ಸುದ್ದಿ

ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

61

ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ.
ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ ವೃದ್ಧೆಗೆ ಇತ್ತು. ಈ ಹಿನ್ನೆಲೆಯಲ್ಲಿ ಈಗ ಮೊಮ್ಮಗಳು ಅಜ್ಜಿಯ ಕೋರಿಕೆಯನ್ನು ಇಡೇರಿಸಲು ಯುಕೆ ನ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ.

ಅಜ್ಜಿಯನ್ನು ಪೋಲೀಸರು ಬಂಧಿಸಿ ಅವರ ಆಸೆ ತೀರಿಸಿದ್ದಕ್ಕೆ ಮೊಮ್ಮಗಳು ಪಾಮ್ ಸ್ಮಿತ್ ಟ್ವಿಟ್ಟರ್ ನಲ್ಲಿ ಖಾಕಿ ಪಡೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಅಜ್ಜಿ ಅನಾರೋಗ್ಯಕ್ಕೆ ತುತ್ತಾಗಿದ್ದಾಗ ತನ್ನ ಈ ಆಸೆ ಬಗ್ಗೆ ಸ್ಮಿತ್ ಬಳಿ ಹೇಳಿದ್ದರು. ತನ್ನ ಅಜ್ಜಿಯ ಆರೋಗ್ಯವು ಏರುಪೇರು ಆಗುತಿತ್ತು. ತನ್ನ ಜೀವನದ ಉದ್ದಕ್ಕೂ ಚೆನ್ನಾಗಿದ್ದರಿಂದ ಯಾವುದಾದರು ಕಹಿ ಅನುಭವವನ್ನು ಹೊಂದಬೇಕೆಂದು ಎಂದು ಬಯಸಿದ್ದರು.

ಈ ಹಿನ್ನಲೆಯಲ್ಲಿ ವಯಸ್ಸಾದರೂ ತನ್ನನ್ನು ಬಂಧಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಈಗ ಆ ಅಜ್ಜಿ ಪೋಲೀಸರ ಬಂಧನದಿಂದ ಖುಷಿಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸ್ ಅಧಿಕಾರಿ ಮಾತನಾಡಿ, ವೃದ್ಧೆಯ ಆಸೆಯನ್ನು ನಾವು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅವರ ಜೀವನದಲ್ಲಿ ನೆನಪಿಟ್ಟುಕೊಳ್ಳುವ ಒಂದು ದಿನವನ್ನು ನಾವು ನೀಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಅಂದು ಈ ಯುವಕನ ಭಾಷಣದಿಂದ,ಪ್ರಧಾನಿ ಮೋದಿ ಮತ್ತು ಗುಜರಾತ್ ಸರ್ಕಾರವೇ ಶೇಕ್ ಆಗಿತ್ತು..!

    ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಬಿಟ್ಟರೆ ಇಡೀ ದೇಶದಲ್ಲಿ ಪ್ರಖರವಾದ ಭಾಷಣ ಮಾಡಿ ಜನರನ್ನ ಸೆಳೀತಿದ್ದ ವ್ಯಕ್ತಿ ಅಂದ್ರೆ ಪ್ರಧಾನಿ ನರೇಂದ್ರ ಮೋದಿ. ತಮ್ಮ ಮೊನಚು ಮಾತುಗಳಿಂದಲೇ ಜನರ ಮನ ಗೆದ್ದು ತಮ್ಮ ಬಹುಮತದಿಂದ, ಯಾವ ಪಕ್ಷಗಳ ಸಹಾಯವಿಲ್ಲದೆ ಅಧಿಕಾರದ ಗದ್ದುಗೆ ಏರಿದ ಜಾದುಗಾರ

  • ಸುದ್ದಿ

    ಸೂರ್ಯನ ಬೆಳಕಿನಿಂದ ನಾಶವಾಗುತ್ತಾ ಕೊರೋನಾ ವೈರಸ್, ಇಲ್ಲಿದೆ ನೋಡಿ ಅಸಲಿ ಸತ್ಯ.

    ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…

  • ಸುದ್ದಿ

    ಭಾರತದ ಮೋಸ್ಟ್ ವಂಡರ್, ಈ 10 ಸೂರ್ಯೋದಯ-ಸೂರ್ಯಾಸ್ತದ ಸ್ಥಳಗಳು…

    ಪ್ರಕೃತಿಯ ಅನೇಕ ಸುಂದರವಾದ ಉಡುಗೊರೆಗಳಲ್ಲಿ ಸೂರ್ಯೋದಯ-ಸೂರ್ಯಾಸ್ತದ ಸೊಬಗು ತುಂಬಾ ಅದ್ಭುತ.ಈ ಸೂರ್ಯೋದಯ-ಸೂರ್ಯಾಸ್ತವನ್ನು ನೋಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ.ಈ ಸೌಂದರ್ಯ

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

  • ಉಪಯುಕ್ತ ಮಾಹಿತಿ

    ಬೆಳೆ ದರ್ಶಕ್-2020ಆಪ್

    ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…