ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಲ್ಲಿ ಪೋಷಕ ಪಾತ್ರಗಳ ಭಾವಪೂರ್ಣ ಅಭಿನಯದಿಂದಲೇ ಜನ ಮಾನಸವನ್ನು ಆವರಿಸಿಕೊಂಡಿರುವವರು ದಿವಂಗತ ಅಶ್ವತ್ಥ್. ಇಂಥಾ ಅಭಿಜಾತ ಕಲಾವಿದನ ಪುತ್ರ ಶಂಕರ್ ಅಶ್ವತ್ಥ್ ಕಷ್ಟ ನೀಗಿಕೊಳ್ಳಲು ಮೈಸೂರಿನಲ್ಲಿ ಊಬರ್ ಕ್ಯಾಬ್ ಡ್ರೈವರ್ ಆಗಿದ್ದಾರೆಂಬ ಸುದ್ದಿ ಈವತ್ತು ಎಲ್ಲೆಡೆ ಪ್ರಚಾರ ಪಡೆದುಕೊಂಡಿತ್ತಲ್ಲಾ? ಅದು ಗೊತ್ತಾದ ಕೂಡಲೆ ಕೆಲಸ ಕಾರ್ಯ ಬಿಟ್ಟು ಮೈಸೂರಿಗೆ ತೆರಳಿರೋ ಪ್ರಥಮ್ ತಮ್ಮ ‘ಬಿಲ್ಡಪ್ ಚಿತ್ರದಲ್ಲಿ ನಟಿಸೋ ಅವಕಾಶವನ್ನ ಶಂಕರ್ ಅಶ್ವತ್ಥ್ಗೆ ಕೊಟ್ಟು ಜೊತೆಗೆ ಅಡ್ವಾನ್ಸ್ ರೂಪದಲ್ಲಿ ಬ್ಲ್ಯಾಂಕ್ ಚೆಕ್ ಕೊಡೋ ಮೂಲಕ ಆಪತ್ಭಾಂಧವನಾಗಿದ್ದಾರೆ. ಈವತ್ತು…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.