ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ.

ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ.

ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ ಮೇಲ್ಮೈಗೆಸಗಣಿ ಸಾರಿಸಿದ್ದಾರೆ. ರೂಪೇಶ್ ಗುರಂಗದಾಸ್ ಎಂಬುವವರು ಈ ಕಾರಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು “ನಾನು ನೋಡಿದ ಸಗಣಿಯ ಉತ್ತಮ ಬಳಕೆ’ ಎಂದು ಜಾಲತಾಣದಲ್ಲಿ ಬರೆದುಕೊಂಡು ಪೋಸ್ಟ್ ಮಾಡಿರುವ ಅವರು, ಕಾರನ್ನು ತಂಪಾಗಿಸಲು ಕಂಡುಕೊಂಡಿರುವ ಉತ್ತಮ ಪ್ರಯತ್ನ ಎಂದಿದ್ದಾರೆ.

ಇದಕ್ಕೆ ಸಂಬಂಧಿಸಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ. ಆಕೆಯ ಚಾಲಾಕಿತನವನ್ನು ಹೊಗಳಿ ಪ್ರಶಂಸೆಯ ಸುರಿಮಳೆಯಮನ್ನೇ ಹರಿಸಿದ್ದಾರೆ. ಭಾರತದಲ್ಲಿ ಸಗಣಿಯನ್ನು ಮನೆಯ ಗೋಡೆ, ಮಹಡಿಗಳಿಗೆ ಹಚ್ಚುವುದು ಸಾಮಾನ್ಯ. ಸಗಣಿಯ ಬೆರಣಿಯನ್ನು ಉರುವಲಾಗಿ ಹಾಗೂ ಔಷಧವಾಗಿ ಬಳಸಲಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಬಿಹಾರದ ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಬಿಹಾರದಲ್ಲಿ ಎದುರಾಗಿರುವ ಪ್ರವಾಹದಿಂದಾಗಿ ದೂರದ ಗ್ರಾಮಗಳ ಜನರಿಗೆ ತಿನ್ನಲು ಆಹಾರವೂ ದೊರೆಯುತ್ತಿಲ್ಲ ಎಂಬುದಕ್ಕೆ ಕಟಿಹಾರ್ ಜಿಲ್ಲೆಯ ದಂಗಿ ಟೋಲಾ ಗ್ರಾಮಸ್ಥರೇ ನಿದರ್ಶನ! ಈ ಗ್ರಾಮದ ಜನತೆ ಪ್ರವಾಹದಿಂದ ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದು, ಇದೀಗ ತಿನ್ನಲು ಆಹಾರ ಸಿಗದೇ ಇಲಿಗಳನ್ನು ಹಿಡಿದು ತಿನ್ನುವ ಪರಿಸ್ಥಿತಿ ಎದುರಾಗಿದೆ. ಈ ಪ್ರದೇಶದಲ್ಲಿ ವಾಸವಿದ್ದ ಸುಮಾರು…
ಹಲವು ದೇಶಗಳಲ್ಲಿ ಹಲವು ರೀತಿಯ ಚಿತ್ರ ವಿಚಿತ್ರ ಪದ್ಧತಿ, ಸಂಪ್ರದಾಯಗಳು ಈಗಲೂ ರೂಢಿಯಲ್ಲಿವೆ. ಕೆಲವು ಸ್ಥಳಗಳಲ್ಲಿ ಅನಾದಿಕಾಲದಿಂದ ಬಂದ ಪದ್ಧತಿಗಳನ್ನು ಈಗಲೂ ಸಹ ಆಚರಿಸಿಕೊಂಡು ಬರಲಾಗ್ತಿದೆ. ನಮಗೆಲ್ಲಾ ಗೊತ್ತಿರುವಂತೆ ಹೆಣ್ಣು ಮಕ್ಕಳ ತಂದೆಯಾದವನಿಗೆ ಅವರಿಗೆ ಯೋಗ್ಯನಾದ ಗಂಡನ್ನು ಹುಡುಕಿ ಮದುವೆ ಮಾಡುವುದೇ ಅತೀ ದೊಡ್ಡ ಜವಾಬ್ದಾರಿಯಾಗಿರುತ್ತೆ.ಇದಕ್ಕಾಗಿ ತಂದೆಯಾದವನು ತುಂಬಾ ಕಷ್ಟಪಟ್ಟು ಮಗಳ ಮಾಡುವೆ ಮಾಡುತ್ತಾನೆ.ಆದ್ರೆ ಈ ಗ್ರಾಮದಲ್ಲಿ ಮಗಳಿಗೆ ವರನನ್ನು ಹುಡುಕಬೇಕಾಗಿಲ್ಲ. ಶಾಕಿಂಗ್ ವಿಷಯ ಅದರಲ್ಲೂ ವಿಚಿತ್ರ ಏನೆಂದರೆ ತಾನು ಸಾಕಿ ಸಲುಹಿದ ಮಗಳನ್ನು ತಂದೆಯೇ ಮದುವೆಯಾಗ್ತಾನೆ….
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…