ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

33

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಅಕ್ಷಯ ತೃತೀಯ ದಿನದಂದು ಅತೀ ಸುಲಭವಾದ ಈ ನಿಯಮಗಳನ್ನು ತಪ್ಪದೆ ಪಾಲಿಸಿ…

    ವೈಶಾಖ – ಶುಕ್ಲ ತೃಥಿಯವನ್ನು ಅಕ್ಷಯ ತೃತೀಯ ಎಂದು ಕರೆಯಲಾಗುತ್ತದೆ.ಈ ಬಾರಿ ಮೇ 7 ರಂದು ಅಕ್ಷಯ ತೃತೀಯ ಆಚರಣೆ ಮಾಡಲಾಗ್ತಿದೆ. ಅಕ್ಷಯ ತೃತೀಯ ಪವಿತ್ರ ದಿನ. ಅಂದು ಮದುವೆ, ಗೃಹ ಪ್ರವೇಶ ಸೇರಿದಂತೆ ಕೆಲ ಶುಭ ಕಾರ್ಯಗಳನ್ನು ಮಾಡಲಾಗುತ್ತದೆ. ಅಕ್ಷಯ ತೃತೀಯದಂದು ಮಾಡಿದ ದಾನದ ಫಲ ಎಂದೂ ನಾಶವಾಗುವುದಿಲ್ಲ. ಮುಂದಿನ ಜನ್ಮಕ್ಕೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಈಗ ನಾವು ಹೇಳುವ ಕೆಲಸದಲ್ಲಿ ಎರಡನ್ನು ಮಾಡಿದ್ರೂ ಪುಣ್ಯ ಪ್ರಾಪ್ತಿಯಾಗುತ್ತದೆ. ಅಕ್ಷಯ ತೃತೀಯದಂದು ಸಿಹಿ ಹಾಗೂ ತಣ್ಣನೆ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ತಂತ್ರಜ್ಞಾನ

    ಜಗತ್ತಿನ ಅತೀ ಸಣ್ಣ ಉಪಗ್ರಹವನ್ನು ತಯಾರಿಸಿದ ಈ ಬಾಲಕನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್‍ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್‍ಲೈಟ್‍ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್‍ಲೈಟ್‍ ಎಂಬ ಹಿರಿಮೆಗೆ ಪಾತ್ರವಾಗಿದೆ.

  • ಸುದ್ದಿ

    ಜಗತ್ತನ್ನ ಆಳಲು ಸಿದ್ದವಾಗಿವೆ ಟೆಕ್ನಾಲಜಿ ಕಂಪನಿಗಳು…!

    ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…