ಸಿನಿಮಾ

ನಮ್ಮ ಮೈಯಲ್ಲಿರುವ ರಕ್ತ ತೆಗೆದು ನಿಮ್ಮ ಕಾಲು ತೊಳಿಬೇಕು ಎಂದ ದರ್ಶನ್..!

151

ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್​ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು.

ಮಂಡ್ಯದ ಸಿಲ್ವರ್​ ಜ್ಯುಬಿಲಿ ಪಾರ್ಕ್​ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ಇವತ್ತು ಬಹಳ ಹೆಮ್ಮೆಯಿಂದ ಹೇಳಿಕೊಳ್ಳುತ್ತೇನೆ. ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆನೇ. ಯಾಕೆಂದರೆ ಈ ಉರಿ ಬಿಸಿಲಲ್ಲಿ ಅಲ್ಲಿಂದ ನಮ್ಮ ಜೊತೆ ನಡೆದುಕೊಂಡು ಬಂದಿದ್ದೀರಿ. ನಾನು ತಲಾ ಇಷ್ಟಿಷ್ಟು ಅಂತ ಯಾರಿಗೂ ಕೊಟ್ಟಿಲ್ಲ. ಅಪ್ಪಾಜಿ ಮೇಲಿನ ಪ್ರೀತಿಯಿಂದ ನೀವು ಬಂದಿದ್ದೀರಿ ಎಂದು ಹೇಳಿದರು.

ಇವತ್ತಿಂದ 18 ತಾರೀಕಿನವರೆಗೂ ನಮ್ಮ ಪೆರೇಡ್​ ನಡೆಯುತ್ತಿರುತ್ತದೆ.. ಅಣ್ಣಾ ನಿಮ್ಮ ಸೌಂಡ್​ ಜಾಸ್ತಿ ಇದೆ, ಈ ಸೌಂಡ್​ 18ರ ವರೆಗೂ ಹೀಗೇ ಇರಲಿ. 23ಕ್ಕೆ ರಿಸಲ್ಟ್​ ದಿನ ಮತಗಳು ನಿಮಗೇ ಬಿದ್ದಿರುತ್ತವೆ ಎಂದು ಕಾರ್ಯಕರ್ತರೊಬ್ಬರಿಗೆ ಹೇಳಿದರು.

ಅಮ್ಮ ಇಲ್ಲಿಗೆ ಬಂದು ನಿಂತಿದ್ದಾರೆ. ಅವರ ಮೇಲೆ ನೀವು ತುಂಬಾ ಪ್ರೀತಿ ತೋರುತ್ತಿದ್ದೀರ. ಮೇ 23 ರಂದು ಪಟ ಪಟಾ ಮೇಲೆ ಹೋಗುತ್ತಿರಬೇಕು. ನಮ್ಮನ್ನ ಬೈದೋರು ಕೆಳಗೆ ಹೋಗಬೇಕು. ಅಷ್ಟೇ ನಾನು ಕೇಳಿಕೊಳ್ಳೋದು ಎಂದು ದರ್ಶನ್ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಯಿಂದ ನನಗೆ ಭಯ ಆಗ್ತಿದೆ ಎಂದ ಸುಮಲತಾ ಅಂಬರೀಶ್!ಸಿಎಂ ಹೇಳಿದ್ದೇನು?

    ದಿನೇ ದಿನೇ ಮಂಡ್ಯ ಲೋಕಸಭಾ ಚುನಾವಣಾ ಕಣಾ ರಂಗೆರುತ್ತಿದ್ದು ಚುನಾವಣೆಗೆ ಎರಡು ದಿನ ಇರುವಾಗ ಅವರ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ನಮ್ಮ ಮೇಲೆ ಹಾಕಲು ಯತ್ನಿಸ್ತಿದ್ದಾರೆ ಎನ್ನುವ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಪ್ರಚಾರ ಮಾಡುತ್ತಿದ್ದ ವೇಳೆ ಮಾತನಾಡಿದ ಸುಮಲತಾ, ಒಬ್ಬ ಮುಖ್ಯಮಂತ್ರಿ ಆದವರು ತಮ್ಮ ಪದವಿಯನ್ನು ಮರೆತು ಹೇಗೆಲ್ಲಾ ಮಾತನಾಡುತ್ತಿದ್ದಾರೆ. ನಿಜವಾಗಲೂ ಕಲ್ಲು ಹೊಡೆಸಿ ನಮ್ಮ ಮೇಲೆಯೇ ಗೂಬೆ ಕೂರಿಸಲು ಈ ತರಹದ ಹೇಳಿಕೆ ನೀಡಿದ್ದಾರೆ ಎಂದು ನಮಗೆ ಅನುಮಾನವಾಗುತ್ತಿದ್ದು,  ಮುಖ್ಯಮಂತ್ರಿಯವರ ಹೇಳಿಕೆಗಳಿಂದ ನನಗೆ ಭಯವಾಗ್ತಿದೆ…

