ಸುದ್ದಿ

ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

38

ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ ಮನಸ್ಸಿಗೆ ಹಚ್ಚಿಕೊಂಡು ಬೇಸರ ಮಾಡಿಕೊಳ್ಳುವುದಲ್ಲ. ಎಲ್ಲವನ್ನ ಮರೆತು ಮುಂದುವರಿಯಬೇಕು ಎಂದು ಎಚ್‍ಡಿಡಿ ಹೇಳಿದ್ದಾರೆ. ಇದಕ್ಕೆ ನಾನೇನು ಸೋತ ಬೇಸರದಲ್ಲಿಲ್ಲ. ಆದರೆ ನಿಮಗೆ ಹಾಗೂ ಅಪ್ಪನಿಗೆ ಅಷ್ಟೊಂದು ಪ್ರೀತಿ ತೋರಿಸುವ ಮಂಡ್ಯ ಜನ ನನ್ನನ್ನ ಕೈ ಬಿಟ್ಟಿದ್ದು ನನಗೆ ಬೇಜಾರಾಯಿತು ಅಷ್ಟೇ ಎಂದಿದ್ದಾರೆ.

ರಾಜಕಾರಣದಲ್ಲಿ ನಮ್ಮಗುರಿ ಸ್ಪಷ್ಟವಾಗಿರಬೇಕು. ಎಷ್ಟೇ ಕಷ್ಟ ಆದರೂ ಗುರಿ ಮುಟ್ಟುವ ಛಲ ಇರಬೇಕು. ನೀನು ಮಂಡ್ಯದಲ್ಲೇ ರಾಜಕಾರಣ ಮಾಡೋದಾದ್ರೆ ಸ್ಪಷ್ಟವಾದ ತೀರ್ಮಾನ ಮಾಡಿ ಮುಂದುವರಿ. ಮುಂದೆ ಹೋದ ಮೇಲೆ ಹಿಂದೆ ಬರೋ ಹಾಗಿರಬಾರದು ಎಂದು ಎಚ್‍ಡಿಡಿ ಮಾತಿಗೆ ನಿಖಿಲ್, ಇಲ್ಲ ತಾತಾ ಇಷ್ಟು ಮುಂದೆ ಹೋದ ಮೇಲೆ ಹಿಂದೆ ಬರುವ ಪ್ರಶ್ನೆಯೇ ಇಲ್ಲ. ಎಲ್ಲಿ ಸೋತಿದ್ದೀನಿ ಅಲ್ಲೇ ಗೆಲ್ಲಬೇಕು ಗೆಲ್ಲುತ್ತೇನೆ ಎಂದು ತಿಳಿಸಿದ್ದಾರೆ.
ಯಾರ ವಿರುದ್ಧ ಮಾತನಾಡಬೇಡ. ನಿನ್ನ ಪಾಡಿಗೆ ನೀನು ಕೈಲಾದ ಕೆಲಸ ಮಾಡಿಕೊಂಡು ಹೋಗು. ಜನ ಅವರಾಗಿಯೇ ನಿನ್ನ ಇಷ್ಟ ಪಡಬೇಕು. ಸೋಲಿಸಿದರೂ ನಮ್ಮ ಜೊತೆಗಿದ್ದು ಕಷ್ಟ ಸುಖಕ್ಕೆ ಸ್ಪಂದಿಸಿದ ಅನ್ನಬೇಕು. ಹಾಗೆ ಕೆಲಸ ಮಾಡಬೇಕು ಅದಕ್ಕೆ ಬದ್ಧತೆ ಇರಬೇಕು ಎಂದಿದ್ದಾರೆ. ಇದಕ್ಕೆ ನಾನು ಯಾರ ವಿರುದ್ಧವೂ ಮಾತನಾಡಲ್ಲ. ಮಂಡ್ಯದಲ್ಲೇ ಇದ್ದು ಕೆಲಸ ಮಾಡುತ್ತೇನೆ ಎಂದು ನಿಖಿಲ್ ಉತ್ತರಿಸಿದ್ದಾರೆ.

ಇನ್ನೊಂದು ವಿಷಯ ತಿಳ್ಕೋ ನೀನು ಮಂಡ್ಯದಲ್ಲಿ ಓಡಾಡೋದು ನಾಳೆ ಇನ್ಯಾರೋ ರಾಮನಗರ, ಮಾಗಡಿ ಅಲ್ಲಿ ನಿಂತ್ರೆ ಸುಲಭವಾಗಿ ಗೆಲ್ಲಬಹುದು ಅಂದ್ರೆ ಅವಾಗ ಇನ್ನೊಂದು ತರ ಯೋಚನೆ ಮಾಡೋ ಹಾಗೆ ಮಾಡ್ಕೋಬೇಡ ಎಂದು ಹೇಳಿದ್ದಕ್ಕೆ ನಿಖಿಲ್, ಖಂಡಿತಾ ಇಲ್ಲ ತಾತಾ ನಾನು ಬೇರೆ ಯೋಚನೆ ಮಾಡಲ್ಲ. ನನಗೆ ನನ್ನ ಸೋಲಿಗಿಂತ ನಿಮ್ಮ ಸೋಲು ಜಾಸ್ತಿ ನೋವಾಯ್ತು ಎಂದು ತಿಳಿಸಿದ್ದಾರೆ.

