ಸುದ್ದಿ

ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

72

ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ,

ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ ವಿಶ್ವಾಸವಿದೆ ಎಂದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನಿಖಿಲ್‍ನನ್ನು ಸೋಲಿಸಲು ರೂಪಿಸಿರುವ ಚಕ್ರವ್ಯೂಹಕ್ಕೆ ಮೇ.23ರಂದು ಚುನಾವಣಾ ಫಲಿತಾಂಶ ಹೊರಬಂದ ನಂತರ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.ಕಳೆದ ಮೂರು ತಿಂಗಳಿನಿಂದಲೂ ಮಂಡ್ಯದಲ್ಲಿ ಜೆಡಿಎಸ್ ಮಣಿಸಲು ಕಾರ್ಯತಂತ್ರವನ್ನು ಹೆಣೆಯಲಾಗಿದೆ.

ಆದರೆ ಸ್ಥಳೀಯ ಪರಿಸ್ಥಿತಿಯೇ ಭಿನ್ನವಾಗಿದೆ. ಯಾರು ಸರಿಯಾದ ದುಡಿಮೆ ಮಾಡುತ್ತಾರೆ ಎಂಬುದು ಅಲ್ಲಿನ ಜನರಿಗೆ ಗೊತ್ತಿದೆ. ದುಡಿಮೆ ಮಾಡುವವರನ್ನು ಜನರು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಮೇ 23 ರಂದು ಫಲಿತಾಂಶ, ಮೇ 24 ರಿಂದ ಹೊಸ ಸರ್ಕಾರ…..

    ನವದೆಹಲಿ: ಸುದೀರ್ಘವಾಗಿ ನಡೆದ ಲೋಕಸಭೆ ಚುನಾವಣೆ ಫಲಿತಾಂಶ ಮೇ 23 ರಂದು ಪ್ರಕಟವಾಗಲಿದೆ. ಕೊನೆ ಹಂತದ ಮತದಾನ ಮುಗಿದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾಗಿದ್ದು, ಎನ್.ಡಿ.ಎ. ಬಹುಮತ ಗಳಿಸಲಿದೆ ಎಂದು ಬಹುತೇಕ ಸಮೀಕ್ಷೆಗಳಲ್ಲಿ ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 24 ರಂದು ಹೊಸ ಸರ್ಕಾರ ರಚನೆಗೆ ನಾಯಕರು ತಯಾರಿ ನಡೆಸಿದ್ದಾರೆ. ಬಿಜೆಪಿ ನೇತೃತ್ವದ ಎನ್.ಡಿ.ಎ. ಪಕ್ಷಗಳ ನಾಯಕರು ನಾಳೆ ದೆಹಲಿಗೆ ತೆರಳಿ ಸಭೆ ನಡೆಸಲಿದ್ದಾರೆ.ಪ್ರ ಧಾನಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿಯ ಹಿರಿಯ…

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…

  • ಸುದ್ದಿ

    ಇನ್ಫೋಸಿಸ್ ಉದ್ಯೋಗಿಗಳಿಗೆ ಕಾದಿದೆ ಒಂದು ಶಾಕಿಂಗ್ ಸುದ್ದಿ ; 10000 ಸಿಬ್ಬಂದಿ ಕೆಲಸಕ್ಕೆ ಕತ್ತರಿ..! ಯಾಕೆ ಗೊತ್ತಾ?

    ಉದ್ಯೋಗ ಹಂತ 6ರಲ್ಲಿ ಬರುವ ಹಿರಿಯ ಮ್ಯಾನೇಜರ್‌ಗಳ ಕೆಲಸಕ್ಕೆ ಇದೀಗ ಕುತ್ತು ಬಂದಿದೆ. ಇನ್ಫೋಸಿಸ್ನ ಹಂತ 6,7, ಹಾಗೂ 8ರಲ್ಲಿ ಒಟ್ಟು 30,092 ಉದ್ಯೋಗಿಗಳು ಇದೀಗ ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ 2,200 ಮಂದಿ ಉದ್ಯೋಗ ಕಳೆದು ಕೊಳ್ಳಲಿದ್ದಾರೆ. ಇತ್ತೀಚೆಗಷ್ಟೇ ಐಟಿ ದ್ಯತ್ಯ ಕಾಗ್ನಿಜೆಂಟ್ಸಂಸ್ಥೆ ಕೂಡಾ ತನ್ನ 13,000 ನೌಕರರನ್ನು ಕೆಲಸದಿಂದ ಕಿತ್ತು ಹಾಕಿತ್ತು. ಇನ್ಫೋಸಿಸ್ಕೂಡಾ ಇದೀಗ ಕಾಗ್ನಿಜೆಂಟ್ ಹಾದಿಯನ್ನೇ ತುಳಿಯುತ್ತಿದೆ. ಹಿರಿಯ ಉದ್ಯೋಗಿಗಳ ಕಥೆ ಹೀಗಾದ್ರೆ, ಕಿರಿಯ ಉದ್ಯೋಗಿಗಳೂ ಕೂಡಾ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ….

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ಸುದ್ದಿ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅನಾಹುತ

    ಕೆಮಿಕಲ್ ಗೋಡಾನ್‍ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್‍ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್‍ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್‍ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…