ಸ್ಪೂರ್ತಿ

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

260

ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.


ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.


ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.


ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಆರೋಗ್ಯ

    ಅರಿಶಿನದಲ್ಲಿದೆ ಆ್ಯಂಟಿಬಯೋಟಿಕ್ ನಿಮಗೆಗೊತ್ತಾ..?ತಿಳಿಯಲು ಓದಿ…

    ಪ್ರತಿದಿನ ಅರಿಶಿನ ಬೆರೆಸಿದ ಒಂದು ಲೋಟ ಹಾಲು ಕುಡಿದ್ರೆ ನೀವು ಆರೋಗ್ಯವಾಗಿರಬಹುದು. ಹಾಲು ಮತ್ತು ಅರಿಶಿನ ಎರಡೂ ನೈಸರ್ಗಿಕ ಆ್ಯಂಟಿಬಯೋಟಿಕ್ ಇದ್ದಂತೆ. ಹಲವು ಅಂಟುರೋಗಗಳು ಬರದಂತೆ ಇದು ತಡೆಯುತ್ತದೆ.

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…