ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು.
ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ.
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಗೆಲುವು ಹಿನ್ನೆಲೆಯಲ್ಲಿ ಆಯೋಜನೆಗೊಂಡಿರುವ ಸ್ವಾಭಿಮಾನ ಸಮಾವೇಶ ಹಾಗೂ ಅಂಬರೀಶ್ ಜನ್ಮದಿನದ ಅಂಗವಾಗಿ ಐದು ಕ್ವಿಂಟಾಲ್ ಧಾರವಾಡ ಪೇಡಾವನ್ನು ಉದ್ಯಮಿ ನಾರಾಯಣ ಕಲಾಲ್ ರವಾನಿಸಿದ್ದಾರೆ. ಇದಕ್ಕಾಗಿ ಅವರು 2.10 ಲಕ್ಷ ರು ಹಣ ವ್ಯಯಿಸಿದ್ದಾರೆ.ಬಾಬುಸಿಂಗ್ ಠಾಕೂರ್ ಪೇಡಾ ಫ್ಯಾಕ್ಟರಿಯಲ್ಲಿ ತಯಾರಾಗಿರುವ ಪೇಡಾವನ್ನು ವಿಶೇಷ ಬಾಕ್ಸ್ ಗಳಲ್ಲಿ ಪ್ಯಾಕ್ ಮಾಡಿದ್ದು, ಈಗಾಗಲೇ ಮಂಡ್ಯ ತಲುಪಿವೆ.
ಈ ಹಿಂದೆ ಅಂಬರೀಶ್ ಅವರು ಯಶ್, ರಾಧಿಕಾ ದಂಪತಿಯ ಮಗುವಿಗೆ ಕಲಘಟಗಿ ತೊಟ್ಟಿಲು ನೀಡುವ ಸಂಬಂಧ ನಾರಾಯಣ ಕಲಾಲ್ ಅವರಿಗೆ ಫೋನ್ ಮಾಡಿದ್ದರು. ತನ್ನ ಬೇಡಿಕೆಗೆ ಅನುಗುಣವಾಗಿ ತೊಟ್ಟಿಲು ತಯಾರಿಸಿ ಕೊಡುವಂತೆ ಅಂಬಿ ಕಲಾಲ್ ಅವರಲ್ಲಿ ಕೇಳಿಕೊಂಡಿದ್ದರು. ಬಳಿಕ ನಾರಾಯಣ್ ಕಲಾಲ್ ಅವರು ಕಲಘಟಗಿಯ ಮೂಲದ ಶ್ರೀಧರ್ ಸಾವುಕಾರ್ ಅವರಲ್ಲಿ ತೊಟ್ಟಿಲಿಗೆ ಆರ್ಡರ್ ಮಾಡಿಸಿಕೊಟ್ಟಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ. ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ….
ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್ಗಳಿವೆ. ಚೆಫ್ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.