ಕ್ರೀಡೆ, ಸಿನಿಮಾ

ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

143

ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ.

ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ರಾಯಲ್ ಚಾಲೆಂಜರ್ಸ್ ಕೂಡ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬದ ಬಗ್ಗೆ ಟ್ವೀಟ್ ಮಾಡಿತ್ತು. ರಾಯಲ್ ಚಾಲೆಂಜರ್ಸ್ ತನ್ನ ಟ್ವಿಟ್ಟರ್ ಖಾತೆಯಲ್ಲಿ, “ಅಣ್ಣಾವ್ರ ಹುಟ್ಟುಹಬ್ಬವನ್ನು ಯಾವ ರೀತಿ ಆಚರಿಸಿದ್ದೇವೆ, ಅಲ್ವಾ?” ಎಂದು ಬರೆದು ಹುಟ್ಟುಹಬ್ಬದ ಶುಭಾಶಯಗಳು ಡಾ. ರಾಜ್‍ಕುಮಾರ್ ಎಂದು ಹ್ಯಾಶ್‍ಟ್ಯಾಗ್ ಬಳಸಿ ಟ್ವೀಟ್ ಮಾಡಿತ್ತು.

ಇನ್ನೊಂದು ವಿಶೇಷ ಏನೆಂದರೆ ಆರ್‌ಸಿಬಿ ಪಂದ್ಯವನ್ನು ವೀಕ್ಷಿಸಲು ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಆಗಮಿಸಿದರು. ಶಿವರಾಜ್‍ಕುಮಾರ್ ಅವರ ಜೊತೆ ನಿರ್ದೇಶಕ ರಘುರಾಮ್ ಹಾಗೂ ನಿರ್ಮಾಪಕ ಶ್ರೀಕಾಂತ್ ಆಗಮಿಸಿದರು. ಮೂವರು ಪಂದ್ಯವನ್ನು ಸಾಕಷ್ಟು ಎಂಜಾಯ್ ಮಾಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ..ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ

    ದೇವರಿಗೆ ಅಗರಬತ್ತಿ ಹಚ್ಚಿ ಪೂಜೆ ಮಾಡುವುದು ಏಕೆ ಗೊತ್ತಾ?ಇದರ ಹಿಂದೆ ಕಾರಣ…

    ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸಿನಿಮಾ

    ಲೈಂಗಿಕ ಕಿರುಕುಳದ ಆರೋಪ ಮಾಡಿದ್ದ ನಟಿ ವಿಜಯಲಕ್ಷ್ಮಿ ವಿರುದ್ದವೇ ದೂರು ಕೊಟ್ಟ ನಟ..!

    ಸ್ಪತ್ರೆಯಲ್ಲಿದ್ದ ಸಂದರ್ಭದಲ್ಲಿ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಿದ ನಟ ರವಿ ಪ್ರಕಾಶ್ ಅವರ ವಿರುದ್ಧ ನಟಿ ವಿಜಯಲಕ್ಷ್ಮಿ ಲೈಂಗಿಕ ಕಿರುಕುಳ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತಾಗಿ ನಟ ರವಿಪ್ರಕಾಶ್ ಸ್ಪಷ್ಟನೆ ನೀಡಿದ್ದು, ತಾವು ಯಾವುದೇ ಕಿರುಕುಳ ನೀಡಿಲ್ಲ. ಅವರಿಗೆ ಹಣಕಾಸು ನೆರವು ನೀಡಿ, ಅವರನ್ನು 2  ಬಾರಿ ಭೇಟಿ ಮಾಡಿದ್ದೇನೆ ಹೊರತು, ಯಾವುದೇ ಕಿರುಕುಳ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಇದಾದ ಬಳಿಕ ರವಿಪ್ರಕಾಶ್ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟಿ…