ಸುದ್ದಿ

ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

72

ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.

ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು ಬಳಲುತ್ತಿದ್ದರು. ಹೀಗಾಗಿ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಮಾರ್ಚ್ 10ರಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಾತೆ ಮಹಾದೇವಿ ಗುರು ಲಿಂಗಾನಂದ ಅವರಿಂದ ಪ್ರಭಾವಿತರಾಗಿ ಕಿರಿಯ ವಯಸ್ಸಿನಲ್ಲಿ ಸನ್ಯಾಸ ಸ್ವೀಕರಿಸಿದ್ದರು. ಇವರನ್ನು ಪ್ರಥಮ ಮಹಿಳಾ ಜಗದ್ಗುರು ಎಂದು ಭಕ್ತರು ಗುರುತಿಸಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಮಹಾದೇವಿ ಧಾರವಾಡದಲ್ಲಿ ಅಕ್ಕಮಹಾದೇವಿ ಆಶ್ರಮ ಸ್ಥಾಪನೆ ಮಾಡಿ ಜನಾನುರಾಗಿ ಕೆಲಸ ಆರಂಭಿಸಿದ್ದರು. 5 ನೇ ಏಪ್ರಿಲ್ 1966 ಜಂಗಮ ದೀಕ್ಷೆ ಪಡೆದ ಮಾತೆ ಮಹಾದೇವಿ ವಿಶ್ವದ ಪ್ರಥಮ ಮಹಿಳಾ ಜಗದ್ಗುರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಗಜಕೇಸರಿ, ಐರಾವತ ಬಂದ್ರೂ ಗೆಲ್ಲೋದು ‘ಅಭಿಮನ್ಯು’?ದಚ್ಚು ಪ್ರಚಾರ ಮಾಡಿದ್ರೆ ಸೋಲ್ತಾರೆ ಎಂದ್ರು..?

    ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ಮಂಡ್ಯ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದ್ದು, ಸಿನಿಮಾ ರಂಗದವರು ಬಂದರೆ ಮಂಡ್ಯದ ಜನ ಮರುಳಾಗುವುದಿಲ್ಲ ಎಂದು ಹೇಳಿದ್ದಾರೆ. ‘ಗಜಕೇಸರಿ’, ‘ಐರಾವತ’ ಬಂದರೂ, ಗೆಲ್ಲುವುದು ‘ಅಭಿಮನ್ಯು’ ನಿಖಿಲ್ ಎಂದು ಜೆಡಿಎಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುತ್ತಿದ್ದಾರೆ. ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಚಾರ ಮಾಡಿ ಸಿದ್ದರಾಮಯ್ಯ, ಆನಂದ ಅಪ್ಪುಗೋಳ, ಕೆ….

  • ಸುದ್ದಿ

    ಶೀಘ್ರದಲ್ಲೇ ವಿದ್ಯಾರ್ಥಿಗಳಿಗೆ ಶುಭ ಸುದ್ದಿಯನ್ನು ನೀಡಲಿರುವ ಸಿಎಂ ಯಡಿಯೂರಪ್ಪ,..!

    ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್‍ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಭವಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • inspirational, ಉಪಯುಕ್ತ ಮಾಹಿತಿ

    ಉತ್ತಮ ಆರೋಗ್ಯ ಟಿಪ್ಸ್

    ಇಂದು ವಿಶ್ವ ಆರೋಗ್ಯ ದಿನ ನಾನು ಅನುಸರಿಸುವ ಕೆಲವೊಂದು ಆರೋಗ್ಯ ಟಿಪ್ಸ್ ನಿಮಗೂ ತಿಳಿಸುತ್ತಿದ್ದೇನೆ ತಾವು ಅನುಭವಿಸಿ ಉತ್ತಮವಾದ ಜೀವನಶೈಲಿಗೆ ಹತ್ತು ಆಚರಣೆಗಳು 1. ಪ್ರತಿನಿತ್ಯ 20 ನಿಮಿಷಗಳ ವರೆಗೆ ಧ್ಯಾನ ಮತ್ತು ವ್ಯಾಯಾಮ ಅಥವಾ ವಾಕಿಂಗ್ ಮಾಡೋಣ 2. ಮಿತ ಆಹಾರ ಸೇವನೆ ಮಾಡೋಣ 3. ಸಸ್ಯಾಹಾರಕ್ಕೆ ಬದಲಾಗೋಣ 4. ನಮ್ಮ ನೀರು ಸೇವನೆ ಪ್ರಮಾಣವನ್ನು ಕಾಪಾಡಿಕೊಳ್ಳೋಣ. 5. ಮಲಗುವುದಕ್ಕೆ ಮೂರು ಗಂಟೆ ಮುಂಚೆ ಆಹಾರ ಸೇವನೆ ಮಾಡಲು ಪ್ರಯತ್ನಿಸೋಣ. 6. ನಮ್ಮ ಮಾತುಗಳನ್ನು ಮತ್ತು…