ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ.
ಬಕ್ಸಾ ಜಿಲ್ಲೆಯ ತಾಮುಲ್ಪುರದ ಧುಲಬಾರಿಯ ನಿವಾಸಿಯಾಗಿದ್ದ 27 ವರ್ಷದ ಸ್ವರ್ಗೀಯರಿ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಗುವಾಹಟಿಯ ಸರೈಘಾಟ್ ಸೇತುವೆಯನ್ನು ತಲುಪಿದ್ದಾನೆ. ಪರ್ಸ್, ಮೊಬೈಲ್ ಫೋನ್, ಗುರುತಿನ ದಾಖಲೆಗಳು, ಚಪ್ಪಲಿ ಸೇರಿದಂತೆ ದ್ವಿಚಕ್ರ ವಾಹನವನ್ನು ಸೇತುವೆ ಮೇಲೆ ಬಿಟ್ಟು ಬ್ರಹ್ಮಪುತ್ರ ನದಿಗೆ ಹಾರಿದ್ದಾನೆ.ಕೂಡಲೇ ಆತ ನದಿಯ ಮೇಲೆ ತೇಲುತ್ತಿದ್ದ ನೀರಿನ ಜೊಂಡು ಮತ್ತು ಬಾಳೆ ಎಲೆಯನ್ನು ಗಮನಿಸಿದ್ದಾನೆ. ಅದನ್ನು ಹಿಡಿದು ಈಜಲು ಶುರುಮಾಡಿದ್ದಾನೆ. ರಾತ್ರಿಯಿಡೀ ಈಜುತ್ತಲೇ ಸಾಗಿದ್ದ ಈತನನ್ನು ಮರುದಿನ ಬೆಳಗ್ಗೆ ಅಸ್ಸಾಂನ ಬರ್ಪೇಟಾ ಜಿಲ್ಲೆಯ ಬೊಹೊರಿಯಲ್ಲಿನ ದೋಣಿಗಾರರು ರಕ್ಷಿಸಿದ್ದಾರೆ.
ಕಲಾಚಂದ್ ಅಲಿ ಎಂಬಾತ ದೋಣಿ ನಡೆಸುತ್ತಿದ್ದಾಗ ಬಟ್ಟೆಗಳಿಲ್ಲದೆ ನೀರಿನಲ್ಲಿ ತೇಲಿ ಬರುತ್ತಿದ್ದ ಸ್ವರ್ಗೀಯರಿಯನ್ನು ರಕ್ಷಿಸಿದ್ದಾನೆ. ನಾನು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದೆ. ಆಗ ಯಾರೋ ಸಹಾಯಕ್ಕಾಗಿ ಕೇಳುತ್ತಿದ್ದರು. ಕೊನೆಗೆ ಆತನನ್ನು ಪತ್ತೆ ಮಾಡಿ ದೋಣಿಯನ್ನು ಅವನ ಕಡೆಗೆ ತೆಗೆದುಕೊಂಡು ಅವನನ್ನು ರಕ್ಷಿಸಿದೆ ಎಂದು ಹೇಳಿದ್ದಾರೆ.
ದಡಕ್ಕೆ ಸೇರಿದ ನಂತರ ಆತನನ್ನು ಪೊಲೀಸರ ಸಹಾಯದಿಂದ ಆಸ್ಪತ್ರೆಗೆ ಸೇರಸಲಾಗಿದ್ದು, ಆತ್ಮಹತ್ಯೆಗೆ ಮುಂದಾಗಿದ್ದು ಯಾಕೆ ಎನ್ನುವುದಕ್ಕೆ ಯಾವುದೇ ಕಾರಣವನ್ನು ತಿಳಿಸದ ಆತ ನನ್ನ ಜೀವನವನ್ನು ಕೊನೆಗೊಳಿಸಲು ನಾನು ಬಯಸಿದ್ದೆ. ಹಾಗಾಗಿ ನದಿಗೆ ಹಾರಿದೆ. ಆದರೆ ನಾನು ಸಾಯಲು ಆಗಲಿಲ್ಲ. ನೀರಿಗೆ ಬಿದ್ದ ತಕ್ಷಣ ನಾನು ಬದುಕಬೇಕು ಎನಿಸಿತು ಎಂದು ಸುದ್ದಿಗಾರರಿಗೆ ತಿಳಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ರಾಜ್ಯದಲ್ಲಿ ಎಲ್ಲ ಸಾರ್ವಜನಿಕರು ಮತ್ತು ಅರ್ಹ ಮಕ್ಕಳು ಕರೋನ ಲಸಿಕೆ ಪಡೆಯುವ ಮೂಲಕ 2022 ಅನ್ನು ಕೋವಿಡ್ ಮುಕ್ತ ರಾಜ್ಯ ಮತ್ತು ಆರೋಗ್ಯಭರಿತ ವರ್ಷವನ್ನಾಗಿ ಮಾಡುವ ಸಂಕಲ್ಪಕ್ಕೆ ಜನರು ಸಹಕರಿಸಬೇಕು ಎಂದು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕರೋನ ಸೋಂಕು ನಾವು ಯಾರು ನೀರಿಕ್ಷೀಸಿದಂತೆ ಇರುವುದಿಲ್ಲ.ಮೊದಲು ಕಾಣಿಸಿಕೊಂಡಾಗ ಹೇಗೆ ಹರಡುತ್ತದೆ, ಉಲ್ಬಣಗೊಳ್ಳುತ್ತದೆ,ಸೋಂಕಿತರಿಗೆ ಚಿಕಿತ್ಸೆ ಬಗ್ಗೆ ಗೊತ್ತಿರಲಿಲ್ಲ.ಇಂತಹ ವೇಳೆಯಲ್ಲಿಯೇ ಯಶಸ್ವಿಯಾಗಿ ನಿಯಂತ್ರಣ ಕಾರ್ಯ ನಿಭಾಯಿಸಿದ್ದೇವೆ.ಈ ಹಿಂದಿನ ಅನುಭವದಿಂದ ಸೋಂಕು ನಿಯಂತ್ರಣಕ್ಕೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಕಳೆದೊಂದು ವಾರದಿಂದ…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳ ನಾಲ್ಕನೇ ಶನಿವಾರ ರಜೆ ನೀಡಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಅವರು, 17 ರಾಜ್ಯಗಳಲ್ಲಿ ಪ್ರತಿ ಶನಿವಾರ ರಜೆ ಜಾರಿಯಲ್ಲಿದೆ. 4 ರಾಜ್ಯಗಳಲ್ಲಿ ತಿಂಗಳಲ್ಲಿ ಎರಡು ಶನಿವಾರ ರಜೆ ಇದೆ. ಅದೇ ರೀತಿ ನಮ್ಮ ರಾಜ್ಯದಲ್ಲೂ ರಜೆಗೆ ಒತ್ತಾಯ ಇತ್ತು. ಜಯಂತಿಗಳು, ಹಬ್ಬಗಳನ್ನು ಕಡಿತ ಮಾಡಬೇಕಾ…