ಸುದ್ದಿ

1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

28

ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ ಸಂಬಂಧ ಅದು ಟ್ವಿಟ್ಟರ್, ಫೇಸ್‌ಬುಕ್‌ಗಳಲ್ಲಿ ಬರೆದಿದ್ದು, ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಅರಣ್ಯ ಸೇವೆ ಮತ್ತು ಅರಣ್ಯ ಶಾಲೆ ಎಂಬ ಯೋಜನೆಗಳ ಮೂಲಕ ವನ್ಯ ಬದುಕಿನ ಬಗ್ಗೆ ಅರಿವು ಮೂಡಿಸುವ ಹಾಗೂ ಚಿಕ್ಕಮಕ್ಕಳಲ್ಲಿ ವನ್ಯಜೀವಿ, ಅರಣ್ಯದ ಬಗ್ಗೆ ಪ್ರೀತಿ ಬೆಳೆಸುವ ಕಾರ್ಯಕ್ಕಾಗಿ ಈ ಪ್ರಶಸ್ತಿ ದೊರೆತಿದೆ. ಜತೆಗೆ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ವಾಸಿಸುವ ಸಾವಿರಾರು ಜನರಿಗೆ ಕಾಡುಪ್ರಾಣಿ-ಮಾನವ ಸಂಘರ್ಷದಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಪರಿಹಾರ ಕೊಡಿಸಿದ್ದೇವೆ ಎಂದು ಕೃತಿ ಕಾರಂತ್ ಹೇಳಿಕೊಂಡಿದ್ದರು.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಟಿ. ಬಾಲಚಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವನ್ಯಜೀವಿಗಳ ದಾಳಿಗೆ ಬಲಿಯಾದವರು/ಬೆಳೆ ಹಾನಿಗೆ ತುತ್ತಾದವರಿಗೆ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಯಾವುದೇ ಸಂಸ್ಥೆ, ವ್ಯಕ್ತಿ ಅಥವಾ ಎನ್‌ಜಿಓ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳನ್ನು ಸಂಪರ್ಕಿಸಿಲ್ಲ ಕೃತಿ ಕಾರಂತ್ ಅವರ ಕಾರ್ಯದ ಬಗ್ಗೆ ಅರಣ್ಯ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಅವರು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆಯನ್ನೂ ನಡೆಸಿಲ್ಲ. ಪರಿಹಾರ ಒದಗಿಸುವ ಒಂದೇ ಒಂದು ಪ್ರಕರಣದಲ್ಲಿಯೂ ಅವರು ಅಧಿಕಾರಿಗಳನ್ನು ಸಂಪರ್ಕಿಸಿಲ್ಲ. ಹೀಗಾಗಿ ಪರಿಹಾರ ಕೊಡಿಸಿರುವ ಹೇಳಿಕೆಯೇ ಸುಳ್ಳಾಗಿದೆ ಎಂದು ಆರೋಪಿಸಿದೆ.

13,702 ಅರ್ಜಿಗಳ ವಿಲೇವಾರಿ ಮಾನವ-ಪ್ರಾಣಿ ಸಂಘರ್ಷದಿಂದ ಜೀವ ಹಾನಿ ಮತ್ತು ಬೆಳೆ ಹಾನಿಯಾದ ಕುಟುಂಬಗಳಿಗೆ ಪರಿಹಾರ ಒದಗಿಸಲು 6,505 ಜನರ ಪರವಾಗಿ 13,702 ಅರ್ಜಿಗಳನ್ನು ವಿಲೇವಾರಿ ಮಾಡಿಸಿ ಅವರಿಗೆ ಪರಿಹಾರ ಕೊಡಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ದಾಖಲೆಗಳನ್ನು ರೋಲೆಕ್ಸ್ ಸಂಸ್ಥೆಗೂ ನೀಡಿದ್ದಾರೆ. ಆದರೆ, ಅರಣ್ಯ ಇಲಾಖೆಯ ಸಿಬ್ಬಂದಿ ಸ್ವತಃ ಇಲ್ಲಿನ ಜನರನ್ನು ಭೇಟಿ ಮಾಡಿ ಅವರಿಂದ ಮಾಹಿತಿ ಪಡೆದು ಪರಿಹಾರವನ್ನು ಒದಗಿಸಿದೆ ಎಂದು ಹೇಳಿದೆ.

