ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ.
ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ.
ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ ದೊಡ್ಡಕೆಂಪೇಗೌಡ ಅವರಿಗೆ ಹಾವು ಕಾಣಿಸಿಕೊಂಡಿದ್ದು, 7 ಹೆಡೆಯ ಸರ್ಪ ಹೋಗುತ್ತಿದೆ ನೋಡಬನ್ನಿ ಎಂದು ಕೆಲಸಗಾರರನ್ನು ಅವರು ಕರೆದಿದ್ದಾರೆ.
ಆದರೆ, ಹಾವು ಕಾಣಿಸದ ಕಾರಣ, ಅವರ ಮಾತನ್ನು ಕೇಳಿ ಕೆಲಸಗಾರರು ನಕ್ಕಿದ್ದಾರೆ. ಈಗ 7 ಹೆಡೆ ಸರ್ಪದ ಪೊರೆ ಕಂಡುಬಂದಿರುವುದು ಕುತೂಹಲ ಮೂಡಿಸಿದೆ.
ಸುತ್ತಮುತ್ತಲಿನ ಪ್ರದೇಶದಲ್ಲಿ 7 ಹೆಡೆಯ ಸರ್ಪ ಇರಬಹುದೆಂದು ಜನ ಮಾತಾಡಿಕೊಂಡಿದ್ದು, 7 ಹೆಡೆಯ ಹಾವಿನ ಪೊರೆ ನೋಡಲು ಮುಗಿಬಿದ್ದಿದ್ದಾರೆ. ವಿಷಯ ತಿಳಿದ ಅಕ್ಕ ಪಕ್ಕದ ಗ್ರಾಮಸ್ಥರು ಕೂಡ ಆಗಮಿಸಿ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್…