ಸುದ್ದಿ

ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

87

ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ.

ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ ವಿಷಯ ಡಿಕೆಶಿ ಕಿವಿಗೆ ತಲುಪಿಸುವ ಪ್ರಯತ್ನ ನಡೆದಿದೆ. ಆದರೆ ಇದಕ್ಕೆ ಒಪ್ಪದ ಡಿಕೆಶಿ ಸದ್ಯಕ್ಕೆ ಯಾವುದೆ ಜವಾಬ್ದಾರಿ ಬೇಡ ಎಂದಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲ. ಆದ್ದರಿಂದ ಪಕ್ಷದ ನೇತೃತ್ವ ವಹಿಸುವಂತಹ ಮಹತ್ತರ ಜವಾಬ್ದಾರಿ ಈಗ ಬೇಡ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಲ್ಲದೆ ತಮ್ಮದೇ ಆದ ಕೆಲವು ಸಮಸ್ಯೆಗಳಿವೆ. ಆದ್ದರಿಂದ ಬೇಡವೆಂದು ಹೇಳಿದ್ದಾರೆ ಎನ್ನಲಾಗಿದೆ.

ಐಟಿ, ಇಡಿ ಸಂಕಷ್ಟದಲ್ಲಿರುವ ಡಿಕೆಶಿಗೆ ಸದ್ಯಕ್ಕೆ ಯಾವುದೇ ಜವಾಬ್ದಾರಿ ಬೇಡ ಅನ್ನಿಸಿದ್ಯಾ ಗೊತ್ತಿಲ್ಲ. ಆದರೆ ಸದ್ಯದ ಮಟ್ಟಿಗೆ ಪಕ್ಷದ ಜವಾಬ್ದಾರಿ ಬೇಡ. ಸಚಿವನಾಗಿಯೇ ಮುಂದುವರಿಯುತ್ತೇನೆ ಎಂದಿದ್ದಾರೆ.ಒಂದು ಕಾಲದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದ ಡಿಕೆಶಿ, ಇದೀಗ ಹೈಕಮಾಂಡ್ ಮನಸ್ಸು ಮಾಡಿದರೂ ಸ್ಥಾನ ಬೇಡವೇ ಬೇಡ ಅನ್ನುವ ಮೂಲಕ ಪಕ್ಷದ ನಾಯಕರ ಹುಬ್ಬೇರಿಸುವಂತೆ ಮಾಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಜೀವನಶೈಲಿ

    ಈ 5 ತಿಂಡಿ ತಿನಿಸುಗಳನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನಾವು ದಿನಾಲೂ ಬಳಸುವ ಕೆಲವು ತಿಂಡಿ ತಿನಿಸುಗಳಿಂದ, ನಮಗೆ ಅರಿವಿಲ್ಲದಂತಯೇ ಕೆಲವೊಂದು ಪ್ರಭಾವಗಳು ನಮ್ಮ ದೇಹದ ಮೇಲೆ ಆಗುತ್ತವೆ.ಅದರಲ್ಲಿ ನಿದ್ದೆಯೂ ಒಂದು. ಹೌದು, ಕೆಲವೊಂದು ತಿಂಡಿಗಳು ನಮಗೆ ಗೊತ್ತಿಲ್ಲದೇ ನಿದ್ದೆ ಬರಿಸುತ್ತವೆ.

  • ಸುದ್ದಿ

    ಸಚಿವ ಸ್ಥಾನ ಕೈ ತಪ್ಪಿದ ಕಾರಣಕ್ಕಾಗಿ ಬೈಕ್​ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ನಾಯಕರು…!

    ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ಧಾರೆ. ಜೊತೆಗೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಇಳಿದಿದ್ದಾರೆ. 6 ಬಾರಿ ಶಾಸಕರಾಗಿರುವ ಚಿತ್ರದುರ್ಗದ ಬಿಜೆಪಿ ಶಾಸಕ ಜಿ.ಹೆಚ್​.ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದೆ. ಈ ಹಿನ್ನೆಲೆ ಅವರ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಬೈಕ್​ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ. ತಿಪ್ಪಾರೆಡ್ಡಿ ಅಭಿಮಾನಿ ಮಧು ಎಂಬುವವರ ಸ್ಕೂಟಿ ಟೈಯರ್​ಗೆ ಬೆಂಕಿ ಹಚ್ಚಲು ಪೊಲೀಸರು ಬಿಡದ ಕಾರಣ,…

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಉಪಯುಕ್ತ ಮಾಹಿತಿ

    ರಿಸರ್ವ್ ಬ್ಯಾಂಕ್ ಕಡೆಯಿಂದ ಏಟಿಎಂ ಬಳಕೆದಾರರಿಗೆ ಸಿಹಿ ಸುದ್ದಿ ..!ತಿಳಿಯಲು ಈ ಲೇಖನ ಓದಿ ..

    ಡಿಜಿಟಲ್ ಪೇಮೆಂಟ್ ಗೆ ಉತ್ತೇಜನ ನೀಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೊಸ ಯೋಜನೆಗಳನ್ನು ಜಾರಿಗೆ ತರ್ತಿದೆ. ಇದೀಗ ಡೆಬಿಟ್ ಕಾರ್ಡ್ ವಹಿವಾಟುಗಳ ಮೇಲಿನ ಶುಲ್ಕವನ್ನು ಕಡಿತ ಮಾಡಲು ನಿರ್ಧರಿಸಿದೆ.