ಸುದ್ದಿ

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಪತ್ತೆ, ಓರ್ವ ಆಸ್ಪತ್ರೆಗೆ ದಾಖಲು…….!

28

ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್‌ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್‌ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್‌ಸ್ಟಿಟ್ಯೂಟ್‌ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್‌ ಬ್ಯಾಟ್ಸ್‌) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಡ್ರೈವಿಂಗ್ ಲೈಸೆನ್ಸ್ ರಿನಿವಲ್ ಅಗಲಿ ಅಡ್ರೆಸ್ ಚೇಂಜ್ ಆಗಲಿ ಈಗ ತುಂಬಾ ಸುಲಭ!ತಿಳಿಯಲು ಈ ಮಾಹಿತಿ ನೋಡಿ..

    ಡ್ರೈವಿಂಗ್ ಲೈಸೆನ್ಸ್ ನವೀಕರಣ ಅಥವಾ ಅದರಲ್ಲಿನ ವಿಳಾಸ ಬದಲಾವಣೆಗೆ ಸಾರಿಗೆ ಇಲಾಖೆ ಕಚೇರಿಗಳಿಗೆ ಇನ್ನು ಮುಂದೆ ಪದೇ ಪದೇ ಅಲೆಯಬೇಕಿಲ್ಲ. ಅಲ್ಲದೇ, ಈ ಪ್ರಕ್ರಿಯೆಗೆ ಯಾವುದೇ ನಿರಾಕ್ಷೇಪಣಾ ಪತ್ರ ಅವಶ್ಯಕತೆ ಇಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವಾಲಯ ಹೇಳಿದೆ. ಬಹುತೇಕ ಜನ ಸ್ವಂತ ಊರಿನ ವ್ಯಾಪ್ತಿಯ ಆರ್.ಟಿ.ಓ. ಕಚೇರಿಯಲ್ಲಿ ಡಿಎಲ್ ಮಾಡಿಸಿಕೊಂಡಿರುತ್ತಾರೆ ಕಾರಣಾಂತರದಿಂದ ಅವರು ಬೇರೆ ನಗರ ಅಥವಾ ರಾಜ್ಯದಲ್ಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಡಿಎಲ್ ನವೀಕರಣ ಮತ್ತು ವಿಳಾಸ ಬದಲಾವಣೆಗೆ ಆರ್.ಟಿ.ಓ….

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ರಾಜಕೀಯ

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್

    50,000 ಮತಗಳ ಅಂತರದಿಂದ ನನ್ನ ಗೆಲುವು: ವರ್ತೂರು ಪ್ರಕಾಶ್ ಕೋಲಾರ: ಕಸಬಾ ಹೋಬಳಿ ದೊಡ್ಡ ಹಸಾಳ ಗ್ರಾಮ ಪಂಚಾಯತಿಯ ಮುಖಂಡರು ಹಾಗೂ ಕಾರ್ಯಕರ್ತರು (ಸ್ಯಾನಿಟೋರಿಯಂ) ಆಸ್ಪತ್ರೆ ಮುಂಬಾಗ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಹುಟ್ಟುಹಬ್ಬವನ್ನು ವರ್ತೂರು ಉತ್ಸವ ಶೀರ್ಷಿಕೆ ಅಡಿಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ವರ್ತೂರು ಪ್ರಕಾಶ್ ನನ್ನ ಹುಟ್ಟುಹಬ್ಬವನ್ನು ಆಚರಿಸಿ ನನಗೆ ಶುಭ ಕೋರಿದ ನಿಮ್ಮೆಲ್ಲರಿಗೂ ನನ್ನ ಧನ್ಯವಾದಗಳು ಹಾಗೂ 90 ದಿನಗಳಲ್ಲಿ ಚುನಾವಣೆ ಬರುತ್ತಿದೆ ನಮಗೆ ಉಳಿದಿರುವ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ದೇವರು

    ಮನುಷ್ಯ ಮಾಡಿದ ತಪ್ಪಿಗೆ ದೇವರ ಮುಖಕ್ಕೂ ಬಿತ್ತು ಮಾಸ್ಕ್ …!

    ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…