ಸುದ್ದಿ

ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

54

ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ.
ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ.

ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ), ಶ್ರೀಮಂತಗೌಡ ಪಾಟೀಲ್ (ಕಾಗವಾಡ), ಜೆಡಿಎಸ್‍ನ ಕೆ.ಆರ್.ನಾರಾಯಣಗೌಡ (ಕೆ.ಆರ್.ಪೇಟೆ), ಎಚ್.ಕೆ.ಕುಮಾರಸ್ವಾಮಿ (ಸಕಲೇಶಪುರ) ಹಾಗೂ ಮಹದೇವ್ (ಪಿರಿಯಾಪಟ್ಟಣ) ಸೇರಿದಂತೆ ಇನ್ನೂ ಹಲವು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಎಲ್ಲಾ ಶಾಸಕರು ಒಂದೇ ಹಂತದಲ್ಲಿ ರಾಜೀನಾಮೆ ನೀಡುವ ಬದಲು ಹಂತ ಹಂತವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ. ಮೂಲಗಳ ಪ್ರಕಾರ ಕಳೆದವಾರ ಎಲ್ಲಾ ಭಿನ್ನಮತೀಯ ಶಾಸಕರು ಒಂದೆಡೆ ಸೇರಿ ಮುಂದಿನ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಿದ್ದರು.ಯಾರು, ಯಾವಾಗ ರಾಜೀನಾಮೆ ನೀಡಬೇಕೆಂಬುದು ಈಗಾಗಲೇ ತೀರ್ಮಾನವಾಗಿದ್ದು, ಅಧಿವೇಶನ ಆರಂಭಕ್ಕೂ ಮುನ್ನವೇ ದೋಸ್ತಿ ಸರ್ಕಾರಕ್ಕೆ ರೆಬೆಲ್ ಶಾಸಕರು ಮರ್ಮಾಘಾತ ನೀಡಲು ಸಜ್ಜಾಗಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆ ಮಾಡಲು ಕೇಂದ್ರ ವರಿಷ್ಠರು ಕೂಡ ರಾಜ್ಯ ನಾಯಕರಿಗೆ ಹಸಿರು ನಿಶಾನೆ ತೋರಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ನೀಡಿ ಪಕ್ಷಕ್ಕೆ ಬರುವ ಶಾಸಕರಿಗೆ ಸರ್ಕಾರದಲ್ಲಿ ಸೂಕ್ತ ಸ್ಥಾನಮಾನ ಅಂದರೆ ಸಚಿವ ಸ್ಥಾನ, ಉಳಿದವರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆಯೂ ಆಶ್ವಾಸನೆ ನೀಡಲಾಗಿದೆ. ಅತೃಪ್ತಗೊಂಡ ಶಾಸಕರು ಪಕ್ಷಕ್ಕೆ ಬರಲು ಸಿದ್ಧರಿರುವಾಗ ತಡಮಾಡದೆ ಸರ್ಕಾರ ರಚನೆಗೆ ಮುಹೂರ್ತ ನಿಗದಿ ಮಾಡಿ ಎಂದು ಕೇಂದ್ರ ವರಿಷ್ಠರು ಕಳೆದ ತಿಂಗಳೇ ಸೂಚನೆ ಕೊಟ್ಟಿದ್ದರು.ಅದರಂತೆ ಭಿನ್ನಮತೀಯರು ಒಬ್ಬಬ್ಬರಾಗಿಯೇ ರಾಜೀನಾಮೆ ಕೊಡುವ ಮೂಲಕ ದೋಸ್ತಿ ಸರ್ಕಾರದ ಪತನಕ್ಕೆ ಮುನ್ನುಡಿ ಬರೆಯಲು ಸಜ್ಜಾಗಿದ್ದಾರೆ.ಈ ಹಿಂದೆ ಆಪರೇಷನ್ ಕಮಲ ಬಜೆಟ್ ಮಂಡನೆಗೂ ಮುನ್ನವೇ ನಡೆಯಬೇಕಾಗಿತ್ತು.

ಆದರೆ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಮಾಡಿಕೊಂಡ ಯಡವಟ್ಟು ಬಿಜೆಪಿಗೆ ತಿರುಗು ಬಾಣವಾಗಿತ್ತು. ಹೀಗಾಗಿ ಬಿಜೆಪಿ ಕೆಲ ದಿನಗಳ ಮಟ್ಟಿಗೆ ಆಪರೇಷನ್ ಕಮಲ ತೆರೆಮರೆಗೆ ಸರಿದಿತ್ತು. ಇದೀಗ ಮತ್ತೆ ಚಾಲ್ತಿಗೆ ಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಉಪಯುಕ್ತ ಮಾಹಿತಿ

    ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಇದು..?ಅದಕ್ಕೆ ಇಲ್ಲಿದೆ ಪರಿಹಾರ…

    ಪ್ರತಿಬಾರಿ ಆಲೂಗಡ್ಡೆಯನ್ನ ಬೇಯಿಸುವಾಗ ಎಲ್ಲರಲ್ಲೂ ಕಾಡುವ ಪ್ರಶ್ನೆ ಎಂದರೆ ಆಲೂಗಡ್ಡೆ ಬೇಯುವಾಗ ಒಡೆದುಹೋಗುತ್ತದೆ ಎಂಬುದು. ಆಲೂಗಡ್ಡೆ ಒಡೆದು ಅದರೊಳಗೆ ನೀರು ಸೇರಿ ಆಲೂಗಡ್ಡೆಯ ರುಚಿ ಹಾಳಾಗುತ್ತದೆ.

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…