ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ? ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ,…
ದೇಶದ ಬೆನ್ನೆಲುಬು ರೈತ, ಆದರೆ ರೈತನ ಬೆನ್ನೆಲುಬು ಗಂಗಾ ದೇವಿ ಅಂದರೆ ನೀರು, ನೀರಿಗಾಗಿ ಪರದಾಡುವ ರೈತ ಲಕ್ಷಗಟ್ಟಲೆ ಪರದಾಡಿ ಬೋರ್ ವೆಲ್ ಹಾಕಿಸುತ್ತಾನೆ, ಇಷ್ಟೆಲ್ಲ ಕಷ್ಟಪಡುವ ರೈತನಿಗೆ ಬೋರ್ ನಲ್ಲಿ ಕೆಲವು ಸಮಯ ಮಾತ್ರ ನೀರು ಸಿಗುತ್ತದೆ ಮತ್ತು ಬೇಸಿಗೆಯ ಕೊನೆಯಲ್ಲಿ ನೀರು ನಿಲ್ಲುತ್ತದೆ. ವ್ಯವಸಾಯದಲ್ಲಿ ಅವರಿಗೆ ಒಳ್ಳೆಯ ಲಾಭ ಬಾರದ ಕಾರಣ ಅವರು ಕೆಲಸವನ್ನ ಅರಿಸಿಕೊಂಡು ಪಟ್ಟಣಗಳಿಗೆ ಬರುತ್ತಿದ್ದಾರೆ, ಆದರೆ ನಾವು ಹೇಳುವ ಈ ರೈತ ಒಂದು ದೊಡ್ಡ ಪ್ರಯೋಗವನ್ನ ಮಾಡಿ ವರ್ಷಪೂರ್ತಿ ನೀರು…
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಇಂಡೊನೇಶಿಯದ ಸಣ್ಣ ಗ್ರಾಮ ಸೆಮರೆಂಗ್ ಇಂಟರ್ನೆಟ್ನಲ್ಲಿ ಸೆನ್ಸೇಶನ್ ನ್ಯೂಸ್ ಆಗಿದೆ. ಪ್ರತಿಯೊಬ್ಬರು ಈಗ ಈ ಗ್ರಾಮದ ಬಗ್ಗೆ ತಿಳಿಯಲು ಇಂಟರ್ನೆಟ್ನಲ್ಲಿ ಹುಡುಕುತ್ತಿದ್ದಾರೆ. ಪರ್ವತ ಪ್ರದೇಶಗಳಲ್ಲಿರುವ ಈ ಗ್ರಾಮವು ಪ್ರವಾಸಿಗರನ್ನು ಅದರಲ್ಲೂ ವಿದೇಶಿ ಪ್ರವಾಸಿಗರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…