ಆಧ್ಯಾತ್ಮ

ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

1361

ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು,  ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ  ತೆಂಗಿನ ಕಾಯಿಗೆ ವಿಶೇಷವಾದ  ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

ತನ್ನ ವೈಷ್ಟ್ಯದಿಂದ ತೆಂಗಿನಕಾಯಿ ಶ್ರೀಫಲಗಳ ಸಾಲಿನಲ್ಲಿ ಸ್ಥಾನಪಡೆದಿದ್ದು, ಎಲ್ಲಕ್ಕಿಂತ ಹೆಚ್ಚು ಸಾತ್ವಿಕ ಶಕ್ತಿಯನ್ನು ಹೊಂದಿದ್ದು, ಪೂಜೆ ಮಾಡುವವರಿಗೂ ಸಾತ್ವಿಕ ಶಕ್ತಿಯನ್ನು ನೀಡುವ ಫಲವಾಗಿದೆ. ಹಲವು ವಿಶೇಷತೆಗಳನ್ನು ಹೊಂದಿರುವ ತೆಂಗಿನಕಾಯಿ ಅಥವಾ ಶ್ರೀಫಲವನ್ನು ದೇವಾಲಯಗಳಲ್ಲಿ ಅಥವಾ ಮನೆಗಳಲ್ಲೇ ದೇವರಿಗೆ ಅರ್ಪಿಸುವುದಕ್ಕೆ ಮಹತ್ವದ ಕಾರಣವಿದೆ. ಎಲ್ಲಾ ಸಮಯದಲ್ಲೂ ಲಭ್ಯವಿರುವ ಫಲ ಎನ್ನುವ ಕಾರಣ ಒಂದೇ ಅಲ್ಲದೇ, ತತ್ವಜ್ಞಾನದ ಆಳವಾದ ಅರ್ಥವನ್ನು ಹೊಂದಿದೆ.

ತೆಂಗಿನಕಾಯಿಯನ್ನು ದೇವರಿಗೆ ಅರ್ಪಿಸುವವರೆಗೂ ಅಂದರೆ ಅದನ್ನು ಒಡೆಯುವವರೆಗೂ ತೆಂಗಿನ ಕಾಯಿಯಲ್ಲಿರುವ ಸೇವಿಸಬಹುದಾದ ಭಾಗವನ್ನು ಪಡೆಯಲು ಸಾಧ್ಯವಿರುವುದಿಲ್ಲ. ಒಮ್ಮೆ ತೆಂಗಿನ ಕಾಯಿಯನ್ನು ಒಡೆದರೆ ಅದರಲ್ಲಿರುವ ನೀರು ಹಾಗೂ ಒಳಭಾಗದಲ್ಲಿರುವ ಪದಾರ್ಥ ದೇವರಿಗೆ ನೈವೇದ್ಯವಾಗಲಿದೆ.

ತೆಂಗಿನ ಕಾಯಿಯ ಮೇಲ್ಭಾಗದಲ್ಲಿರುವ ಕರಟ ಮನುಷ್ಯನ ಅಹಂಕಾರವನ್ನು ಪ್ರತಿನಿಧಿಸುತ್ತದೆ. ಒಳಗಿರುವ ಸಿಹಿ ನೀರು ಹಾಗೂ ಸೇವಿಸಬಹುದಾದ ಪದಾರ್ಥ ಸಾತ್ವಿಕತೆ, ಮೃದುತ್ವವನ್ನು ಪ್ರತಿನಿಧಿಸುತ್ತದೆ. ಅಹಂಕಾರವನ್ನು ಪ್ರತಿನಿಧಿಸುವ ಕರಟವನ್ನು ಒಡೆದಿ ಒಳಗಿರುವ ಸಾತ್ವಿಕತೆಯಿಂದ ದೇವರನ್ನು ಪ್ರಾರ್ಥಿಸಿದರೆ ಅಂತರಾತ್ಮ ಶುದ್ಧಿಗೆ ಸಹಕಾರಿಯಾಗಲಿದೆ ಎಂಬ ನಂಬಿಕೆಯೂ ಇದೆ.

