ಸುದ್ದಿ

ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

85

ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಆದರೆ, ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆ ತಗ್ಗಿಸಲಾಗಿದೆ.
ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿದ್ದು, ಜೂನ್ 1 ರಿಂದಲೇ ಜಾರಿಗೆ ಬಂದಿದೆ. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿದೆ. ಇದು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿದೆ.

14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ 771.50 ರು ಆಗಲಿದ್ದು, ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್(19 ಕೆಜಿ) ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 282.50 ರೂ.ಗೆ ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಈಗ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದು, ಬೆಲೆ ಏರಿಕೆ ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್ ಪಿಜಿ ದರ ಕುಸಿತದಿಂದ ಅಮೆರಿಕನ್ ಡಾಲರ್ ಎದುರು ರೂಪಾಯಿ ವಿನಿಮಯ ದರ ಬಲಗೊಂಡ ಕಾರಣ ಎಲ್ ಪಿಜಿ ದರ ಇಳಿಕೆಯಾಗಿತ್ತು. ಆದರೆ, ಇಂಧನ ಮಾರುಕಟ್ಟೆ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…

  • ಸುದ್ದಿ

    ಆಕಾಶದಿಂದ ಪಾತಾಳಕ್ಕೆ ಇಳಿದ ಈರುಳ್ಳಿ, ಕೇಜಿಗೆ ಈರುಳ್ಳಿ 25 ರೂಪಾಯಿ.!

    ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್‌ಗಳಲ್ಲಿ ಒಂದು…

  • ಕ್ರೀಡೆ

    ಮುಂಬೈ vs ಸನ್ ರೈಸರ್ಸ್ ಪಂದ್ಯ..ಯಾರ್ಯಾರು ಎಷ್ಟು ಹೊಡೆದ್ರು?ಗೆದ್ದಿದ್ದು, ಸೋತಿದ್ದು ಯಾರು.?ಇಲ್ಲಿದೆ ಸಂಪೂರ್ಣ ಮಾಹಿತಿ..ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹೈದರಾಬಾದ್’ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ 11ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಸರಣಿ ಇಂದಿನ ಪಂದ್ಯದಲ್ಲಿ ಮುಂಬಯಿ ಇಂಡಿಯನ್ಸ್‌ ವಿರುದ್ಧ ಸನ್‌ರೈಸರ್ಸ್‌ ಹೈದರಾಬಾದ್‌ 1 ವಿಕೆಟ್ ಗಳ ಜಯ ಸಾಧಿಸಿದೆ. ಇದರೊಂದಿಗೆ ಐಪಿಎಲ್ 2018ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಮುಂಬಯಿ ಸತತ ಎರಡನೇ ಸೋಲಿಗೆ ಗುರಿಯಾಗಿದೆ. ಅತ್ತ ಹೈದರಾಬಾದ್ ಸತತ ಎರಡನೇ ಗೆಲುವನ್ನು ದಾಖಲಿಸಿದೆ. ಮುಂಬೈ ಬ್ಯಾಟಿಂಗ್ :- 20 ಓವರ್ ಗಳಲ್ಲಿ…

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…