ಸುದ್ದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ ಬೇಧಿಸಿದ ವಿಶೇಷ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ಘೋಷಿಸಿದೆ !

49

ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣ ಭೇದಿಸಿ ರಾಷ್ಟ್ರಮಟ್ಟದಲ್ಲಿ ಮೆಚ್ಚುಗೆ ಪಡೆದ ಹೆಚ್ಚುವರಿ ಪೊಲೀಸ್‌ ಆಯುಕ್ತ ಬಿ.ಕೆ.ಸಿಂಗ್‌ ನೇತೃತ್ವದ ತನಿಖಾ ತಂಡಕ್ಕೆ ರಾಜ್ಯ ಸರ್ಕಾರ 25 ಲಕ್ಷ ರು. ಬಹುಮಾನ ಘೋಷಿಸಿದೆ.


ಕೊಲೆ ಪ್ರಕರಣ ಭೇದಿಸಿದ ತನಿಖಾ ತಂಡಕ್ಕೆ 25 ಲಕ್ಷ ರು. ಬಹುಮಾನ ನೀಡುವಂತೆ ಕೋರಿ ಇತ್ತೀಚೆಗೆ ಬಿ.ಕೆ.ಸಿಂಗ್‌ ಅವರು ಗೃಹ ಇಲಾಖೆಗೆ ಪತ್ರ ಬರೆದಿದ್ದರು.ಸತತವಾಗಿ ಒಂದು ವರ್ಷ ಪರಿಶ್ರಮಪಟ್ಟವಿಶೇಷ ತನಿಖಾ ತಂಡ ಆರೋಪಿಗಳನ್ನು ಮುಂಬೈ ಸೇರಿದಂತೆ ವಿವಿಧೆಡೆ ಬಂಧಿಸಿತ್ತು. ತಂಡದ ಒಟ್ಟು 91 ಮಂದಿ ಪೊಲೀಸ್ ಸಿಬ್ಬಂದಿ 25 ಲಕ್ಷ ರು ಹಣವನ್ನು ಹಂಚಿಕೊಂಡಿದೆ.

ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ತನಿಖೆಯಿಂದಾಗಿ ಮಹಾರಾಷ್ಟ್ರದಲ್ಲಿ ನಡೆದಿದ್ದ ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್‌ ಹಾಗೂ ಗೋವಿಂದ ಪಾನ್ಸರೆ ಅವರ ಹತ್ಯೆ ಪ್ರಕರಣದ ಆರೋಪಿಗಳ ಬಗ್ಗೆಯೂ ಸುಳಿವು ಲಭಿಸಿತ್ತು. ವಿಶೇಷ ತನಿಖಾ ತಂಡ ನೀಡಿದ ಸುಳಿವಿನ ಮೇರೆಗೆ ಸಿಬಿಐನವರು ವಿಚಾರವಾದಿಗಳ ಕೊಲೆ ಹಂತಕರನ್ನು ಬಂಧಿಸಿದ್ದರು.

2017ರ ಸೆಪ್ಟಂಬರ್ 5 ರಂದು ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಈ ಪ್ರಕರಣ ಸಂಬಂಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ 16 ಜನರನ್ನು ಬಂಧಿಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಂಕುಳ ದುರ್ವಾಸನೆಯಿಂದ ಮುಕ್ತರಾಗಲು ಈ ವಿಧಾನಗಳನ್ನು ಅನುಸರಿಸಿ…….

    ಕಾಲ ಕಾಲಕ್ಕೆ ಬದಲಾಗುವ ವಾತಾವರಣದ ಜೊತೆಗೆ ಆರೋಗ್ಯದ ಹೊಂದಾಣಿಕೆ ಮಾಡಿಕೊಳ್ಳುವುದು ಸಾಹಸವೇ ಸರಿ. ಬೇಸಿಗೆ ಕಾಲದಲ್ಲಿ ಬಿಸಿಲಿನ ಬೇಗೆಯಿಂದ ಶರೀರದಿಂದ ಒಸರುವ ಬೆವರು ನೀಡುವ ಬಾಧೆಯಂತು ಹೇಳತೀರದು.

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಆರೋಗ್ಯ

    ಚಳಿಗಾಲದಲ್ಲಿ ಏನು ತಿನ್ನಬೇಕು? ಯಾವುದನ್ನು ತಿನ್ನಬಾರದು? ಈ ಮಾಹಿತಿ ನೋಡಿ.

    ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್​ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್​ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…