ತೆಂಗಿನಕಾಯಿಯ ಕರಟದಂತಹ ಕಠಿಣ ಅಹಂಕಾರವನ್ನು ಭಂಜಿಸಿದರೆ ಪರಮಾತ್ಮನ ಸಾಕ್ಷಾತ್ಕಾರ ಹಾಗೂ ಪರಮಸತ್ಯದ ಸಾಕ್ಷಾತ್ಕಾರದ ಹಾದಿ ಸುಗಮ ಎಂಬುದು ಸನಾತನ ಧರ್ಮದ ಬೋಧನೆಯಾಗಿದ್ದು, ಇದನ್ನು ತಿಳಿಸಲು ಶ್ರೀಫಲವಾಗಿರುವ  ತೆಂಗಿನಕಾಯಿಯನ್ನು ರೂಪಕವಾಗಿ ಉದಾಹರಣೆ ನೀಡಲಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ವರ್ಷವೂ ಗೂಗಲ್ ಸರ್ಚ್​ನಲ್ಲಿ ನಂ 1 ಸ್ಥಾನ ಉಳಿಸಿಕೊಂಡ ಸೆಲಿಬ್ರೆಟಿ…ಯಾರು ಗೊತ್ತೇ ?

    ಪ್ರತಿವರ್ಷದ ಹಾಗೆಯೇ ಈ ವರ್ಷವು ಕೂಡ ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ? ಎಂಬ ಪ್ರಶ್ನೆಗೆ ಅಚ್ಚರಿಯ ಉತ್ತರವೊಂದು ಸಿಕ್ಕಿದೆ ಏನಪ್ಪಾ ಅದು ಅಂತೀರಾ? ಹೌದು ಈ ವರ್ಷದ ಅರ್ಧದಷ್ಟು ಭಾಗ ಈಗಾಗಲೇ ಮುಗಿದಿದೆ. ಇನ್ನೂ ಈ ವರ್ಷದಲ್ಲಿ ಅತೀ ಹೆಚ್ಚು ಗೂಗಲ್ ನಲ್ಲಿ ಸರ್ಚ್​ ಆದವರು ಯಾರು ಎಂಬ ಕುತೂಹಲ ಎಲ್ಲರಿಗೂ ಇರುತ್ತದೆ. ಆದರೆ ಈ ಭಾರಿ ಅತಿ ಹೆಚ್ಚು ಸರ್ಚ್​ಗೊಳಗಾದವರು ಯಾರು ಎಂಬ ಪ್ರಶ್ನೆಗೆ ನಿಮ್ಮ ಉತ್ತರ ಮೋದಿ ಎಂದಾಗಿದ್ದಲ್ಲಿ ತಪ್ಪು. ಇಷ್ಟಕ್ಕೂ…

  • ವ್ಯಕ್ತಿ ವಿಶೇಷಣ

    ‘ಗೂಗಲ್’ ಕಂಪನಿಯ ಸಿಇಒ ಭಾರತೀಯರಾದ ‘ಸುಂದರ್ ಪಿಚೈ ‘..!ಬಗ್ಗೆ ತಿಳಿಯಲು ಈ ಲೇಖನ ಓದಿ …

    ಸುಂದರ್‌ ಪಿಚೈ ಅವರು ಮೊದಲು ಕಂಪನಿಯ ಇಂಟರ್‌ ನೆಟ್‌ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್‌ ಮತ್ತು ಇಂಜಿನಿಯರಿಂಗ್‌ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಆಧ್ಯಾತ್ಮ

    ಶ್ರೀ ಲಲಿತಾಸಹಸ್ರನಾಮ ಸ್ತೋತ್ರಂ ಅರ್ಥ

    ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…