ಸುದ್ದಿ

ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

155

ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ ಬಗ್ಗೆ ಚರ್ಚೆ ಮಾಡುತ್ತಾರೋ ಎಂದು ವ್ಯಂಗ್ಯವಾಡಿದ್ರು.

ಸುಮಲತಾ ಅವರ ಅಭಿವೃದ್ಧಿ ಏನಿದೆ ಎಂದು ಮತ್ತೆ ಪ್ರಶ್ನಿಸಿದ ಸಿಎಂ, ಅವರು ಇಲ್ಲಿ ಏನು ಅಭಿವೃದ್ಧಿ ಮಾಡಿದ್ದಾರೆ. ಅಂಬರೀಶ್ ಸಂಸದರಾಗಿದ್ದಾಗ ಜನರ ಕಷ್ಟ-ಸುಖ ಕೇಳಿದ್ದಾರಾ. ಅಭಿವೃದ್ಧಿ ಬಗ್ಗೆ ಇವರ ಬಳಿ ನಾವು ಪಾಠ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಅಲೆ ಇದೆ. ನನಗೆ ಯಾವುದೇ ರೀತಿಯ ಆತಂಕಗಳು ಇಲ್ಲ. ಮಂಡ್ಯ ಜಿಲ್ಲೆಯ ಜನತೆ ಈಗಾಗಲೇ ತೀರ್ಮಾನ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯನ್ನ ಆಯ್ಕೆ ಮಾಡಿ ಅಭಿವೃದ್ಧಿಗೆ ಚಾಲನೆ ಕೊಡುವ ದೃಷ್ಟಿಯಿಂದ ಈ ಅವಕಾಶವನ್ನು ಉಪಯೋಗ ಮಾಡಿಕೊಳ್ಳುವ ನಿರ್ಧಾರದಲ್ಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೀರೋ ಪಾತ್ರಕ್ಕೆ ಪ್ರಮೋಷನ್ ಪಡೆದ ಕಮಿಡಿಯನ್ ಚಿಕ್ಕಣ್ಣ…!

    ಶರಣ್ ಮತ್ತು ಕೋಮಲ್ ನಂತರ ಮತ್ತೊಬ್ಬ ಹಾಸ್ಯನಟ ಚಿಕ್ಕಣ್ಣ ಹೀರೋ ಆಗಿ ಬದಲಾಗುತ್ತಿದ್ದಾರೆ. ಉಪಮಾತಿ ಬ್ಯಾನರ್ ನಲ್ಲಿ ಚಿಕ್ಕಣ್ಣ ಹೀರೋ ಆಗಿ ನಟಿಸುತ್ತಿದ್ದಾರೆ. ರಾಬರ್ಟ್, ಮದಗಜ ನಿರ್ದೇಶಕ ಮಂಜು ಮಾಂಡವ್ಯ ಚಿಕ್ಕಣ್ಣ ನಟನೆಯ ಇನ್ನೂ ಹೆಸರಿಡದ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಮೊದಲು ಭರತ ಬಾಹುಬಲಿ ಎಂಬ ಸಿನಿಮಾದಲ್ಲಿ ಮಂಜು ಮಾಂಡವ್ಯ ಮತ್ತು ಚಿಕ್ಕಣ್ಣ ಜೊತೆಯಾಗಿ ನಟಿಸುತ್ತಿದ್ದಾರೆ,.ಇದೇ ಸಿನಿಮಾದಲ್ಲಿ ನಿರ್ದೇಶಕರಾಗಿದ್ದ ಮಂಜು ಮಾಂಡವ್ಯ ನಟನಾಗಿ ಪಾದಾರ್ಪಣೆ ಮಾಡಿದ್ದಾರೆ. 9 ವರ್ಷಗಳಿಂದ ಸ್ಯಾಂಡಲ್ ವುಡ್ ನಲ್ಲಿ ಹಲವು ಸಿನಿಮಾಗಳಲ್ಲಿ…

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಸಿನಿಮಾ

    ಮಂಡ್ಯದ ಗಂಡು ತಮ್ಮ ಹುಟ್ಟುಹಬ್ಬದಲ್ಲಿ ಅಭಿಮಾನಿಗಳಿಗೆ ಹೇಳಿದ್ದಾದರೂ ಏನು ???

    ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್‍ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

  • ಸುದ್ದಿ

    ‘ಪಾರು’ ಧಾರಾವಾಹಿಯ ನಟಿ ಮೋಕ್ಷಿತಾ ಪೈ ಮಾಡಿದ ಕೆಲಸಕ್ಕೆ ಎಲ್ಲರು ಮೆಚ್ಚಲೇಬೇಕು…

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್‌’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….

  • ಸುದ್ದಿ

    ಸರ್ಕಾರದ 100 ದಿನದ ಸಾಧನೆಯ ಪುಸ್ತಕ ನಾಳೆ ಬಿಡುಗಡೆಯಾಗಲಿದೆ,.!

     ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…