ಸುದ್ದಿ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

28

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು ಹೇಳಿ ಪ್ರತಿಭಟನಾಕಾರರ ಮೇಲೆ ಕೂಗಾಡಿದರು. ಅಷ್ಟೇ ಅಲ್ಲ ನಾನು ಗ್ರಾಮವಾಸ್ತವ್ಯ ಮಾಡುವುದಿಲ್ಲ ಎಂದು ಹೇಳಿದರು.

ನಂತರ ಸಿಎಂ ತಮ್ಮ ಸಿಟ್ಟನ್ನು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಮೇಲೆ ಹೊರ ಹಾಕಿದರು. ಗರಂ ಆಗಿದ್ದ ಸಿಎಂ ಅವರನ್ನು ನಾಡಗೌಡ ಅವರು ಸಮಾಧಾನಪಡಿಸಿ, ಯಾವನ್ರೀ ಅವನು ಎಸ್ಪಿ ಎಂದು ಪೊಲೀಸ್ ಅಧಿಕಾರಿಗಳ ಮೇಲೆ ತಮ್ಮ ಕೋಪವನ್ನು ಹೊರಹಾಕಿದರು.

ನಂತರ ಬಸ್‍ನಲ್ಲೇ ಕುಳಿತು ಮನವಿ ಸ್ವೀಕಾರ ಮಾಡಿದ ಮುಖ್ಯಮಂತ್ರಿಗಳು, ಮಾನ್ವಿ ತಾಲೂಕಿನ ಕಲ್ಲೂರಿಗೆ ಕುಡಿಯುವ ನೀರಿನ ಸರಬರಾಜು ಯೋಜನೆ ಮತ್ತು ಪದವಿ ಕಾಲೇಜು ತೆರಯುವ ಭರವಸೆ ನೀಡಿದರು. ಇದೇ ವೇಳೆ ಕಿವಿ ಕೇಳದ ಗ್ರಾಮದ ಮಗುವೊಂದರ ಚಿಕಿತ್ಸೆಗೆ ಹಣ ನೀಡುವ ಭರವಸೆ ನೀಡಿ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚನೆ ನೀಡಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt

    ಗೃಹಜ್ಯೋತಿ ಯೋಜನೆಗೆ ಅರ್ಜಿಸಲ್ಲಿಕೆ ಹೇಗೆ? ಜೂನ್‌ 15 ರಿಂದ ಅರ್ಜಿ ಆಹ್ವಾನ

    ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು,  ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್  ಬಳಕೆಯ ಪ್ರಮಾಣವನ್ನು  ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್‌…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…