ಜ್ಯೋತಿಷ್ಯ

ವಿದವಾದ ಹಣ್ಣುಗಳಿದ್ದರೂ ಮೊಸ್ರನ್ನವನ್ನು ಆರಿಸಿಕೊಂಡ ನಮ್ಮ ಹನುಮಾ…..!

81

ಎಲ್ಲ ಬಗೆಯ ಹತ್ತಾರು ಹಣ್ಣುಗಳಿದ್ದರೂ ಮಂಗವೊಂದು ಯಾವ ಹಣ್ಣನ್ನು ಮುಟ್ಟದೆ ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ನೆರೆದಿದ್ದವರಲ್ಲಿ ಆಶ್ಚರ್ಯ ಮೂಡಿಸಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕಳಸಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಶಿವು ಕುಟುಂಬ ಕಳೆದ ತಿಂಗಳು ಕಾಶಿ ಯಾತ್ರೆಗೆ ಹೋಗಿದ್ದರು. ಊರಿಗೆ ವಾಪಸ್ಸಾದ ಬಳಿಕ ಮನೆಯಲ್ಲಿ ಪವಮಾನ ಹಾಗೂ ಕಾಶಿ ಸಮಾರಾಧಾನೆ ಹೋಮ ಹಮ್ಮಿಕೊಂಡಿದ್ದರು. ಕುಟುಂಬಸ್ಥರು ಹಾಗೂ ಅಕ್ಕಪಕ್ಕದವರ ಸೇರಿ 300ಕ್ಕೂ ಹೆಚ್ಚು ಜನ ಹೋಮದಲ್ಲಿ ಪಾಲ್ಗೊಂಡಿದ್ದರು.

ಹೋಮ ಮುಗಿಯುತ್ತಿದ್ದಂತೆ ಯಾರ ಭಯವೂ ಇಲ್ಲದೆ ಸ್ಥಳಕ್ಕೆ ಬಂದ ಕೋತಿ, ಪ್ರಸಾದಕ್ಕಿಟ್ಟಿದ್ದ ಮೊಸರನ್ನ ತಿಂದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ. ಹೋಮ ಕುಂಡದ ಸುತ್ತಲೂ ಬಗೆಬಗೆಯ ಹಣ್ಣುಗಳಿದ್ದರೂ ಯಾವುದನ್ನೂ ತಿನ್ನದೆ ಪ್ರಸಾದ ಸೇವಿಸಿದೆ.

ನಂತರ ಉದ್ಧರಣೆಯಿಂದ ನೀರು ನೀಡಿದಾಗ ಕೈ ತೊಳೆದುಕೊಂಡು ಯಾರಿಗೂ ತೊಂದರೆ ಕೊಡದೆ ಮನೆಯಿಂದ ಹೊರಹೋಗಿದೆ. ಈ ದೃಶ್ಯವನ್ನು ಕಣ್ಣಾರೆ ಕಂಡ ನೆರೆದಿದ್ದವರು ಮಂಗ ಹಣ್ಣನ್ನ ಬಿಟ್ಟು ಮೊಸರನ್ನ ತಿಂದು ಕೈತೊಳೆದುಕೊಂಡು ವಾಪಸ್ಸಾಗಿದ್ದನ್ನು ಕಂಡು ಆಶ್ಚರ್ಯಕ್ಕೀಡಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