ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
 
            ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್‍ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್‍ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು.

ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ ಸಾಜಿತ್ ಸ್ನೇಹಿತರು ಬರ್ಗರ್ ಪರಿಶೀಲಿಸಿದಾಗ ಅದರಲ್ಲಿ ಗಾಜಿನ ಪೀಸ್ ಇತ್ತು. ತಕ್ಷಣ ಸ್ನೇಹಿತರು ಸಾಜಿತ್‍ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು.

ಸಾಜಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆಂದು ಸ್ನೇಹಿತರು 15,000 ರೂ. ನೀಡಿದ್ದರು. ಬಳಿಕ ಮರುದಿನ ಚಿಕಿತ್ಸೆಗೆಂದು ದುಪ್ಪಟ್ಟು ಹಣವನ್ನು ಖರ್ಚು ಮಾಡಿದ್ದಾರೆ. ಈ ಬಗ್ಗೆ ಬರ್ಗರ್ ಕಿಂಗ್ ಮ್ಯಾನೇಜರ್ ಸಿದ್ಧಾರ್ಥ್ ಅವರನ್ನು ಸಂಪರ್ಕಿಸಿದಾಗ, “ಈ ಘಟನೆ ಬಗ್ಗೆ ನನಗೆ ಏನೂ ಗೊತ್ತಿಲ್ಲ” ಎಂದು ಹಾರಿಕೆ ಉತ್ತರ ನೀಡಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಗ್ರಾಹಕರ ದೂರಿನ ಮೇರೆಗೆ ಮೇ 18ರಂದು ಬರ್ಗರ್ ಕಿಂಗ್ ವಿರುದ್ಧ ಎಫ್‍ಐಆರ್ ದಾಖಲಿಸಿದ್ದೇವೆ. ಆಸ್ಪತ್ರೆಯಲ್ಲಿ ಮೆಡಿಕಲ್ ರಿಪೋರ್ಟ್ ಬಂದ ನಂತರ ವಿಚಾರಣೆ ಮುಂದುವರಿಸುತ್ತೇವೆ ಎಂದು ಇನ್ಸ್ ಪೆಕ್ಟರ್ ದೀಪಕ್ ಲಾಗಡ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್‍ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್‍ಬ್ಯಾಂಡ್, ಲ್ಯಾಂಡ್‍ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್‍ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…
ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…