ರಾಜಕೀಯ, ಸಿನಿಮಾ

ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

248

ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು ಒಬ್ಬ ವ್ಯಕ್ತಿಯ ಪರ ಪ್ರಚಾರ ನಡೆಸುವುದು ಸರಿಯಲ್ಲ. ರಾಜಕೀಯಕ್ಕೂ ಅವರಿಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಾವು ಟಿಕೆಟ್ ಗೆ ಕೊಟ್ಟ ಹಣದಲ್ಲಿ ಅವರು ಜೀವನ ನಡೆಸುತ್ತಿದ್ದಾರೆ. ಗೌರವದಿಂದ ಇರುವುದನ್ನು ಬಿಟ್ಟು, ನಮ್ಮ ಪಕ್ಷದ ಮತ್ತು ನಾಯಕರ ಬಗ್ಗೆ ರಾಜಕಾರಣ ಮಾತನಾಡಿದರೆ ಸುಮ್ಮನಿರುವುದಿಲ್ಲ. ನಮ್ಮ ಪಕ್ಷ ಅಧಿಕಾರದಲ್ಲಿದ್ದು, ನಿಮ್ಮ ಅಕ್ರಮಗಳ ಜಾತಕ ಹೊರ ತರಬೇಕಾಗುತ್ತದೆ. ನಮ್ಮ ಪಕ್ಷದ ಮುಖಂಡರ ಬಗ್ಗೆ ಲಘುವಾಗಿ ಮಾತನಾಡಿದರೆ ಸರಿ ಇರಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ನೀವು ಮನೆಯಲ್ಲಿ ಇದ್ದರೆ ನಿಮಗೆ ಗೌರವ, ಇಲ್ಲದಿದ್ದರೆ ದೇವೇಗೌಡ ಕುಟುಂಬದ ಬಗ್ಗೆ ಮಾತನಾಡಿದರೆ ನಿಮಗೆ ತಕ್ಕ ಪಾಠ ಕಲಿಸುತ್ತೇವೆ. ಸರ್ಕಾರ ನಮ್ಮದಿದೆ. ಸುಮ್ಮಿನಿದ್ರೆ ಸರಿ. ಇಲ್ಲಾಂದ್ರೆ ನಿಮ್ಮ ಆಸ್ತಿಪಾಸ್ತಿ ಬಗ್ಗೆ ತನಿಖೆ ನಡೆಸ್ತೀವಿ. ಶೂಟಿಂಗ್ ಮಾಡ್ಕೊಂಡು ಗೌರವವಾಗಿ ಇರಿ. ರಾಜಕಾರಣದ ಬಗ್ಗೆ ಮಾತಾಡಲು ನಿಮಗೆ ಹಕ್ಕಿಲ್ಲ. ನೀವು ಭಾರತ ದೇಶವನ್ನೇ ನೋಡಿಲ್ಲ. ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಹೇಳುವ ಮೂಲಕ ಶಾಸಕರು, ದರ್ಶನ್ ಹಾಗೂ ಯಶ್‍ಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ರಾಜಕೀಯ

    ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?

    ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್‌ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…