ಸ್ಪೂರ್ತಿ

ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

197

19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ.

ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ.

ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು ಯುವತಿ ತಂದೆ ಮೇಲಿಟ್ಟಿರುವ ಪ್ರೀತಿಗೆ ಮನಸೋತಿದ್ದು, ಟ್ವೀಟ್ ಮಾಡಿ ಯುವತಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

೧೯ ವರ್ಷದ ರಾಖಿ ದತ್ತ ಲಿವರ್‍ನ ಕಾಯಿಲೆಯಿಂದ ಬಳಲುತ್ತಿದ್ದ 65 ವರ್ಷದ ತಂದೆಗೆ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಉಳಿದುಕೊಳ್ಳುತ್ತದೆ, ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾಗಬಹುದು ಎನ್ನುವುದನ್ನೂ ಯೋಚಿಸದೇ ತಂದೆಯ ಜೀವ ಉಳಿಸಿದ್ದಾಳೆ. ಹೆಣ್ಣು ಮಕ್ಕಳಿಗೆ ತಂದೆ ಎಂದರೆ ವಿಶೇಷ ಪ್ರೀತಿ ಇರುತ್ತೆ. ಹೆಣ್ಣು ಮಕ್ಕಳು ಎಂದರೆ ಮೂಗು ಮುರಿಯುವರಿಗೆ ಇದೊಂದು ಉತ್ತಮ ಉದಾಹರಣೆ ಎಂದು ಗೋಯೆಂಕಾ ಟ್ವೀಟ್ ಮಾಡಿದ್ದಾರೆ.

ಸದ್ಯ ಈ ಟ್ವೀಟ್ ಸಖತ್ ವೈರಲ್ ಆಗಿದ್ದು, ಈ ಟ್ವೀಟ್ ಅನ್ನು 22 ಸಾವಿರಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೇ 5 ಸಾವಿರಕ್ಕೂ ಹೆಚ್ಚು ಬಾರಿ ರಿಟ್ವೀಟ್ ಆಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದುವೆಯನ್ನೇ ಕ್ಯಾನ್ಸಲ್ ಮಾಡಿದ ವಧು ಕಾರಣ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಗ್ಯಾಜೆಟ್, ತಂತ್ರಜ್ಞಾನ

    ಈಗ ಯೂಟ್ಯೂಬ್ ವಿಡಿಯೋವನ್ನು ವಾಟ್ಸ್‌ಆಪ್‌ನಲ್ಲೇ ನೋಡಬಹುದು..!ಹೇಗೆ ಗೊತ್ತಾ..?ತಿಳಿಯಲು ಇದನ್ನು ಓದಿ ..

    ದೇಶದಲ್ಲಿ ನಡೆಯುತ್ತಿರುವ ಮೊಬೈಲ್ ಡೇಟಾ ಕ್ರಾಂತಿ ಇಡೀ ವಿಶ್ವವನ್ನು ನಮ್ಮ ಕಡೆಗೆ ತಿರುಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಗೂಗಲ್-ಫೇಸ್‌ಬುಕ್‌ ಸೇರಿದಂತೆ ಎಲ್ಲಾ ದೈತ್ಯ ಕಂಪನಿಗಳು ಭಾರತದ ಕಡೆಗೆ ಹೆಚ್ಚಿನ ಒಲವು ತೋರಿಸುತ್ತಿದ್ದು, ಭಾರತೀಯರಿಗಾಗಿಗೇ ಸೇವೆಗಳನ್ನು ನೀಡಲು ಮುಂದಾಗಿವೆ.

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • ಬ್ಯಾಂಕ್

    2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !

    ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. ಈ ವರ್ಷ ಸೆಪ್ಟೆಂಬರ್‌ 30ವರೆಗೂ ನೋಟು ವಿನಿಮಯಕ್ಕೆ ಕಾಲಾವಕಾಶ ನೀಡಲಾಗಿದೆ. ಮೇ 23 ರಿಂದ ಸಮೀಪದ ಬ್ಯಾಂಕ್‌ಗಳಿಗೆ ತೆರಳಿ ಸಾರ್ವಜನಿಕರು ನೋಟು ಬದಲಾವಣೆ ಮಾಡಿಕೊಳ್ಳಬಹುದು. ಇದಕ್ಕಾಗಿ ಬ್ಯಾಂಕ್‌ಗಳಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ದೇಶಾದ್ಯಂತ 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧಾರ. 2023 ಸೆಪ್ಟೆಂಬರ್ 30 ರೊಳಗೆ ಅವುಗಳನ್ನು ವಿನಿಮಯ…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…