ಸುದ್ದಿ

ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

125

ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಂಗಳೂರಿನಲ್ಲಿ ವಿದ್ಯುತ್‍ಗೆ ಮತ್ತೊಬ್ಬ ಯುವಕ ಬಲಿ

    ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಸುದ್ದಿ

    ಬಿಗ್ ಶಾಕಿಂಗ್..ಹಿರಿಯ ನಟ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ಇನ್ನಿಲ್ಲ..ಏನಾಗಿತ್ತು..?

    ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….

  • ಸುದ್ದಿ

    15,000 ಕೆಜಿ ಕಾಗದ ತ್ಯಾಜ್ಯ ಸಂಗ್ರಹಿಸಿ ಪ್ರಶಸ್ತಿಯನ್ನು ಗೆದ್ದ ಭಾರತೀಯ ಹುಡುಗಿ…!

    ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್‍ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್‌ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…

  • ಸುದ್ದಿ

    ನೀವು ಎಂದಾದರೂ ಗೂಗಲ್ ನೀಡಿರುವ ಚಾಲೆಂಜ್ ಆಡಿದ್ದಿರಾ;ಇಲ್ಲದಿದ್ದರೆ ಒಮ್ಮೆ ಆಡಿ ನೋಡಿ ಅದರಲ್ಲಿ ಸಿಗುತ್ತೆ ಬರೋಬ್ಬರಿ 10.76 ಕೋಟಿ,!

    ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು  ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…