ಉಪಯುಕ್ತ ಮಾಹಿತಿ

ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

53

ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ.

ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್ ಮಾಡಿದರೆ ಅವರ ಖಾತೆಗಳನ್ನು ನಿಷೇಧಿಸಲಾಗುತ್ತದೆ ಎಂದು ತಿಳಿಸಿದೆ.ಫೇಸ್‌ಬುಕ್ ತಂದಿರುವ ಹೊಸ ನಿಯಮದ ಪ್ರಕಾರ, ಫೇಸ್​ಬುಕ್ ಬಳಕೆದಾರರು ಯಾವುದೇ ರೀತಿಯ ಹಿಂಸಾ ಪ್ರವೃತ್ತಿಯ ವಿಡಿಯೋಗಳನ್ನು ಲೈವ್ ಮಾಡುವುದು ಹಾಗೂ ಶೇರ್ ಆಗಲಿ ಮಾಡುವುದನ್ನು ನಿಷೇಧಿಸಲಾಗಿದೆ.

ಒಂದು ವೇಳೆ ಬಳಕೆದಾರರು ನಿಯಮಗಳನ್ನು ಮೀರಿದರೆ, ಅಂತಹ ಖಾತೆಯನ್ನು ಕೂಡಲೇ ಬ್ಲಾಕ್ ಮಾಡಲಾಗುವುದು ಎಂದು ಫೇಸ್​ಬುಕ್ ಎಚ್ಚರಿಸಿದೆ. ಭಯೋತ್ಪಾದನೆ ಎಂಬುದು ಸಮಾಜದ ಪಿಡುಗಾಗಿದೆ. ಹಾಗಾಗಿ, ಯಾವುದೇ ಫೇಸ್‌ಬುಕ್ ಖಾತೆದಾರನು ಭಯೋತ್ಪಾದಕ ವಿಷಯ ಅಥವಾ ಸಂಘಟನೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನು ಅಥವಾ ವಿಡಿಯೋಗಳ ಲಿಂಕ್ ಹಂಚಿಕೊಳ್ಳುವುದು ನಿಯಮದ ವಿರುದ್ಧ. ಹಾಗಾಗಿ ಇಂತಹ ಘಟನೆಗಳು ನಡೆದ ಖಾತೆಯನ್ನು ಆ ಕೂಡಲೇ ನಿಷೇಧಿಸಲಾಗುತ್ತದೆ ಎಂದು ಸಂಸ್ಥೆ ಎಚ್ಚರಿಸಿದೆ.

ಇತ್ತೀಚಿಗಷ್ಟೇ ನ್ಯೂಜಿಲ್ಯಾಂಡ್ ಕ್ರೈಸ್ಟ್​ಚರ್ಚ್​ ಮಸೀದಿ ಮೇಲೆ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಉಗ್ರನೋರ್ವ ಲೈವ್​ ಸ್ಟೀಮಿಂಗ್ ಮೂಲಕ ಪ್ರಸಾರ ಮಾಡಿದ್ದನು. ಈ ವಿಡಿಯೋ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದನ್ನು ತಡೆಯದ ವಿಫಲವಾದ ಫೇಸ್‌ಬುಕ್ ಮೇಲೆ ವ್ಯಾಪಕ ಟೀಕೆಗಳು ವ್ಯಕ್ತವಾಗಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಸುದ್ದಿ

    ಸರ್ಕಾರಿ ನೌಕರರಿಗೊಂದು ಬಂಪರ್ ಆಪರ್ ,5 ದಿನ ಮೊದಲೇ ಸಿಗಲಿದೆ ಸಂಬಳ….!

    ನೌಕರರು, ಉದ್ಯೋಗಿಗಳ ವಲಯಕ್ಕೆ ಶುಭ ಸುದ್ದಿ ಇಲ್ಲಿದೆ. ಸೆಪ್ಟಂಬರ್ 26, 27 ರಂದು ಬ್ಯಾಂಕ್  ಮುಷ್ಕರವಿದ್ದು, ಸತತವಾಗಿ 5 ದಿನ ರಜೆ ಇರುವುದರಿಂದ 5 ದಿನ ಮೊದಲೇ ವೇತನ ನೀಡಲು ಹಣಕಾಸು ಸಚಿವಾಲಯ ಸುತ್ತೋಲೆ ಹೊರಡಿಸಿದೆ. ಸೆಪ್ಟೆಂಬರ್ 26, 27 ರಂದು ಬ್ಯಾಂಕ್ ವಿಲೀನ ವಿರೋಧಿಸಿ ಮುಷ್ಕರ ನಡೆಯಲಿದೆ. 28 ರಂದು 4ನೇ ಶನಿವಾರ ಬ್ಯಾಂಕುಗಳಿಗೆ ರಜೆ ಇರುತ್ತದೆ. 29 ರಂದು ಭಾನುವಾರ ಕೂಡ ರಜೆ ಇರುತ್ತದೆ. ಸೆಪ್ಟೆಂಬರ್ 30 ರಂದು ಬ್ಯಾಂಕುಗಳ ಅರ್ಧ ವಾರ್ಷಿಕ ವಹಿವಾಟು…

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…

  • ಸ್ಪೂರ್ತಿ

    ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

    ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.