ಸುದ್ದಿ

ಕಾಂಗ್ರೆಸ್‍ನ ಡಿಸಿಎಂ ಪರಮೇಶ್ವರ್ ಸೇರಿದಂತೆ ಎಲ್ಲ ಸಚಿವರಿಂದ ರಾಜೀನಾಮೆ….!

35

 ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ.

ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ.

ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ನೀಡಿ ಬಂದಿದ್ದೇನೆ. ಪಕ್ಷಕ್ಕಾಗಿ ಎಲ್ಲರೂ ರಾಜೀನಾಮೆ ನೀಡಬೇಕೆಂದು ತೀರ್ಮಾನಿಸಲಾಗಿತ್ತು. ಪಕ್ಷಕ್ಕಾಗಿ ರಾಜೀನಾಮೆ ನೀಡಿದ್ದೇವೆ. ಮುಂದೆ ಪಕ್ಷದ ಮುಖಂಡರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಪಕ್ಷ ರಾಜೀನಾಮೆ ನೀಡಬೇಕೆಂದು ಹೇಳಿತ್ತು. ಹಾಗಾಗಿ ರಾಜೀನಾಮೆ ನೀಡಿದ್ದೇವೆ. ಪಾರ್ಟಿಯ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿದ್ದೇನೆ. ಇದೂವರೆಗೂ ಪಕ್ಷ ಯಾವುದೇ ಜವಾಬ್ದಾರಿಯನ್ನು ನೀಡಿಲ್ಲ. ಒಂದು ವೇಳೆ ಮುಂಬೈಗೆ ತೆರಳುವಂತೆ ಸೂಚಿಸಿದ್ರೆ ಹೋಗುತ್ತೇನೆ. ಇದೂವರೆಗೂ ಆ ರೀತಿಯ ಆದೇಶ ನನಗೆ ತಲುಪಿಲ್ಲ ಎಂದು ಹೇಳುವ ಮೂಲಕ ಅತೃಪ್ತರ ಮನವೊಲಿಕೆಗೆ ಸಿದ್ಧ ಎಂಬ ಸಂದೇಶವನ್ನು ಪರೋಕ್ಷವಾಗಿ ಹೇಳಿದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ನೆನೆಸಿಟ್ಟ ಒಣದ್ರಾಕ್ಷಿ ದಿನಾ ಒಂದೆರಡು ತಿಂದ್ರೆ, ಏನೆಲ್ಲಾ ಲಾಭವಿದೆ ಗೊತ್ತಾ?

    ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…