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಸುದ್ದಿ

    ಶಿಕ್ಷಣ ಸಚಿವರಿಂದ ರ್ಸರ್ಕಾರಿ ಶಾಲಾ ಶಿಕ್ಷಕರಿಗೊಂದು ಸಂತಸದ ಸುದ್ದಿ….!

    ಸರ್ಕಾರಿ ಪ್ರಾಥಮಿಕ ಮತ್ತುಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಶಿಕ್ಷಕರಕಡ್ಡಾಯ ವರ್ಗಾವಣೆಯನ್ನು ತಡೆ ಹಿಡಿದಿರುವುದಾಗಿ ಸುರೇಶ್ ಕುಮಾರ್ ಹೇಳಿದ್ದು, ಇದರ ಬಗ್ಗೆ ಅಂತಿಮತೀರ್ಮಾನವನ್ನು ನಾಳೆ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದಾಗಿ ಒಂದು ಸ್ಥಳದಲ್ಲಿ ಮತ್ತೊಂದು ಸ್ಥಳಕ್ಕೆಇಷ್ಟವಿಲ್ಲದಿದ್ದರೂ ಹೋಗಬೇಕಾಗಿತ್ತು. ಸದ್ಯಕ್ಕೆ ಪ್ರಕ್ರಿಯೆಯನ್ನು ತಡೆ ಹಿಡಿಯಲಾಗಿದ್ದು, ಪ್ರಸ್ತುತಶಿಕ್ಷಕರು ನಿರಾಳರಾಗಿದ್ದಾರೆ. ಶಿಕ್ಷಕರು ಪರಸ್ಪರ ವರ್ಗಾವಣೆ ಸಹ ಮಾಡಿಕೊಳ್ಳಬಹುದಾಗಿತ್ತು, ಆದರೆ ಇದಕ್ಕೂಸದ್ಯ ತಡೆ ಬಿದ್ದಿದೆಯೋ ಅಥವಾ ಪರಸ್ಪರ ವರ್ಗಾವಣೆ ಚಾಲ್ತಿಯಲ್ಲಿದೆಯೋ ಮಾಹಿತಿಯನ್ನು…

  • inspirational, ಸುದ್ದಿ

    200 ವರ್ಷದ ಹಳೆಯ ಶಿವನ ದೇವಾಲಯ ಪತ್ತೆ ಅಚ್ಚರಿಗೆಗೊಳಗಾದ ಜನ!

    ಸುಮಾರು 200 ವರ್ಷ ಹಳೆಯ ಶಿವಾಲಯ ದೇವಾಲಯವು ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಮರಳು ಗಣಿಗಾರಿಕೆಯ ಸಮಯದಲ್ಲಿ ಈ ದೇಗುಲದ ಗೋಪುರ ಕಾಣಿಸಿಕೊಂಡಿದೆ. ಈ ಗೋಪುರವನ್ನು ಕಲ್ಲುಗಳಿಂದ ಮಾಡಲ್ಪಟ್ಟಿದ್ದು ಇದರ ಹಿನ್ನೆಲೆ ಮರಳಿನಲ್ಲಿ ಕಂಡ ದೇವಾಲಯವನ್ನು ತೆಗೆಯಲು ಸ್ಥಳೀಯರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಇದರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಬೇಕಿದೆ ಎಂದು…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.