ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.

ಚಾಲಕ ನಿದ್ದೆ ಮಂಪರಿನಲ್ಲಿದ್ದನು,ಹೀಗಾಗಿ ಬಸ್ ಸ್ಕಿಡ್ ಆಗಿ ಆಗ್ರಾ ಎಕ್ಸ್‌ಪ್ರೆಸ್‌ವೇ ಬಳಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಚರಂಡಿಗೆ ಬಿದ್ದಿದೆ. ಈ ವರೆಗೆ ಇಪ್ಪತ್ತು ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಟ್ವೀಟ್ ನಲ್ಲಿ ತಿಳಿಸಿದ್ದಾರೆ. ವರದಿ ಪ್ರಕಾರ, ಈ ಭಾರೀ ವಾಹನದ ನಿಯಂತ್ರಣ ಕಳೆದುಕೊಳ್ಳುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದ.

ಪರಿಣಾಮ 29 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ 17 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಮತ್ತು ರಕ್ಷಣಾ ಪಡೆದ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ. ಅಪಘಾತವಾದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಕೂಡ ಚರಂಡಿಗೆ ಇಳಿದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ಸದ್ಯಕ್ಕೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿರುವ ಮೃತದೇಹವನ್ನು ಹೊರತೆಗೆಯಲಾಗುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಸ್ ದುರಂತಕ್ಕೆ ಸಂತಾಪ ಸೂಚಿಸಿದ್ದು, ಗಾಯಗೊಂಡವರಿಗೆ ಮತ್ತು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಎಲ್ಲ ರೀತಿಯ ಸಹಾಯವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸರ್ಕಾರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಫೋಷಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ Indian Premier League (IPL) ಪಂದ್ಯಗಳ ಸಮಯದಲ್ಲಿ Bengaluru ನಲ್ಲಿ ದೊಡ್ಡ ಮಟ್ಟದ ಟಿಕೆಟ್ ಕಳ್ಳಬಜಾರ್ (black market) ಸ್ಕ್ಯಾಮ್ ಬೆಳಕಿಗೆ ಬಂದಿದೆ. ವಿಶೇಷವಾಗಿ Bengaluru ನಲ್ಲಿ, ಟಿಕೆಟ್ಗಳಿಗೆ ಭಾರಿ ಬೇಡಿಕೆ ಇರುತ್ತದೆ. ಈ ಬೇಡಿಕೆಯನ್ನು ದುರುಪಯೋಗಪಡಿಸಿಕೊಂಡು ಕೆಲವು ಮಂದಿ “ಟಿಕೆಟ್ ಸ್ಕ್ಯಾಮ್” ನಡೆಸುತ್ತಿರುವ ಘಟನೆಗಳು ಇತ್ತೀಚೆಗೆ ಬೆಳಕಿಗೆ ಬಂದಿವೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? RCB vs…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…