೆ ಅಂತ ಹೇಳಿದ್ರೆ ತಪ್ಪಾಗಲಾರದು.ಇಂತಹ ಮಹಾನ್ ಸಾಧಕ ಬೆಳೆದು ಬಂದದ್ದೆ ಒಂದು ರೋಚಕ… ರಘು ದೀಕ್ಷಿತ್ ವೈಯುಕ್ತಿಕ ಜೀವನದ ಬಗ್ಗೆ… ನವೆಂಬರ್ 11, 1974ರಂದು, ಮಹಾರಾಷ್ಟ್ರದ ನಾಸಿಕ್’ನಲ್ಲಿ, ರಘು ದೀಕ್ಷಿತ್’ರವರ ಜನನವಾಯಿತು.ಇವರ ಪೂರ್ತಿ ಹೆಸರು ರಘುಪತಿ ದ್ವಾರಕನಾಥ್ ದೀಕ್ಷಿತ್ ಎಂದು. ತಂದೆ ದಿವಂಗತ ಕೆ.ವಿ.ದ್ವಾರಕನಾಥ್…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅವಸರದ ನಿರ್ಣಯ ಕೈಗೊಳ್ಳದಿರಿ. ಅನೇಕ ರೀತಿಯ ಅಸಂಗತ ಪರಿಣಾಮಗಳು ಉಂಟಾಗುವ ಸಾಧ್ಯತೆ ಇದೆ. ಆದಷ್ಟು ಆಂಜನೇಯ ಸ್ವಾಮಿ ಸ್ತೋತ್ರ ಪಠಿಸುವುದು ಒಳ್ಳೆಯದು. ಬಡವರಿಗೆ ಆಹಾರ ನೀಡಿ.ನಿಮ್ಮ ಸಮಸ್ಯೆ.ಏನೇ .ಇರಲಿ…

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ರೆಸಿಪಿ

    ಆನೇಕ ರೀತಿಯ ಬಗೆ ಬಗೆಯ ಇಡ್ಲಿಗಳು ಮಾಡುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ದಕ್ಷಿಣ ಭಾರತದ ಪ್ರಮುಖ ಬ್ರೇಕ್‌ಫಾಸ್ಟ್‌ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್‌ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್‌ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.

  • inspirational

    ಮದುವೆಯಾದ ಎರಡು ವಾರದಲ್ಲೇ ಗಂಡ ಬಿಟ್ಟು ಹೋದ್ರು, ದೃತಿಗೆಡದೆ ಐಎಎಸ್ ಅಧಿಕಾರಿಯಾದ ಮಹಿಳೆ!

    ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…

  • ದೇಶ-ವಿದೇಶ

    ಚಾಲಾಕಿ ಚೀನಾ ದೇಶವು ನಮ್ಮ ಭಾರತ ಮತ್ತು ವಿಶ್ವವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುತ್ತಿರುವ ಸಂಗತಿಗಳ ಬಗ್ಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

    ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.