ಸೋಲಿಗೆ ಎದೆಗುಂದಬೇಡ. ಯಾರಿಗೂ ಬೈಬೇಡ, ಗುರಿ ಸ್ಪಷ್ಟವಾಗಿರಲಿ ರಾಜಕೀಯವಾಗಿ ಮುಂದುವರಿ ಎಂದು ಪಾಠ ಮಾಡಿದ್ದಾರೆ. ಒಟ್ಟಿನಲ್ಲಿ ಇದೀಗ ರಾಜಕೀಯ ಚಾಣಕ್ಯ ದೇವೇಗೌಡರ ಹಿತ ನುಡಿ, ಗುರುಬೋಧನೆಗೆ ನಿಖಿಲ್ ರಿಂದ ಯಾವ ರೀತಿಯ ರಾಜಕೀಯ ನಡೆಗೆ ಕಾರಣವಾಗಬಹುದು ಎಂಬ ಕುತೂಹಲವನ್ನು ಈಗ ಹುಟ್ಟು ಹಾಕಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹದವಾದ ಸಿಹಿ ಪೊಂಗಲ್ ಸಂಕ್ರಾಂತಿ ಹಬ್ಬದ ವಿಶೇಷ ರೆಸಿಪಿ ಹುಗ್ಗಿ ಮಾಡುವ ವಿಧಾನ.

    ಸುಗ್ಗಿ ಹಬ್ಬವಾದ ಸಂಕ್ರಾಂತಿಯನ್ನು ಕರ್ನಾಟಕದಲ್ಲಷ್ಟೇ ಅಲ್ಲದೆ ಕೇರಳ, ತಮಿಳುನಾಡು ಮತ್ತು ದೇಶದ ಹಲವೆಡೆ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಈ ಹಬ್ಬದ ವಿಶೇಷ ಅಡುಗೆ ಪೊಂಗಲ್. ಆದ್ದರಿಂದ ನಿಮಗಾಗಿ ಸಿಹಿ ಪೊಂಗಲ್ ಮಾಡುವ ವಿಧಾನ ಇಲ್ಲಿದೆ… ಬೇಕಾಗುವ ಸಾಮಗ್ರಿಗಳು:1. ಹೆಸರುಬೇಳೆ 1 ಕಪ್2. ಅಕ್ಕಿ 1 ಕಪ್3. ಪುಡಿ ಮಾಡಿದ ಬೆಲ್ಲ, ಸಕ್ಕರೆ 1 ಕಪ್4. ಏಲಕ್ಕಿ – 45. ದ್ರಾಕ್ಷಿ , ಗೋಡಂಬಿ 50 ಗ್ರಾಂ6. ತುಪ್ಪ 4 ಚಮಚ ಮಾಡುವ ವಿಧಾನಮೊದಲಿಗೆ ಒಂದು ಬಾಣಲೆಯಲ್ಲಿ ಹೆಸರುಬೇಳೆಯನ್ನು…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸರ್ಕಾರದ ಯೋಜನೆಗಳು

    ಮನೆಯಲ್ಲಿ ಕುಳಿತು ನೀವು ಈ ಕೆಲಸ ಮಾಡಿದ್ರೆ ಸಿಗುತ್ತೆ 1 ಲಕ್ಷ ರೂ..!ತಿಳಿಯಲು ಈ ಲೇಖನ ಓದಿ..

    ಗಣರಾಜ್ಯೋತ್ಸವದ ಬಗ್ಗೆ ಜನರಲ್ಲಿ ಉತ್ಸಾಹ ತುಂಬಲು ಮೋದಿ ಸರ್ಕಾರ ವಿಶೇಷ ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ 1 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ.

  • ವಿಸ್ಮಯ ಜಗತ್ತು

    ಈ ಕಣಿವೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕಲ್ಲು ತನ್ನಷ್ಟಕ್ಕೇ ಚಲಿಸುತ್ತದೆ..!ತಿಳಿಯಲು ಈ ಲೇಖನ ಓದಿ…

    ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…

  • ಆಧ್ಯಾತ್ಮ

    ನಿಮ್ಮ ಕಷ್ಟನಷ್ಟಗಳ ನಿವಾರಣೆಗೆ ಸಂಕಷ್ಟ ಚತುರ್ಥಿಯಂದು ಹೀಗೆ ಮಾಡಿ. ಮುಟ್ಟಿದ್ದೆಲ್ಲ ಚಿನ್ನ ಆಗುವುದು.

    ಪಂಡಿತ್ರಾಘವೇಂದ್ರ ಸಾಮ್ವಿ ಗಳು ಶ್ರೀಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರುಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆಪರಿಹಾರ ತಿಳಿಯಲು ಹಾಗೂ ನಿಮ್ಮಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇಮತ್ತು ನೀವು ಉತ್ತರ ತಿಳಿಯಲುಬಯಸುವಿರಾ? ಕರೆ ಮಾಡಿ ಸಮಸ್ಯೆಏನೇ ಇರಲಿ ಎಷ್ಟೇ ಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿಪ್ರೇಮ ಮದುವೆ ದಾಂಪತ್ಯ ಕುಟುಂಬವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772call/ what 1. ವಿವಾಹ ಪ್ರತಿಬಂಧಕವಿರುವವರು 21 ದಿನಗಳ ಕಾಲ ” ಓಂಗ್ಲೌಂ ಗಣಪತಯೇ ನಮಃ ” ಎಂದು11 ಮಾಲೆ ಜಪಿಸಿ ಪ್ರತಿದಿನ…