ಸುದ್ದಿ

ಅಡಿಕೆ ಮರ ಏರುವ ಯಂತ್ರ ಆವಿಷ್ಕರಿಸಿದ ಬಂಟ್ವಾಳ ರೈತ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷರ ಪ್ರಶಂಸೆ…!

367

ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ.

ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ ವಿಡಿಯೋ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ. ಈಗ ಯಂತ್ರಕ್ಕೆ ದೇಶ ಹಾಗೂ ಹೊರದೇಶಗಳಿಂದಲೂ ಬೇಡಿಕೆ ಬರುತ್ತಿದೆ.

ಈಗ ಮರ ಹತ್ತಿ ಕೆಲಸ ಮಾಡಲು ನುರಿತ ಕಾರ್ಮಿಕರು ಸಿಗುತ್ತಿಲ್ಲ ಎಂಬುದು ಕರಾವಳಿಯ ಅಡಕೆ ಬೆಳೆಗಾರರ ಅಳಲು. ಮರ ಹತ್ತಲು ಹಲವು ಯಂತ್ರಗಳ ಆವಿಷ್ಕಾರಗಳು ಕಾಲಕಾಲಕ್ಕೆ ನಡೆಯುತ್ತಲೇ ಇವೆ. ಇದಕ್ಕೊಂದು ಸೇರ್ಪಡೆ ಮರ ಹತ್ತುವ ಬೈಕ್. ಇದರ ಮೂಲ ಉದ್ದೇಶವೇ ಯಾರ ಸಹಾಯವೂ ಇಲ್ಲದೆ ಮರ ಹತ್ತುವುದು. ಸದ್ಯಕ್ಕೆ ಅಡಕೆ ಮರ ಹತ್ತಲು ಉಪಯೋಗವಾಗುತ್ತಿರುವ ಈ ಯಂತ್ರವನ್ನು ಪರಿಷ್ಕರಿಸಿ, ತೆಂಗಿನ ಮರ ಹತ್ತುವಂತೆ ಮಾಡುವ ಯೋಜನೆಯನ್ನು ಗಣಪತಿ ಭಟ್ ಹಾಕಿಕೊಂಡಿದ್ದಾರೆ.

ಬೈಕ್ ಮಾದರಿ ಯಂತ್ರ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇದನ್ನು ಗಮನಿಸಿರುವ ಮಹೀಂದ್ರಾ ಗ್ರೂಪ್ ಮುಖ್ಯಸ್ಥ ಆನಂದ್ ಮಹೀಂದ್ರಾ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಂತ್ರದ ಉತ್ಪಾದನೆ ಹಕ್ಕನ್ನು ಪಡೆಯಲು ಉತ್ಸುಕರಾಗಿದ್ದಾರೆ. ಮಹೀಂದ್ರಾ ಮಾತ್ರವಲ್ಲ, ನಾನು ಯಾವುದೇ ಕಂಪನಿಗೆ ಈ ಯಂತ್ರದ ಉತ್ಪಾದನೆ ಹಕ್ಕು ನೀಡಲು ಸಿದ್ಧನಿಲ್ಲ. ನಾನೇ ಉತ್ಪಾದಿಸಿ ರೈತರಿಗೆ ತಲುಪಿಸುತ್ತೇನೆ. ಅದಕ್ಕಾಗಿ ಪ್ರತ್ಯೇಕ ತಂಡ ರೂಪಿಸುತ್ತೇನೆ ಎಂದು ತಿಳಿಸಿದ್ದಾರೆ. ಅಡಕೆ ಮರ ಏರುವ ಯಂತ್ರಕ್ಕೆ ಜಿಲ್ಲೆ, ಹೊರ ಜಿಲ್ಲೆಗಳು ಸೇರಿದಂತೆ ಕೇರಳದಿಂದಲೂ ಬೇಡಿಕೆ ಬರುತ್ತಿದೆ. ಪ್ರತಿ ಯಂತ್ರಕ್ಕೆ 75 ಸಾವಿರ ರು ದರ ನಿಗದಿ ಪಡಿಸಿದ್ದಾರೆ, ಇದಕ್ಕಾಗಿ ಬಿಸಿ ರೋಡ್ ನಲ್ಲಿ ಶಾಪ್ ಕೂಡ ತೆರದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮಗೆ ಗೊತ್ತಿರುವ ಮೆಕ್ಕೆಜೋಳದ ರೇಷ್ಮೆಯ ಉಪಯೋಗಗಳು..!ತಿಳಿಯಲು ಈ ಲೇಖನ ಓದಿ…

    ನಾವು ಮೆಕ್ಕೆಜೋಳದ ರೇಷ್ಮೆಯನ್ನು ಹಾಗೇ ತಿನ್ನಬಹುದು ಅಥವಾ ನೀರಿನೊಂದಿಗೆ ಬೆರೆಸಿ ದ್ರಾವಣ ರೂಪದಲ್ಲಿ ಕುಡಿಯಬಹುದು ಅಥವಾ ನಿಂಬೇ ಪಾನೀಯವಾಗಿ ಸೇವಿಸಬಹುದು ನೀವು ಮೆಕ್ಕೆಜೋಳದ ರೇಷ್ಮೆಯನ್ನು ಒಂದು ದಿನ ನೀರಿನಲ್ಲಿ ನೆನೆಸಿ ಸೂರ್ಯನ ಬಿಸಿಲಿನಲ್ಲಿ ಇಟ್ಟು ಅಂದೇ ರಾತ್ರಿ ಜೇನುತುಪ್ಪದೊಂದಿಗೆ ಸೇರಿಸಿ ಬೇಕಾದಾಗ ಕುಡಿಯಬಹುದು.

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಜ್ಯೋತಿಷ್ಯ

    ಯುವತಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿದ ವೀಡಿಯೋ ವೈರಲ್…..

    ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ‌್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.  ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…

  • ಸೌಂದರ್ಯ

    ಆಲೂಗಡ್ಡೆಯಲ್ಲಿ ಅಡಗಿದೆ ಮುಖದ ಹಾಗೂ ಕೂದಲಿನ ಸೌಂದರ್ಯದ ಸಿಕ್ರೆಟ್..!ತಿಳಿಯಲು ಈ ಲೇಖನ ಓದಿ..

    ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.