ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ನೋ: ತನ್ನ ಮೂರು ಚಿಕ್ಕ ಮಕ್ಕಳು ಮತ್ತು ತನ್ನ ಹೆಂಡತಿಯನ್ನು ಕೊಂದು ಪತಿಯೂ ನೇಣಿಗೆ ಶರಣಾದ ಘಟನೆ ಉತ್ತರ ಪ್ರದೇಶದ ಘಜಿಯಾಬಾದ್ನ ಮಸೂರಿ ಎಂಬ ಗ್ರಾಮದಲ್ಲಿ ನಡೆದಿದೆ.
ಪತ್ನಿ ಮತ್ತು ಮಕ್ಕಳನ್ನು ಕೊಂದು ನೇಣು ಹಾಕಿಕೊಂಡ ಪತಿಯನ್ನು 37 ವರ್ಷದ ಪ್ರದೀಪ್ ಎಂದು ಗುರುತಿಸಲಾಗಿದೆ. ಇನ್ನು ಕೊಲೆಯದ ಪತ್ನಿಯೂ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದಳು ಎನ್ನಲಾಗಿದೆ. ಈ ಘಟನೆಯಲ್ಲಿ ಎಂಟು ವರ್ಷ, ಐದು ವರ್ಷ ಮತ್ತು ಮೂರು ವರ್ಷದ ಮಕ್ಕಳನ್ನು ಹತ್ಯೆ ಮಾಡಿದ್ದಾನೆ.
ಈ ಘಟನೆ ಗುರುವಾರ ರಾತ್ರಿ ನಡೆದಿದ್ದು, ಘಟನೆಯಲ್ಲಿ ಪ್ರದೀಪ್ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಆದರೆ ಶುಕ್ರವಾರ ಬೆಳಗ್ಗೆ ಪತ್ನಿ ಮತ್ತು ಮೂರನೇ ಮಗು ತೀವ್ರವಾಗಿ ಗಾಯಗೊಂಡು ಅಳುತ್ತಿದ್ದನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಕೃತ್ಯ ನಡೆದ ಸ್ಥಳದಲ್ಲಿ ಒಂದು ಡೆತ್ ನೋಟ್ ಸಿಕ್ಕಿದ್ದು, ತನ್ನ ಹೆಂಡತಿ ತನ್ನನ್ನು ಅನುಮಾನಿಸಿದ್ದಕ್ಕೆ ಈ ರೀತಿ ಮಾಡಿದ್ದೇನೆ ಎಂದು ಬರೆಯಲಾಗಿದೆ. ಇನ್ನೂ ಕೊಲ್ಲುವಾಗ ಮಕ್ಕಳು ಕಿರುಚಬಾರದು ಎಂದು ಮಕ್ಕಳ ಬಾಯಿಗೆ ಟೇಪ್ ಹಾಕಿ ಕೊಲೆ ಮಾಡಿದ್ದಾನೆ ಎಂದು ಘಜಿಯಾಬಾದ್ನ ಪೊಲೀಸ್ ಅಧಿಕಾರಿ ಸುಧೀರ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ. ಎಲ್ಲಾ ಮೃತ ದೇಹಗಳು ಮನೆಯಲ್ಲಿ ಇದ್ದು ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಈ ಘಟನೆ ಮಸೂರಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾತಬ್ದಿ ಪುರಂನಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….