ಸುದ್ದಿ

ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

42

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ.

ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳಲು ಪಾಕಿಸ್ಥಾನ ವಿಫಲವಾದರೆ ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಪಾಕ್ ಸೇರಲಿದೆ.ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲ, ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ತೆಗೆದುಕೊಳ್ಳಿ ಎಂದು ಗಡುವು ನೀಡಿತ್ತು. ಆದರೆ ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿದೆ.ಅಕ್ಟೋಬರ್ 2019ರ ಒಳಗಾಗಿ ಉಗ್ರರ ವಿರುದ್ಧ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ತೆಗೆದುಕೊಳ್ಳುವಂತೆ ಎಫ್‍ಎಟಿಎಫ್ ಪಾಕಿಸ್ತಾನವನ್ನು ಆಗ್ರಹಿಸಿದೆ.

ಇದೇ ಕೊನೆಯ ಅವಕಾಶವಾಗಿದ್ದು, ಮತ್ತೆ ಪಾಕ್ ವಿಫಲವಾದಲ್ಲಿ ಕಪ್ಪು ಪಟ್ಟಿಗೆ ಸೇರಿಸುವುದು ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.ಫ್ಲೋರಿಡಾದಲ್ಲಿ ನಡೆದ ಸಭೆಯಲ್ಲಿ ಪಾಕ್ ಮೇಲೆ ಮತ್ತಷ್ಟು ಒತ್ತಡ ಹೇರುವ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದು ರಾಜತಾಂತ್ರಿಕ ಮೂಲಗಳು ತಿಳಿಸಿವೆ. ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ತೆಗೆದುಕೊಳ್ಳಲಾಗುವುದು. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.ಈ ಹಿಂದೆ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಜಾರ್‍ನನ್ನು ವಿಶ್ವಸಂಸ್ಥೆ ಜಾಗತೀಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು.

ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಪಾಕ್‍ಗೆ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಕಳೆದ ತಿಂಗಳು ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ.

ಅಲ್ಲದೆ ಅಕ್ಟೋಬರ್‍ನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿದೆ.ಏರ್ ಸ್ಟ್ರೈಕ್ ಮೂಲಕ ಶಾಕ್ ಕೊಟ್ಟು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ತಾನವನ್ನು ಏಕಾಂಗಿಯಾಗಿಸುವ ನಿಟ್ಟಿನಲ್ಲಿ ಭಾರತ ನಿರಂತರ ಪ್ರಯತ್ನ ನಡೆಸುತ್ತಿರುವುದು ಪಾಕಿಗೆ ಈಗ ಭಾರೀ ತಲೆನೋವು ತಂದಿಟ್ಟಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ನಡೆಸುವ ತೆರೆಮರೆಯ ಲಾಬಿಯಿಂದ ಎಫ್‍ಎಟಿಎಫ್ ಕಪ್ಪು ಪಟ್ಟಿಗೆ ಸೇರಬಹುದಾದ ಭೀತಿ ಆವರಿಸಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಈ ಹಿಂದೆಯೇ ಆತಂಕ ವ್ಯಕ್ತಪಡಿಸಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

     ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 11 ಜನವರಿ, 2019 ಹಣಕಾಸಿನಲ್ಲಿಸುಧಾರಣೆ ದೀರ್ಘಕಾಲದಿಂದ ಬಾಕಿಯಿರುವ ನಿಮ್ಮ ಬಾಕಿಗಳು ಮತ್ತು ಬಿಲ್ಲುಗಳನ್ನು ಪಾವತಿಸುವುದನ್ನು ಅನುಕೂಲಕರವಾಗಿಸುತ್ತದೆ….

  • ಸುದ್ದಿ

    ಹೊರಬಿತ್ತು ರಾಮ ಸೇತುವಿನ ನಿಗೂಡ ರಹಸ್ಯ..!ಅಮೇರಿಕಾದ ನಾಸಾ ವಿಜ್ಞಾನಿಗಳು ಹೇಳಿದ ಸತ್ಯ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸ್ಪೂರ್ತಿ

    ಕುರಿಕಾಯುವ ಹುಡುಗಿಯೊಬ್ಬಳು, ಆ ದೇಶದ ಶಿಕ್ಷಣ ಮಂತ್ರಿ ಹಾಗುವದೆಂದ್ರೆ ಸಾಮಾನ್ಯ ಅಲ್ಲ.!ಈ ಸ್ಟೋರಿ ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.   ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…