ಸುದ್ದಿ

ಸರ್ಕಾರಿ ಶಾಲಾ ವಿಧ್ಯಾರ್ಥಿಗಳಿಗೆ ಸ್ಕೂಲ್ ಶೂ ತೊಡಿಸಿ ಮಾನವೀಯತೆ ಮೆರೆದ ನಟ ಕಿಚ್ಚ ಸುದೀಪ್……!

90

ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ.

ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು.

ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್ ಅವರು ಸ್ವತಃ ತಾವೇ ಕೆಲವು ಮಕ್ಕಳಿಗೆ ಶೂ ತೊಡಿಸಿದ್ದು ವಿಶೇಷವಾಗಿತ್ತು.

ಸುದೀಪ್ ಅವರು ಪೈಲ್ವಾನ್ ಮತ್ತು ಬಾಲಿವುಡ್‍ನ ದಬಾಂಗ್ ಸಿನಿಮಾ ಶೂಟಿಂಗ್ ಮುಗಿಸಿದ್ದಾರೆ. ಇನ್ನೂ ಕನ್ನಡದ ಕೋಟಿಗೊಬ್ಬ-3 ಬಹುತೇಕ ಕಂಪ್ಲಿಟ್ ಆಗಿದೆ. ತೆಲುಗಿನಲ್ಲಿ ಸೈರಾ ಚಿತ್ರವೂ ಮುಗಿದಿದೆ. ಈಗ ಅನೂಪ್ ಭಂಡಾರಿ ನಿರ್ದೇಶನದ ರಂಗ ಬಿಲ್ಲಾ ಬಾಷಾ ಸಿನಿಮಾ ಆರಂಭಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಸುದ್ದಿ

    ಸೂರತ್ ಕೋಚಿಂಗ್ ಸೆಂಟರ್ಗೆ ಅಗ್ನಿ ಅವಘಡ; ಸಾವಿನ ಸಂಖ್ಯೆ 20ಕ್ಕೆ ಏರಿಕೆ, ತನಿಖೆ ಆರಂಭ….!

    ಗುಜರಾತ್ ನ ಸೂರತ್ ನಲ್ಲಿ ನಡೆದ ಭೀಕರ ಕಟ್ಟಡ ಅಗ್ನಿ ಅಘಡದಲ್ಲಿ ಸಾವಿಗೀಡಾದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.ಸೂರತ್ ಸಾರ್ತನ ಪ್ರದೇಶದ ತಕ್ಷಶಿಲಾ ಆರ್ಕೇಡ್ ಕಟ್ಟಡದ ಮೂರನೇ ಮಹಡಿಯಲ್ಲಿದ್ದ ಕೋಚಿಂಗ್ ಸೆಂಟರ್ ನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅಗ್ನಿ ಅವಘಡ ಸಂಭವಿಸಿದೆ. ಮೂಲಗಳ ಪ್ರಕಾರ ಘಟನೆಯಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದು, ಮೃತರಲ್ಲಿ ಬಹುತೇಕರು ವಿದ್ಯಾರ್ಥಿಗಳು ಎಂದು…

  • ಸುದ್ದಿ

    ಇದೇನಿದು ಶಾಕ್; ಬಿಗ್ ಬಾಸ್ ಮನೆಯಲ್ಲಿ ಎಂದು ನಡೆದಿಲ್ಲ,ಸ್ಪರ್ಧಿಗಳಿಬ್ಬರ ರೊಮ್ಯಾನ್ಸ್ ಯಾರು ಗೊತ್ತೇ?

     ಬಿಗ್ ಬಾಸ್ ಸೀಸನ್-13 ಹಿಂದಿ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಬ್ಬರು ಎಲ್ಲರ ಮುಂದೆಯೇ ರೊಮ್ಯಾನ್ಸ್ ಮಾಡಿದ್ದು, ಸ್ಪರ್ಧಿಗಳಾದ ಸಿದ್ಧಾರ್ಥ್ ಶುಕ್ಲಾ ಹಾಗೂ ರಶ್ಮಿ ದೇಸಾಯಿ ಬಿಗ್ ಬಾಸ್ ಮನೆಯಲ್ಲಿ ರೊಮ್ಯಾನ್ಸ್ ಮಾಡಿದ್ದಾರೆ. ಇವರ ರೊಮ್ಯಾನ್ಸ್ ದೃಶ್ಯವನ್ನು ಮತ್ತೊಬ್ಬ ಸ್ಪರ್ಧಿ ಶೆಹ್ನಾಜ್ ಗಿಲ್ ಮೊಬೈಲಿನಲ್ಲಿ ಚಿತ್ರಿಕರಿಸಿದ್ದು, ಇದು ಟಾಸ್ಕ್ ನ ಒಂದು ಭಾಗ ಎಂದು ಹೇಳಲಾಗುತ್ತಿದೆ. ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಶೆಹ್ನಾಜ್ ನಿರ್ದೇಶಕರಾಗಿ ಸಿದ್ಧಾರ್ಥ್ ಹಾಗೂ ರಶ್ಮಿ ಅವರಿಗೆ ರೊಮ್ಯಾನ್ಸ್ ಹೇಗೆ ಮಾಡಬೇಕು ಎಂದು ಹೇಳಿಕೊಡುತ್ತಿದ್ದಾರೆ.ಪ್ರೋಮೋದಲ್ಲಿ ಧಾರವಾಹಿಗಾಗಿ ಕೆಲವು…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಸುದ್ದಿ

    ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

    ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ. ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ. ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ. ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ…