ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ.
ಸಾರಿಗೆ ಬಸ್ ಗೋಕಾಕ್ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು.
ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ ಚಕ್ರ ಸ್ಫೋಟಗೊಂಡಿದೆ. ಪರಿಣಾಮ ಹೆದ್ದಾರಿಯಲ್ಲಿಯೇ ಬಸ್ ಪಲ್ಟಿಯಾಗಿದೆ. ಬಸ್ ಪಲ್ಟಿಯಿಂದಾಗಿ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಹುಕ್ಕೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಘಟನೆ ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….
ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…
ಕೆಮಿಕಲ್ ಗೋಡಾನ್ನಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಪಶ್ಚಿಮ ಬಂಗಾಳದ ಹೌರಾ ಬ್ರಿಡ್ಜ್ನಲ್ಲಿ ನಡೆದಿದೆ. ಇಂದು ನಸುಕಿನ ಜಾವ 2 ಗಂಟೆಗೆ ಗೋಡಾನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಈ ವಿಷಯ ತಿಳಿದು 20 ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯನ್ನು ನಂದಿಸಲು ಸಿಬ್ಬಂದಿ ಹರಸಾಹಸ ಪಡಬೇಕಾಯಿತು. ಜಗನ್ನಾಥ್ ಘಾಟ್ನಲ್ಲಿ ಗೋಡಾನ್ ಇದ್ದು, ಇಂದು ಬೆಳಗ್ಗೆ ಬೆಂಕಿ ಹೊತ್ತಿಗೊಂಡಿದೆ. ಈಗ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಯಾವುದೇ ಪ್ರಾಣಾಪಾಯ ಆಗಿಲ್ಲ ಎಂದು ಅಗ್ನಿಶಾಮಕ ಸಿಬ್ಬಂದಿ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಸಚಿವ…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…