ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದ ವಿಧಾಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೋಲಲು ಇದೇ ಕಾರಣ ಎಂದ ದೇವೇಗೌಡರು..?

110

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ.

ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ದೇವೇಗೌಡ ಹಾಗೂ ಸಿದ್ದರಾಮಯ್ಯ ಮೈತ್ರಿಕೂಟದ ಅಭ್ಯರ್ಥಿಗಳ ಪರವಾಗಿ ಜಂಟಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಇದಕ್ಕೂ ಮುನ್ನ ದೇವೇಗೌಡರು ಈ ಹೇಳಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • inspirational

    ರೆಬೆಲ್ ಆಗಿ ಹೋದವರು ಸೈಲೆಂಟ್ ಆಗಿ ಬಂದರು; ರಾತ್ರೋರಾತ್ರಿ ಬೆಂಗಳೂರಿಗೆ ಬಂದಿಳಿದ ಅನರ್ಹ ಶಾಸಕರು…!

    ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್,ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ ನಾಗರಾಜ್, ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್ ನಿನ್ನೆ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬೆಂಗಳೂರು (ಜು.29): ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವ 14 ಶಾಸಕರನ್ನು ನಿನ್ನೆ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು. ಅದರ ಬೆನ್ನಲ್ಲೇ ಮುಂಬೈನಲ್ಲಿದ್ದ 6 ಅತೃಪ್ತ ಶಾಸಕರು ನಿನ್ನೆ ಮಧ್ಯರಾತ್ರಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.  ರಾಜೀನಾಮೆ ನೀಡಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಶಿವರಾಮ್ ಹೆಬ್ಬಾರ್, ಭೈರತಿ ಬಸವರಾಜು, ಮುನಿರತ್ನ, ಎಂಟಿಬಿ…

  • ವಿಚಿತ್ರ ಆದರೂ ಸತ್ಯ

    ಈ ವ್ಯಕ್ತಿಯ ಹೊಟ್ಟೆಯಲ್ಲಿ ಸಿಕ್ಕಿದ್ವು,ಬರೋಬರಿ 70ಕ್ಕಿಂತ ಹೆಚ್ಚು ನಾಣ್ಯಗಳು..!ಇದು ಹೇಗೆ ಸಾಧ್ಯ ಅಂತೀರಾ…

    ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.

  • ಉಪಯುಕ್ತ ಮಾಹಿತಿ

    ನಿಮಗೆ ಕೊಟ್ಟಿರುವ ಚೆಕ್ ಬೌನ್ಸ್ ಆದರೆ ಏನು ಮಾಡಬೇಕು,ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ‌.

    ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…

  • ಸುದ್ದಿ

    ಬಸ್ ಪ್ರಯಾಣಿಕರಿಗೊಂದು ‘ಗುಡ್ ನ್ಯೂಸ್’…!

    ಸಾರಿಗೆ ಸಚಿವರಾಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿದ್ದಾರೆ.ಪ್ರಯಾಣಿಕರೊಂದಿಗೆ ಪದ ಬಳಕೆಯ ಬದಲಿಸಿಕೊಳ್ಳಿ. ಸರ್, ಮೇಡಂ, ಅಣ್ಣ ಅಕ್ಕ ಎಂದು ಹೇಳುವುದು ಸೂಕ್ತ ಎಂದು ತಿಳಿಸಿದ್ದಾರೆ. ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ಸಾರಿಗೆ ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೆ ಸಲಹೆ ನೀಡಿರುವ ಡಿಸಿಎಂ ಲಕ್ಷ್ಮಣ ಸವದಿ, ಸ್ವಂತ ವಾಹನವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಸಾರಿಗೆ ಸಂಸ್ಥೆಗಳ ಮೇಲೆಯು ಅದೇ ಭಾವನೆ ಹೊಂದಬೇಕೆಂದು ತಿಳಿಸಿದ್ದಾರೆ. ಬಸ್ ಚಾಲಕ, ನಿರ್ವಾಹಕರೊಬ್ಬರು ಮಾಡುವ ಕೆಲಸದಿಂದ…

  • ಭವಿಷ್ಯ

    ಫೆಬ್ರವರಿಯಲ್ಲಿ ‘ಮೋದಿ’ಗೆ ಗಂಡಾಂತರ..!ಕಿಂಗ್ ಮೇಕರ್ ಆಗಲಿದ್ದಾರೆ “ಎಚ್’ಡಿಕೆ”!ಈ ಗುರೂಜಿಯಿಂದ ಭವಿಷ್ಯ…

    ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.