ಸುದ್ದಿ

5 ವರ್ಷ ಅಪಾರ್ಟ್‌ಮೆಂಟ್ ನಿಷೇಧಜ್ಞೆ……!

25

ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್‌ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್‌ ನೀಡಿದ್ದಾರೆ.

ನಗರದಲ್ಲಿ ಅಪಾರ್ಟ್‌ಮೆಂಟ್‌ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ ಅಪಾರ್ಟ್‌ಮೆಂಟ್ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ಚಿಂತನೆ ನಡೆದಿದೆ. ಈ ಕುರಿತು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚೆನ್ನೈನಲ್ಲಿ ವಿಕೋಪ: ಈಗಾಗಲೇ ನೆರೆಯ ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಭಣವಾಗಿ ಸಮಸ್ಯೆಯಾಗಿತ್ತು. ಈಗಲೂ ಅಲ್ಲಿನ ಜನ ನೀರಿಗಾಗಿ ದಿನಗಟ್ಟಲೇ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಗ್ರಾಂ. ಬಂಗಾರಕ್ಕಿಂತಲೂ ನೀರಿನ ದರವೇ ಅಧಿಕ ಎಂಬ ಮಾತೂ ಚಾಲ್ತಿಯಲ್ಲಿದೆ. ಹೀಗಾಗಿ ಬೆಂಗಳೂರಿಗೆ ಮುಂದೆ ಇಂಥ ಪರಿಸ್ಥಿತಿ ಬರುವುದು ಬೇಡ ಎಂಬ ಕಾರಣಕ್ಕಾಗಿ ಈ ಕುರಿತು ಸರ್ಕಾರ ಚಿಂತನೆ ನಡೆಸಿದೆ.

ಕೇಪ್‌ಟೌನ್‌ ಉದಾಹರಣೆ : ದಕ್ಷಿಣ ಆಫ್ರಿಕಾದ ಪ್ರಮುಖ ನಗರಿ ಕೇಪ್‌ಟೌನ್‌ನಲ್ಲಿ 2017ರಲ್ಲಿ ಇಂಥದ್ದೇ ಪರಿಸ್ಥಿತಿ ಉದ್ಭವವಾಗಿತ್ತು. ಇಡೀ ನಗರ ಡ್ರೈ ಸ್ಥಿತಿಗೆ ತಲುಪಿತ್ತು. ಒಂದು ಬಕೆಟ್ ನೀರಿಗೂ ಪಡಬಾರದ ಕಷ್ಟ ಅನುಭವಿಸಿತ್ತು.

ಏಕೆ ಈ ಕ್ರಮ?
ಜೂ.5 ರಂದೇ ಮುಂಗಾರು ಮಳೆ ರಾಜ್ಯಕ್ಕೆ ಪ್ರವೇಶ ಮಾಡುತ್ತದೆ ಎಂದು ಹೇಳಲಾಗಿತ್ತಾದರೂ, ಇದುವರೆಗೆ ಸರಿಯಾಗಿ ಮಳೆಯೇ ಬಂದಿಲ್ಲ. ಅಲ್ಲದೆ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಕೆಆರ್‌ಎಸ್‌ ಜಲಾನಯ ಪ್ರದೇಶದ ನಾಲ್ಕೂ ಜಲಾಶಯಗಳಿಗೂ ನೀರು ಬಂದಿಲ್ಲ. ಜೂನ್‌ ಮುಗಿಯುತ್ತಾ ಬಂದಿದ್ದರೂ, ಸರಿಯಾಗದ ಮಳೆಯಿಂದಾಗಿ ಜನ ಸಂಕಷ್ಟಕ್ಕೆ ಈಡಾಗಿದ್ದಾರೆ. ಪರಿಸ್ಥಿತಿ ಹೀಗೆಯೇ ಮುಂದುವರಿದರೆ, ಕೆಆರ್‌ಎಸ್‌, ಕಬಿನಿ ಜಲಾಶಯದಿಂದ ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಕಷ್ಟವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