ಸಿನಿಮಾ

ದನದ ಮಾಂಸ ತಿನ್ನುತ್ತಿದ್ದ, ಯಾರಿಗೆ ಟೀ ತಂದುಕೊಡುತ್ತಿದ್ದ ಅಂತ ಗೊತ್ತಿದೆ ಅಂತ ದರ್ಶನ್ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ..!

348

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ.

ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ ಜೆಡಿಎಸ್ ನಾಯಕರನ್ನು ಕಾಡುತ್ತಿದೆ.

ಹೀಗಾಗಿ ದರ್ಶನ್ ಹಾಗೂ ಯಶ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಕೆಲ ದಿನಗಳ ಹಿಂದೆ ಕೆ.ಆರ್. ಪೇಟೆ ಕ್ಷೇತ್ರದ ಜೆಡಿಎಸ್ ಶಾಸಕ ನಾರಾಯಣ ಗೌಡ, ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು, ನಟರ ಅಕ್ರಮಗಳ ವಿರುದ್ಧ ತನಿಖೆ ನಡೆಸುತ್ತೇವೆ ಎಂದು ಹೇಳಿದ್ದರು. ಇದೀಗ ಜೆಡಿಎಸ್ ನ ಮತ್ತೊಬ್ಬ ನಾಯಕರು ತಮ್ಮ ನಾಲಿಗೆ ಹರಿ ಬಿಟ್ಟಿದ್ದಾರೆ.

ಜೆಡಿಎಸ್ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸಂತೋಷ್, ದರ್ಶನ್ ಕುರಿತು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದು, ದರ್ಶನ್ ಜೇಬಲ್ಲಿ ದುಡ್ಡಿಲ್ಲದೆ ದನದ ಮಾಂಸದ ಚಾಕಣ ತಿಂತಿದ್ದ. ಆತ ಯಾರಿಗೆ ಟೀ ತಂದು ಕೊಡ್ತಿದ್ದ ಎಂದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ. ಇದು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆಯೇ ದರ್ಶನ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