ಸುದ್ದಿ

ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

131

ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ.

ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ.

ಅನಿಲ್ ಕುಮಾರ್ ಅವರು ಮೂಡಲ ಮನೆ, ಲಕ್ಷ್ಮೀ ಬಾರಮ್ಮ, ಚಿ ಸೌ ಸಾವಿತ್ರಿ, ಪ್ರೀತಿ ಪ್ರೇಮ, ಅಳಗುಳಿ ಮನೆ, ಮದರಂಗಿ, ಜನುಮದ ಜೋಡಿ ಧಾರಾವಾಹಿಯಲ್ಲಿ ನಟನೆ ಮಾಡಿದ್ದಾರೆ. ಈಗ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ರಾಜ್ಯ ಪ್ರಶಸ್ತಿ ವಿಜೇತ ಪಲ್ಲಟ ಸಿನಿಮಾದಲ್ಲಿ ಅನಿಲ್‍ಕುಮಾರ್ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಹೇಮಂತರಾವ್ ನಿರ್ದೇಶನದ ಕವಲುದಾರಿ ಸಿನಿಮಾದಲ್ಲಿ ನಟಿಸಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗೆಳೆಯ ಅನಿಲ್‍ಕುಮಾರ್ ಅವರನ್ನು ಕಂಡು ದರ್ಶನ್ ಮರುಗಿ, ಸಹಾಯ ಮಾಡಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಪೋಕ್ಸೊ ಕಾಯಿದೆ ಅಡಿ 4 ಆರೋಪಿಗೆ ಜೀವಿತಾವಧಿವರೆಗೂ ಸಜೆ

    ಕೋಲಾರ ಜಿಲ್ಲೆಯ ಕಾಮಸಮುದ್ರಂ ಪೊಲೀಸ್ ಠಾಣೆ, ಬಂಗಾರಪೇಟೆ ತಾಲ್ಲೂಕು, ಕೆ.ಜಿ.ಎಫ್. ಉಪ-ವಿಭಾಗದ ಸರಹದ್ದಿನ ಬಂಗಾರಪೇಟೆ ತಾಲ್ಲೂಕು, ಹೊಸಕೋಟೆ ಗ್ರಾಮದ ವಾಸಿ ಆನಂದ್ ಬಿನ್ ಮುನಿವೆಂಕಟಪ್ಪ ಮತ್ತು ಕೆ.ಜಿ.ಎಫ್. ತಾಲ್ಲೂಕು, ಕ್ಯಾಸಂಬಳ್ಳಿ ಹೋಬಳಿ, ತಿಮ್ಮಾಪುರ ಗ್ರಾಮದ ವಾಸಿ ಕಾಂತ್‌ರಾಜ್ ಬಿನ್ ವೆಂಕಟೇಶಪ್ಪ ಮತ್ತು ಎ.ಕೆ. ಕಾಲೋನಿ, ಕಾಮಸಮದ್ರಂ, ಬಂಗಾರಪೇಟೆ ತಾಲ್ಲೂಕಿನ ವಾಸಿ ಪ್ರವೀಣ್ ಕೆ. ಬಿನ್ ಕೋದಂಡಪ್ಪ, ಮತ್ತು ಬೆಂಗನೂರು ಗ್ರಾಮ, ಬಂಗಾರಪೇಟೆ ತಾಲ್ಲೂಕಿನ ವಾಸಿ ವೇಣು ಬಿನ್ ಗೋವಿಂದಪ್ಪರವರುಗಳು ದಿನಾಂಕ 18-02-2022 ರಂದು ಆಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು…

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ಆರೋಗ್ಯ

    ಯುವಜನರು ಕುಡಿತದ ಪ್ರಮಾಣ ಸಾಕು ಎಂದು ನಿರ್ಧರಿಸುತ್ತಾರೆ, ಹೇಗೆ ಗೊತ್ತಾ???

    ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.