ಸುದ್ದಿ

ಪತ್ರಕರ್ತನ ಮೇಲೆ ಹಲ್ಲೆಗೈದು, ಬಟ್ಟೆಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿದ್ರು

40

ಲಕ್ನೋ: ಗೂಡ್ಸ್ ರೈಲು ಹಳಿ ತಪ್ಪಿದ್ದ ಸುದ್ದಿಯನ್ನು ವರದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿ, ಆತನ ಬಟ್ಟೆ ಬಿಚ್ಚಿಸಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ.

ಮಂಗಳವಾರ ರಾತ್ರಿ ಧೀಮಾನ್ಪುರಾದಲ್ಲಿ ಗೂಡ್ಸ್ ರೈಲು ಹಳಿತಪ್ಪಿದ ಸಂದರ್ಭದಲ್ಲಿ ಪತ್ರಕರ್ತ ವರದಿ ಮಾಡಲು ಹೋದಾಗ ಈ ಘಟನೆ ನಡೆದಿದೆ. ಸರ್ಕಾರಿ ರೈಲ್ವೇ ಪೊಲೀಸ್(ಜಿಆರ್ ಪಿ) ಅಧಿಕಾರಿ ರಾಕೇಶ್ ಕುಮಾರ್ ನೇತೃತ್ವದ ಸಿಬ್ಬಂದಿ ಪತ್ರಕರ್ತನ ಮೇಲೆ ಹಲ್ಲೆ ಮಾಡಿದ್ದಾರೆ. ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ವಿಡಿಯೋದಲ್ಲಿ ಪತ್ರಕರ್ತನಿಗೆ ಚಿತ್ರಹಿಂಸೆ ಕೊಟ್ಟಿರುವುದನ್ನು ಕಾಣಬಹುದಾಗಿದೆ
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪತ್ರಕರ್ತ, ಸಿಬ್ಬಂದಿ ಯೂನಿಫಾರ್ಮ್ ನಲ್ಲಿ ಇರಲಿಲ್ಲ. ವರದಿ ಮಾಡಲು ತೆರಳಿದಾಗ ಅವರು ಏಕಾಏಕಿ ಬಂದು ನನ್ನ ಕ್ಯಾಮೆರಾವನ್ನು ಕಸಿದುಕೊಂಡು ಬಿಸಾಕಿದರು. ಈ ವೇಳೆ ಬಿದ್ದ ಕ್ಯಾಮೆರಾವನ್ನು ಎತ್ತಿಕೊಳ್ಳಲೆಂದು ಬಗ್ಗಿದಾಗ ನನ್ನ ಮೇಲೆ ಮನಸ್ಸೋ ಇಚ್ಛೆ ಥಳಿಸಿ ನಿಂದಿಸಿದರು. ಅಷ್ಟೇ ಅಲ್ಲದೆ ನನ್ನನ್ನು ಲಾಕಪ್‍ಗೆ ಹಾಕಿದರು. ಈ ವೇಳೆ ಅವರು ಬಲವಂತವಾಗಿ ನನ್ನ ಬಟ್ಟೆ ಬಿಚ್ಚಿಸಿ ಬಾಯಿಗೆ ಮೂತ್ರ ಕುಡಿಸಿದರು ಎಂದು ಪತ್ರಕರ್ತ ತನ್ನ ಅಳಲು ತೋಡಿಕೊಂಡಿದ್ದಾರೆ.

ಪೊಲೀಸರು ಪತ್ರಕರ್ತನನ್ನು ಶಾಮ್ಲಿಯಲ್ಲಿರುವ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ರಾತ್ರಿ ಇಡೀ ಅಲ್ಲೆ ಇರಿಸಿಕೊಂಡು ಬುಧವಾರ ಬೆಳಗ್ಗೆ ಬಿಡುಗಡೆ ಮಾಡಿದ್ದಾರೆ. ಟ್ವಿಟ್ಟರ್‌ನಲ್ಲಿ ವಿಡಿಯೋಗಳು ವೈರಲ್ ಆಗಿದ್ದು, ಪತ್ರಕರ್ತ ಕಂಬಿಯ ಹಿಂದೆ ನಿಂತಿದ್ದಾಗ ರಾಕೇಶ್ ಕುಮಾರ್ ಹೊರಗೆ ಕುರ್ಚಿಯ ಮೇಲೆ ಕುಳಿತುಕೊಂಡಿರುವುದನ್ನು ಕಾಣಬಹುದಾಗಿದೆ.
ಈ ಬಗ್ಗೆ ಮಾಹಿತಿ ತಿಳಿದು ಸಹೋದ್ಯೋಗಿಗಳು ಪೊಲೀಸ್ ಠಾಣೆಯ ಮುಂದೆ ಬಂದು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಅವರಲ್ಲಿ ಪತ್ರಕರ್ತ, ರೈಲ್ವೇ ಪೊಲೀಸ್ ಪಡೆಯ ವಿರುದ್ಧ ವರದಿ ಮಾಡಿದೆ ಎಂದು ಆರೋಪಿಸಿ ನನಗೆ ಹಿಂಸೆ ನೀಡುತ್ತಾರೆ ಎಂದು ಹೇಳಿದ್ದಾರೆ. ವಿಡಿಯೋ ವೈರಲ್ ಆದ ಬಳಿಕ ರಾಕೇಶ್ ಕುಮಾರ್ ಮತ್ತು ಪೇದೆ ಸುನೀಲ್ ಕುಮಾರ್ ನನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ತಿಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಪ್ರಶಾಂತ್ ಕನೋಜಿಯಾ ವಿರುದ್ಧ ಹಜರತ್ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪತಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಕನೋಜಿಯಾ ಅವರ ಪತ್ನಿ ಸುಪ್ರೀಂನಲ್ಲಿ ಉತ್ತರ ಪ್ರದೇಶ ಪೊಲೀಸರ ಕ್ರಮವನ್ನು ಪ್ರಶ್ನಿಸಿದ್ದರು. ಆದರೆ ಪ್ರಶಾಂತ್ ಕನೋಜಿಯಾ ಅವರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಆದೇಶಿಸಿ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ಚಾಟಿ ಬೀಸಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪರಾಶಕ್ತಿ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…

  • ಆರೋಗ್ಯ

    ಹಸುವಿನ ಹಾಲಿಗಿಂತ ಕತ್ತೆ ಹಾಲೇ ಉತ್ತಮನಾ..?ತಿಳಿಯಲು ಈ ಲೇಖನ ಓದಿ…

    ಕತ್ತೆಹಾಲು, ದಮ್ಮು, ಕೆಮ್ಮು, ವಾಯು, ಕಫ, ಶೀತ, ನೆಗಡಿ ಎಲ್ಲಾ ಮಾಯ ಕತ್ತೆಹಾಲು…., ಮಕ್ಳು ಮರಿ, ದೊಡ್ಡೋರ್‌, ಚಿಕ್ಕೋರ್‌ ಎಲ್ಲರಿಗೂ ಕತ್ತೆಹಾಲು….!’ ಇದು ಯಾವುದೋ ನಾಟಕದ ಸಂಭಾಷಣೆಯಲ್ಲ, ಬದಲಾಗಿ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಈಚೆಗೆ ಈ ರೀತಿಯ ಧ್ವನಿಯೊಂದು ಕೇಳಿ ಬರುತ್ತಿತ್ತು.

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಜ್ಯೋತಿಷ್ಯ

    ಸೋಮವಾರ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…