ಸುದ್ದಿ

ಆನಂದ್ ಸಿಂಗ್ ಬೆನ್ನಲ್ಲೇ 10 ಮಂದಿ ಶಾಸಕರು ರಾಜೀನಾಮೆ?– ದೋಸ್ತಿ ಸರ್ಕಾರಕ್ಕೆ ಆಷಾಢ ಕಂಟಕ…..!

83

ಸಿಎಂ ಅಮೆರಿಕ ಪ್ರವಾಸಕ್ಕೆ ತೆರಳಿದ್ದು ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಆಷಾಢದ ಮೊದಲ ದಿನವೇ ದೋಸ್ತಿ ಸರ್ಕಾರಕ್ಕೆ ಕಂಟಕ ಎದುರಾದಂತೆ ಕಾಣುತ್ತಿದೆ. ಹೊಸಪೇಟೆ ಶಾಸಕ ಆನಂದ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೇ ಒಟ್ಟು 10 ಶಾಸಕರು ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ಜಿಂದಾಲ್‍ಗೆ ಭೂಮಿ ನೀಡಿದ್ದನ್ನು ನೆಪವಾಗಿಟ್ಟುಕೊಂಡು ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ ಸಂಖ್ಯಾಬಲ 78ಕ್ಕೆ ಕುಸಿದಿದೆ. ಇತ್ತ ಮೂರು ದಿನಗಳಿಂದ ರಮೇಶ್ ಜಾರಕಿಹೊಳಿಯವರು ಎಲ್ಲೂ ಕಾಣಿಸುತ್ತಿಲ್ಲ. ಗೋಕಾಕ್ ನಲ್ಲೂ ಇಲ್ಲ. ಬೆಂಗಳೂರಿನಲ್ಲೂ ಇಲ್ಲ. ಈ ಮೂಲಕ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿ ಗೌಪ್ಯ ಜಾಗಕ್ಕೆ ಹೋದ್ರಾ ಎಂಬ ಪ್ರಶ್ನೆ ಎದ್ದಿದೆ.

ಯಾರ್ಯಾರು ರಾಜೀನಾಮೆ?:

ಗಣೇಶ್, ಕಂಪ್ಲಿ ಶಾಸಕ
ರಮೇಶ್ ಜಾರಕಿಹೊಳಿ, ಗೋಕಾಕ್ ಶಾಸಕ
ನಾಗೇಂದ್ರ, ಬಳ್ಳಾರಿ ಗ್ರಾಮೀಣ ಶಾಸಕ
ಮಹೇಶ್ ಕುಮಟಳ್ಳಿ, ಅಥಣಿ ಶಾಸಕ
ಬಿಸಿ ಪಾಟೀಲ್, ಹಿರೆಕೇರೂರು ಶಾಸಕ
ಶ್ರೀಮಂತ್ ಪಾಟೀಲ್, ಕಾಗವಾಡ ಶಾಸಕ
ನಾರಾಯಣಗೌಡ, ಕೆಆರ್ ಪೇಟೆ ಶಾಸಕ
ಮಹಾದೇವ್, ಪಿರಿಯಾಪಟ್ಟಣ ಶಾಸಕ
ಪ್ರತಾಪ್ ಗೌಡ ಪಾಟೀಲ್, ಮಸ್ಕಿ ಶಾಸಕ
ಬಸವರಾಜ್ ದದ್ದಲ್- ರಾಯಚೂರು ಗ್ರಾಮೀಣ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ, ಆನಂದ್ ಸಿಂಗ್ ರಾಜಿನಾಮೆ ಕೊಟ್ಟ ಮಾತ್ರಕ್ಕೆ ಸರ್ಕಾರ ಬೀಳಲ್ಲ. ಆನಂದ್ ಸಿಂಗ್ ಜಿಂದಾಲ್ ವಿಚಾರಕ್ಕೆ ಅಸಮಧಾನಗೊಂಡಿದ್ದರು. ಜಿಂದಾಲ್ ವಿಚಾರಕ್ಕೆ ಅವರು ರಾಜಿನಾಮೆ ಕೊಟ್ಟಿರಬಹುದು. ಅವರ ಜೊತೆ ಬೇರೆ ಯಾವ ಶಾಸಕರೂ ಇಲ್ಲ. ಇದ್ದಿದ್ದರೆ ಉಳಿದವರು ರಾಜೀನಾಮೆ ಕೊಡುತ್ತಿದ್ದರು ಎಂದು ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಹೋಗುತ್ತದೆ. ಬೇರೆ ಯಾವ ಶಾಸಕರೂ ರಾಜೀನಾಮೆ ಕೊಡಲ್ಲ. ಅದು ಕೇವಲ ಊಹಾಪೋಹ. ಸರ್ಕಾರ ಬೀಳಿಸುವ ಉದ್ದೇಶದಿಂದ ಆನಂದ್ ಸಿಂಗ್ ರಾಜೀನಾಮೆ ಕೊಟ್ಟಿಲ್ಲ ಎಂದು ನಾಡಗೌಡ ಸ್ಪಷ್ಟಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…

  • ಸಿನಿಮಾ

    ‘ಪದ್ಮಾವತಿ’ ಚಿತ್ರ ಬಿಡುಗಡೆ ತಡೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ರಾಜವಂಶಸ್ಥರು..!ತಿಳಿಯಲು ಈ ಲೇಖನ ಓದಿ …

    ಭಾರಿ ಚರ್ಚೆಗೆ ಕಾರಣವಾಗಿರುವ ದೀಪಿಕಾ ಪಡುಕೋಣೆ ಅಭಿನಯದ ಪದ್ಮಾವತಿ ಚಿತ್ರದ ಬಿಡುಗಡೆ ತಡೆ ನೀಡುವಂತೆ ಆಗ್ರಹಿಸಿ ಉದಯ್ ಪುರ ರಾಜವಂಶಸ್ಥರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿ ಪತ್ರ ಬರೆದಿದ್ದಾರೆ.

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.