ಕೃತಿ ಕಾರಂತ್ ಅವರನ್ನು ನೋಡಿಯೇ ಇಲ್ಲ ಕಾಡು ಪ್ರಾಣಿಗಳು ದಾಳಿ ಮಾಡಿದರೆ ನಮ್ಮ ಸಿಬ್ಬಂದಿಯೇ ಅಲ್ಲಿಗೆ ಹೋಗುತ್ತಾರೆ. ಅವರ ಹೆಸರು-ಹಾನಿಯ ವಿವರಗಳನ್ನು ಬರೆದುಕೊಂಡು ಬರುತ್ತಾರೆ. ಜನರಿಗೆ ಪರಿಹಾರ ನೀಡಲು ನಮಗೆ ಮಧ್ಯವರ್ತಿಗಳ ಅವಶ್ಯಜತೆ ಇಲ್ಲ. ನಾವು ಕೃತಿ ಕಾರಂತ್ ಯಾರೆಂದು ಅವರನ್ನು ನೋಡಿಯೇ ಇಲ್ಲ. ಬಂಡೀಪುರ, ನಾಗರಹೊಳೆಯಲ್ಲಿ ಯಾವ ಎನ್‌ಜಿಓ ಕೂಡ ಕೆಲಸ ಮಾಡಿಲ್ಲ ಎಂದು ಎಪಿಸಿಎಫ್ ಜಗತ್ ರಾಮ್ ಅವರು ಹೇಳಿರುವುದಾಗಿ ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶುರುವಾಗಿದೆ ನಿಖಿಲ್ ಕುಮಾರ್‌ಸ್ವಾಮಿಗಾಗಿ ಹುಡುಗಿಯ ಹುಡುಕಾಟ,ಹೇಗಿರಬೇಕಂತೆ ಗೊತ್ತಾ,.?

    ನಿಖಿಲ್ ಕುಮಾರ ಸ್ವಾಮಿ  ಮತ್ತು ಕೃಷ್ಣ ನಿರ್ದೇಶನದ ಸಿನಿಮಾ ಜನವರಿಯಲ್ಲಿ ಸೆಟ್ಟೇರಲಿದೆ.ಈಗಾಗಲೇ ಪ್ರಿ-ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬಿಜಿಯಾಗಿದೆ ಇನ್ನು ಒಂದು ವಾರದೊಳಗೆ ಸ್ಕ್ರಿಫ್ಟ್ ಕೆಲಸ ಮುಗಿಯುತ್ತದೆ, ಆಮೇಲೆ ಅಧಿಕೃತವಾಗಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತೇವೆ”ಎಂದು ಮಾಹಿತಿ ನೀಡಿದ ನಿರ್ದೇಶಕ ಕೃಷ್ಣ. “ಇದೊಂದು ನೈಜಕಥೆ ಆಧಾರಿತ ಸಿನಿಮಾ. ಈಗ ಚಿತ್ರಕಥೆ ಕೆಲಸದಲ್ಲಿ ನಿರತನಾಗಿದ್ದೇನೆ, ಹೀರೋಯಿನ್ ಹುಡುಕಾಟ ಶುರುವಾಗಿದೆ. ಸಾಂಪ್ರದಾಯಿಕ ಲುಕ್‌ ಹೊಂದಿರುವ ಅದ್ಭುತ ನಟಿಗಾಗಿ ಶೋಧ ಮಾಡುತ್ತಿದ್ದೇವೆ,  ನಿರ್ದೇಶಕ ಕೃಷ್ಣ ಇದೂವರೆಗೂ ಮಾಡಿರದ ಸಿನಿಮಾ ಇದು. ನಿಖಿಲ್ ಗೆಟಪ್…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಸರ್ಕಾರದ ಯೋಜನೆಗಳು

    ಮೋದಿ ಸರ್ಕಾರದ ಮತ್ತೊಂದು ಯೋಜನೆ …!ತಿಳಿಯಲು ಈ ಲೇಖನ ಓದಿ..

    ನವದೆಹಲಿ, ನವೆಂಬರ್ 18 : ಮೂಡೀಸ್ ರೇಟಿಂಗ್ ಕೇಂದ್ರಕ್ಕೆ ಹೊಸ ಚೈತನ್ಯ ತುಂಬಿದಂತಿದೆ. ನೋಟ್ ಬ್ಯಾನ್, ಜಿ.ಎಸ್.ಟಿ ಅನ್ನು ವಿಷಯವಾಗಿರಿಸಿಕೊಂಡು ಕೇಂದ್ರವನ್ನು ಟೀಕೆ ಮಾಡುತ್ತಿದ್ದವರ ಬಾಯಿ ಮುಚ್ಚುವಂತೆ ಮಾಡಿದೆ ಮೂಡೀಸ್ ರೇಟಿಂಗ್.

  • ರಾಜಕೀಯ

    ಡಿಕೆಶಿ ರೆಬೆಲ್ ನಡುವೆ ವಾಕ್ ಸಮರ..!ಯಾಕೆ?ಏನಾಯ್ತು?ಮುಂದೆ ಓದಿ…

    ಅಂಬರೀಷ್ ಹಾಗು ಇಂಧನ ಸಚಿವ ಡಿ ಕೆ ಶಿವಕುಮಾರ್ ಅವರ ನಡುವೆ ಎಂದು ವಾಕ್ ಸಮರ ಎರ್ಪಟ್ಟಿದೆ. ಈ ನಿಟ್ಟಿನಲ್ಲಿ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಹಿರಿಯ ಕಾಂಗ್ರೆಸ್ ಮುಖಂಡ ಅಂಬರೀಶ್ ಗರಂ ಆಗಿದ್ದಾರೆ.

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಸುದ್ದಿ

    ನೂತನ ಸ್ಪೀಕರ್ ಆಗಿ​ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ

    ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್​ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್​  ಮತ್ತು ಜೆಡಿಎಸ್​ ನಾಯಕರು ಸ್ಪೀಕರ್​ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…