ಸುದ್ದಿ

ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

298

ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ.

ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ.

ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ ಸಭೆ ನಡೆಸಲಾಗಿತ್ತು.

ಅಲ್ಲದೆ ವಿಶೇಷ ತರಗತಿ ನಡೆಸಲು ಸೂಚಿಸಿದ್ದರು. ಇದೇ ಮುಖ್ಯ ಕಾರಣ ಎಂದು ಹೇಳಿದ್ದಾರೆ.ನಾನು ಸಚಿವನಾದ ಬಳಿಕ ವಿಶೇಷ ತರಬೇತಿ ನಡೆಸಲು ಸೂಚಿಸಿದ್ದೆ ಅದರೆ ಕೆಲವು ಶಾಲೆಗಳಲ್ಲಿ ಭಾನುವಾರವೂ ಶಿಕ್ಷಕರು ತರಗತಿ ಮಾಡಿದ್ದಾರೆ.

ಹಾಸನಕ್ಕೆ ಉತ್ತಮ ಫಲಿತಾಂಶ ಬಂದ ಶಾಲೆಗೆ ಶಿಕ್ಷಕರಿಗೆ ಮುಖ್ಯಮಂತ್ರಿಗಳನ್ನು ಕರೆಸಿ ಸನ್ಮಾನ ಮಾಡುವುದಾಗಿ ಹೇಳಿದ್ದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