ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ.
ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ.
ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತ್ತಿದೆ. ಈ ಹಿಂದೆ ಕೂಡಾ ರಸ್ತೆಯ ಮೇಲೆಯೇ ಕಸಾಯಿ ಖಾನೆಯ ನೀರು ಹರಿಯುತ್ತಿತ್ತು. ಆದರೆ ಈಗ ಅದೇ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲಿಜು ನೀರು ಜನರ ಮನೆಗೆ ಬರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಒಂದೆಡೆ ಬರಗಾಲದಿಂದ ಕುಡಿಯಲು ನೀರಿಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಇಲ್ಲಿಯ ಜನರಿಗೆ ಕುಡಿಯುವ ನೀರು ಹೋಗಲಿ ಬಳಸಲು ಕೂಡ ನೀರಿಲ್ಲದಂತೆ ಆಗಿದೆ. ಇದಕ್ಕೆಲ್ಲ ಪಾಲಿಕೆ ಹಾಗೂ ಜಲ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಸರ್ಕಾರದ ಕೊನೆ ಬಡ್ಜೆಟ್ ಮಂಡಿಸಿರುವ ಕೇಂದ್ರ ಹಣಕಾಸು ಸಚಿವರ ಪಿಯೂಶ್ ಗೋಯಲ್ ಮಧ್ಯಮ ವರ್ಗಕ್ಕೆ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ. ಹಾಲಿ ಇರುವ ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ…
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಅದನ್ನು ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಆರೋಗ್ಯಕ್ಕೆ ಇನ್ನೂ ಉತ್ತಮ. ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರನ್ನು ಚೆಲ್ಲುತ್ತೇವೆ. ಆ ನೀರಿನಿಂದ ಆಗುವ ಪ್ರಯೋಜನ ತಿಳಿದರೆ ಖಂಡಿತ ಎಸೆಯುವುದಿಲ್ಲ. * ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ನೆನೆಸಿದ ನೀರನ್ನು ಕುದಿಸಿ ಕುಡಿಯುವುದರಿಂದ ಮಲಬದ್ಧತೆ, ಅಸಿಡಿಟಿ ಹಾಗೂ ಆಯಾಸ ಸಮಸ್ಯೆ ದೂರವಾಗುತ್ತದೆ. * ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. * ಇದು…
ಕುರಿಗಾಯಿ ಹನುಮಂತ ಆಯಿತು, ಕೊಪ್ಪಳದ ಗಂಗಮ್ಮ ಆಯಿತು. ಈಗ ಇವರ ಸಾಲಿಗೆ ಮತ್ತೊಂದು ಗಾನ ಕೋಗಿಲೆ ಸೇರಿಕೊಂಡಿದೆ. ಸರ್ಕಾರಿ ನೌಕರಿ ಮಾಡುತ್ತಲೇ, ಸಂಗೀತ ಸರಸ್ವತಿಯ ಸೇವೆ ಮಾಡುತ್ತಾ ಯಾದಗಿರಿಯ ಬಸ್ ಕಂಡಕ್ಟರ್ ಪರಶುರಾಮ್ ಪಬ್ಲಿಕ್ ಹೀರೋ ಆಗಿದ್ದಾರೆ. ಹೌದು. ಯಾದಗಿರಿ- ಕಲಬುರಗಿ ಮಧ್ಯೆ ಸಂಚರಿಸುತ್ತಿರುವ ಈಶಾನ್ಯ ಸಾರಿಗೆ ಬಸ್ ಹತ್ತಿದರೆ ನಿಮಗೆ ಫುಲ್ ಎಂಟರ್ಟೈನ್ಮೆಂಟ್ ಸಿಗೋದು ಗ್ಯಾರಂಟಿ. ಯಾಕಂದ್ರೆ ಬಸ್ನ ಕಂಡಕ್ಟರ್ ಕಂಠದಿಂದ ಹೊರಹೊಮ್ಮುವ ಹಾಡುಗಳು ಎಲ್ಲರ ಮನಸೋರೆಗೊಳ್ಳುತ್ತವೆ. ಬಸ್ಸಲ್ಲೇ ಕರೋಕೆ ಮ್ಯೂಸಿಕ್ ಹಾಕಿಕೊಂಡು ಕೈಯಲ್ಲಿ ಮೈಕ್…
ಶಿವಪರಮಾತ್ಮನ ಉಪಾಸನೆಯಲ್ಲಿ ರುದ್ರಾಕ್ಷಕ್ಕೆ ಅತ್ಯಂತ ಪ್ರಮುಖ ಸ್ಥಾನ.”ರುದ್ರ” ಹಾಗೂ “ಅಕ್ಷ” ಈ ಎರಡು ಪದಗಳಿರುವ ಶಬ್ದ ರುದ್ರಾಕ್ಷ,ಅಂದರೆ ರುದ್ರನ ಕಣ್ಣು.”ರುದ್ರಸ್ಯ ಅಕ್ಷಿಃ ರುದ್ರಾಕ್ಷಃ”. ರುದ್ರಾಕ್ಷವೆಂಬುದು ಒಂದು ಮರ.ಆ ಮರದ ಬೀಜವೇ ರುದ್ರಾಕ್ಷಿ.ಶಿವ ಪುರಾಣ,ವಿದ್ಯೇಶ್ವರ ಸಂಹಿತಾ ಹಾಗೂ ಶ್ರೀ ದೇವೀಭಾಗವತಗಳಲ್ಲಿ ರುದ್ರಾಕ್ಷಕ್ಕೆ ಸಂಬಂಧಿಸಿದ ವಿಷಯಗಳಿವೆ.ಅನೇಕ ವರ್ಷಗಳ ಸತತ ಧ್ಯಾನದ ನಂತರ ಸದಾಶಿವ ತನ್ನ ಕಣ್ಣುಗಳನ್ನು ತೆರೆದ.ಆಗ ಕಣ್ಣುಗಳಿಂದ ಅಶ್ರು ಸುರಿಯಿತು.ಆ ಕಣ್ಣಿರಿನಿಂದಲೇ ಜನ್ಯವಾದದ್ದು ರುದ್ರಾಕ್ಷವೃಕ್ಷ ಎಂಬ ಪೌರಾಣಿಕ ಕಥೆಯಿದೆ.
ಭಾರತೀಯ ಸೇನೆ ಮತ್ತೊಮ್ಮೆ ಉಗ್ರರ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ ಎಂದು ವರದಿಯಾಗಿದೆ.ಕದನ ವಿರಾಮ ಉಲ್ಲಂಘಿಸಿ ಭಾರತದ ತಾಳ್ಮೆ ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆ ಮತ್ತೊಮ್ಮೆ ತಕ್ಕ ತಿರುಗೇಟು ನೀಡಿದೆ.
ಶಬರಿಮಲೈ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ನೋಡಿಕೊಳ್ಳುವ ತಿರುವಂಕೂರ್ ದೇವಸ್ವಂ ಮಂಡಳಿ (ಟಿಡಿಬಿ) ತನ್ನ ನಿಲುವನ್ನು ಬದಲಾಯಿಸಿಕೊಂಡಿದ್ದು, ಸುಪ್ರೀಂ ಕೋರ್ಟ್ ತೀರ್ಪನ್ನು ಯಥಾವತ್ ಆಗಿ ಪಾಲಿಸುತ್ತೇವೆ ಎಂದು ತಿಳಿಸಿದೆ. ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ…