ಸುದ್ದಿ

ಕುಮಾರಸ್ವಾಮಿಯವರು ಆಪರೇಷನ್ ಕಮಲಕ್ಕೆ ಬೆಚ್ಚಿಬಿದ್ರಾ..?ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇಕೆ..?

115

ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್‍ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್‍ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ. ಸಭೆಯಲ್ಲಿ ಆಪರೇಷನ್ ಕಮಲದ ಬಗ್ಗೆ, ಲೋಕಸಭೆ ಕ್ಷೇತ್ರಗಳಲ್ಲಿನ ಸ್ಥಿತಿಗತಿ ಮತ್ತು ಶಾಸಕರ ಕ್ಷೇತ್ರವಾರು ಸಮಸ್ಯೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ರಮೇಶ್ ಜಾರಕಿಹೊಳಿ ಅವರ ಜೊತೆ ಮೈತ್ರಿ ಪಕ್ಷದ ಶಾಸಕರು ಸ್ನೇಹಿತರಾಗಿದ್ದಾರೆ. ಈ ನಿಟ್ಟಿನಲ್ಲಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಿಎಂ ನಿರ್ಧಾರ ಮಾಡಿದ್ದಾರೆ. ಹೀಗಾಗಿ ಶಾಸಕರು ಯಾರೂ ಯಾವುದೇ ಆಮಿಷಕ್ಕೆ ಬಲಿಯಾಗಬಾರದು. ಆಪರೇಷನ್ ಕಮಲ ಸಾಧ್ಯತೆ ಇದೆ. ಒಂದು ವೇಳೆ ಬಿಜೆಪಿಯಿಂದ ಆಫರ್ ಬಂದರೆ ತಕ್ಷಣವೇ ತಿಳಿಸಿ ಎಂದು ಸಿಎಂ ಈಗಾಗಲೇ ಶಾಸಕರಿಗೆ ಸೂಚಿಸಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…