ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಕಿಸಾನ್ ಸಮ್ಮಾನ್’ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಅಂತಿಮ ದಿನವಾಗಿದೆ. ಇದುವರೆಗೂ ಅರ್ಜಿ ಸಲ್ಲಿಸದ ರೈತರು ಈ ಕೂಡಲೇ ಅರ್ಜಿ ಸಲ್ಲಿಸಬೇಕಿದೆ.

ಈ ಯೋಜನೆಯನ್ವಯ ರೈತರಿಗೆ ಒಟ್ಟು ಮೂರು ಕಂತುಗಳಲ್ಲಿ 6000 ರೂ. ಸಹಾಯ ಧನ ನೀಡಲಾಗುತ್ತಿದ್ದು, ಫಲಾನುಭವಿಗಳು ನಾಡಕಚೇರಿ, ಅಟಲ್ ಜನ ಸ್ನೇಹಿ ಕೇಂದ್ರ ಸೇರಿದಂತೆ ವಿವಿಧೆಡೆ ಲಭ್ಯವಿರುವ ಅರ್ಜಿಗಳನ್ನು ಭರ್ತಿ ಮಾಡಿ ನೀಡಬೇಕಾಗುತ್ತದೆ.

ರೈತರ ಖಾತೆಗೆ ನೇರವಾಗಿ ಹಣ ಬರಲಿದ್ದು, ಹೀಗಾಗಿ ಬ್ಯಾಂಕ್ ಖಾತೆ ವಿವರ, ಆಧಾರ್ ಸಂಖ್ಯೆ ಮೊದಲಾದ ಮಾಹಿತಿಗಳನ್ನು ನೀಡಬೇಕಾಗುತ್ತದೆ. ಜೊತೆಗೆ ತಾವು ಹೊಂದಿರುವ ಜಮೀನಿನ ಕುರಿತು ವಿವರ ಸಲ್ಲಿಸಬೇಕಾಗುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…
ಸಾಮಾನ್ಯವಾಗಿ ಹಸುವಿನ ಹೊಟ್ಟೆ ಮೇಲೆ ಕಪ್ಪು-ಬಿಳುಪು ಬಣ್ಣವಿರುವ ನಾನಾ ರೀತಿಯ ಚಿತ್ರಗಳು ಕಾಣಸಿಗುತ್ತವೆ. ಇದೀಗ ಇಂತದ್ದೇ ಹಸುವಿನ ಹೊಟ್ಟೆ ಮೇಲೆ ತಾಯಿಯ ಮಡಿಲಿನಲ್ಲಿ ಮಗುವಿನ ಆರೈಕೆಯ ಚಿತ್ರವೊಂದು ಮೂಡಿ ಎಲ್ಲರ ಗಮನ ಸೆಳೆದಿದೆ. ಮೂಲತಃ ಕೃಷಿ ಜೊತೆಗೆ ಹೈನುಗಾರಿಕೆ ಮಾಡುವ ಜಾಧವ್ ಕುಟುಂಬ ನಾಲ್ಕು ವರ್ಷಗಳ ಹಿಂದೆ ಮಹಾರಾಷ್ಟ್ರದ ಮೀರಜ್ ಜಾನುವಾರು ಮಾರುಕಟ್ಟೆಯಿಂದ ಬಿಳಿ – ಕಪ್ಪು ಬಣ್ಣದ ಜರ್ಸಿ ಪ್ರಬೇಧದ ಹಸುವನ್ನು ತಂದಿದ್ದರು. ಕಳೆದ ಮೂರು ವರ್ಷಗಳಿಂದ ಹೊಟ್ಟೆಯ ಮೇಲೆ ಈ ರೀತಿ ಹಚ್ಚೆ ಮೂಡಲು ಆರಂಭವಾಗಿ…
ಬೆಕ್ಕು ಮತ್ತು ನಾಯಿ ಪರಮ ಶತ್ರುಗಳು ಎಂದು ಹೇಳುತ್ತಾರೆ. ಆದರೆ ಇಲ್ಲೊಂದು ನಾಯಿ ಬೆಕ್ಕಿನ ಮರಿಗೆ ಹಾಲುಣಿಸಿ ತಾಯಿಯ ಪ್ರೀತಿಯನ್ನು ತೋರಿಸುತ್ತಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನೆಮ್ಮಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಚೆಟ್ಟಂಗಡ ಗಿಣಿ ತಿಮ್ಮಯ್ಯ ಅವರ ಮನೆಯಲ್ಲಿ ಈ ಅಪರೂಪದ ದೃಶ ಕಂಡು ಬಂದಿದೆ. ಈ ನಾಯಿ ಪ್ರತಿನಿತ್ಯ ಬೆಕ್ಕಿನಮರಿಗೆ ಹಾಲು ನೀಡುತ್ತಿದೆ. ಈ ನಾಯಿ ಬೆಕ್ಕಿನ ಮರಿಗಳಿಗೆ ಪ್ರತಿದಿನ ಹಾಲನ್ನು ಕುಡಿಸುತ್ತದೆ. ತಾಯಿಯ ಮಮತೆಯನ್ನು ಬಯಸಿ ಬರುವ ಬೆಕ್ಕಿನ ಮರಿಗೆ…
ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…
ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.