ಸುದ್ದಿ

ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

548

ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು.

ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ ಬಡ್ಡಿ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಹಲವರು ದೂರು ದಾಖಲಿಸಿದ್ದರು.

ನಂತರ ಪೊಲೀಸರು ಪ್ರಕರಣವನ್ನು ಸಿಸಿಬಿ ಪೊಲೀಸರಿಗೆ ವಹಿಸಿದ್ದರು. ನಿನ್ನೆ ಕಾನೂನು ಬಾಹಿರವಾಗಿ ಹಣದ ವ್ಯವಹಾರ ನಡೆಸುತ್ತಿದ್ದ ಕಲಾಸಿಪಾಳ್ಯದ ಆಶಿಶ್ ಮೆಟಲ್ಸ್, ಶಾರದ ಟಾಕೀಸ್ ಹಿಂಭಾಗದ ರಾಜೀವ್ ಫೈನಾನ್ಸ್ ಹಾಗೂ ಶಾಂತಿನಗರದ ಸಂಜಯ್ ಫೈನಾನ್ಸ್, ಜೆಪಿ ನಗರದ ರಾಜಾಸಾಬ್ ಫೈನಾನ್ಸ್ ಮತ್ತು ಸ್ಕಂದ್ ಎಂಟರ್ ಪ್ರೈಸೆಸ್, ಹನುಮಂತ ನಗರದ ವೈಷ್ಣವಿ ಹೋಲ್ಡಿಂಗ್ ಸೇರಿ ಒಟ್ಟು ಏಳು ಕಚೇರಿಗಳನ್ನು ಶೋಧಿಸಿ, ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವ್ಯವಹಾರಕ್ಕೆ ಸಂಬಂಧಿಸಿದಂತೆ 566 ಚೆಕ್ ಗಳು, 197 ಆನ್ ಡಿಮ್ಯಾಂಡ್ ನೋಟುಗಳು ಹಾಗೂ 9,03,200 ರೂ. ನಗದು ಮತ್ತು 3 ಸೇಲ್ ಡೀಡ್ ಗಳು, 28 ಅಗ್ರಿಮೆಂಟ್ ಗಳು ಸೇರಿ ಕೃತ್ಯಕ್ಕೆ ಬಳಸಿದ್ದ ಲ್ಯಾಪ್ ಟ್ಯಾಪ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಮಾರುಕಟ್ಟೆ, ಪುಟ್ಟೇನಹಳ್ಳಿ ಹಾಗೂ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • inspirational

    ಲಾಕ್ಡೌನ್ ಮೊದಲು ಮತ್ತು ನಂತರ ಗಂಗಾ ನದಿ: ನೀವು ತಿಳಿದುಕೊಳ್ಳಬೇಕಾದ 5 ಸಂಗತಿಗಳು

    ಕೈಗಾರಿಕೆಗಳು ಮಾಲಿನ್ಯಕಾರಕಗಳನ್ನು ಗಂಗಾಕ್ಕೆ ಮುಚ್ಚುವ ಮೂಲಕ ಮತ್ತು ಘಾಟ್‌ಗಳನ್ನು ಮುಚ್ಚುವುದರಿಂದ, ಪ್ರಾಚೀನ ನದಿಯ ನೀರಿನ ಗುಣಮಟ್ಟವು ಮಾನವರಿಗೆ ಸ್ನಾನ ಮಾಡಲು ಮತ್ತು ಜಲಚರಗಳನ್ನು ಬೆಂಬಲಿಸಲು ಸಾಕಷ್ಟು ಸುಧಾರಿಸಿದೆ ಎಂದು ಸಿಪಿಸಿಬಿ ತಿಳಿಸಿದೆ. ನಮ್ಮ ಸುತ್ತಮುತ್ತಲಿನ ಪರಿಸರವು ಲಾಕ್ ಡೌನ್ ಸಮಯದಲ್ಲಿ ಪ್ರಾಣಿಗಳನ್ನು ಪುನಶ್ಚೇತನಗೊಳಿಸುವುದನ್ನು ನಾವು ನೋಡಿದ್ದೇವೆ ಮತ್ತು ಪ್ರಾಣಿಗಳು ಸಾಮಾನ್ಯವಾಗಿ ಅವು ಇರಬೇಕೆಂದು ನಾವು ನಿರೀಕ್ಷಿಸುವುದಿಲ್ಲ. ವಾಯುಮಾಲಿನ್ಯದ ಮಟ್ಟವು ಇಳಿದಿರುವುದು ಮಾತ್ರವಲ್ಲ, ಕಲುಷಿತ ನದಿಗಳ ನೀರಿನ ಗುಣಮಟ್ಟವೂ ಭಾರತದಲ್ಲಿ ಸುಧಾರಿಸಿದೆ. ಗಂಗಾ ಘಟ್ಟಗಳನ್ನು ನಿರ್ಜನವಾಗಿಟ್ಟುಕೊಂಡು ಮಾನವರು ಕ್ಯಾರೆಂಟೈನ್‌ನಲ್ಲಿ…