ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ ಮುಳುಗಡೆಯಾಗಿದೆ.. ಕುದುರೆಮುಖ,
ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕಿಸುವ ಹೆಬ್ಬಾಳ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಕೆಲವೆಡೆ ಘಟ್ಟ ಪ್ರದೇಶಗಳಲ್ಲಿ ರಸ್ತೆಗಳೂ ಕೊಚ್ಚಿಹೋಗಿವೆಕೇವಲ ಚಿಕ್ಕಮಗಳೂರಷ್ಟೇ ಅಲ್ಲ, ಕೊಡಗು ಜಿಲ್ಲೆಯಲ್ಲೂ ಕಳೆದ ಮೂರು ದಿನಗಳಿಂದ ಮುಂಗಾರು ಬಿರುಸುಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸಂಭಾವ್ಯ ಅಪಾಯ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಇದರ ಜೊತೆ ಎನ್‌ಡಿಆರ್‌ಎಫ್ ತಂಡ ಕೂಡ ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.
ಇನ್ನು ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಅದರ ಎಫೆಕ್ಟ್ ರಾಜ್ಯದ ಗಡಿ ಗ್ರಾಮಗಳಿಗೂ ತಟ್ಟಿದೆ. ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧ್‌ಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ 6 ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸವಾರರು ಪರದಾಡುವಂತಾಗಿದೆ.
ರಾಣೆಬೆನ್ನೂರು ತಾಲೂಕಿನ ಹೊಳೆಆನ್ವೇರಿ ಗ್ರಾಮದ ಬಳಿ ನಡುಗಡ್ಡೆಯಲ್ಲಿ 7 ಕುದುರೆಗಳು ಸಿಲುಕಿವೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ನಡುಗಡ್ಡೆಯಲ್ಲಿ ಸಿಲುಕಿಗೆ ಮೂಖ ಪ್ರಾಣಿಗಳು ಪರದಾಡುತ್ತಿದೆ. ಕಳೆದ 3 ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ಕಂಗಾಲಾಗಿದ್ದು, ಮೂಖ ಪ್ರಾಣಿಗಳನ್ನು ರಕ್ಷಿಸುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…
ನಮ್ಮ ಸಮಾಜದಲ್ಲಿ ಈಗ್ಲೂ ಮಂಗಳಮುಖಿಯರಿಗೆ ಸರಿಯಾದ ಗೌರವ ಸಿಗ್ತಿಲ್ಲ. ಆದ್ರೆ ಮಂಗಳಮುಖಿ ಮನೆಗೆ ಬಂದ್ರೆ ಬರಿಗೈನಲ್ಲಿ ಕಳುಹಿಸುವುದಿಲ್ಲ. ಮಂಗಳಮುಖಿ ಆಶೀರ್ವಾದ ಮಾಡಿದ್ರೆ ಎಲ್ಲವೂ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಮನೆಗೆ ಬಂದ ಮಂಗಳಮುಖಿಯನ್ನು ತೃಪ್ತಿಪಡಿಸಿ ಆಶೀರ್ವಾದ ಪಡೆಯಬೇಕೆಂಬ ನಂಬಿಕೆ ಇದೆ. ಮಕ್ಕಳಿಗೂ ಮಂಗಳಮುಖಿಯರ ಆಶೀರ್ವಾದ ಸಿಗಬೇಕಂತೆ. ನವಜಾತ ಶಿಶು ಜನಿಸಿದ ನಂತ್ರ ಬರುವ ಮೊದಲ ಬುಧವಾರ ಮಗುವನ್ನು ಮಂಗಳಮುಖಿ ಮಡಿಲಿಗೆ ಹಾಕಬೇಕಂತೆ. ಮಂಗಳಮುಖಿ, ಮಗುವಿಗೆ ಆಶೀರ್ವಾದ ನೀಡಿದ್ರೆ ಮಗು ಬಹಳ ಭಾಗ್ಯಶಾಲಿಯಾಗುತ್ತದೆಯಂತೆ. ಮಗು ಹುಟ್ಟಿದ ನಂತ್ರ ಅನ್ನ ಪ್ರಾಶನದವರೆಗೆ…
ವೀಳ್ಯದೆಲೆ ಎಂದರೆ ನೆನಪಾಗುವುದು ತಾಂಬೂಲ. ಎಲ್ಲಾ ಶುಭ ಸಮಾರಂಭದಲ್ಲಿ ಹೆಚ್ಚು ಬಳಸುವ ಎಲೆ.ತಾಂಬೂಲದಲ್ಲಿ ಪ್ರಮುಖ ಸ್ಥಾನ ಹೊಂದಿರುವ ವೀಳ್ಯದೆಲೆಗೆ ಸದಾ ಬೇಡಿಕೆ ಇದೆ. ನಿಶ್ಚಿತಾರ್ಥ, ಮದುವೆ, ಮುಂಜಿ, ವ್ರತ ಹೀಗೆ ಏನೇ ಮಂಗಳ ಕಾರ್ಯಗಳಿದ್ದರೂ ವೀಳ್ಯದೆಲೆ ಬೇಕೇ ಬೇಕು. ಊಟದ ನಂತರ ತಾಂಬೂಲ ಹಾಕಿಕೊಳ್ಳಲಂತೂ ಈ ಎಲೆ ಅತ್ಯಗತ್ಯ.ಆದರೆ ಸಾಂಪ್ರದಾಯಕವಾಗಷ್ಟೆ ಅಲ್ಲ, ಇದರ ಔಷಧೀಯ ಗುಣಗಳು ಕೂಡ ಹಲವು. ಆದರೆ ರಕ್ತಸ್ರಾವ, ಪಿತ್ತದಿಂದ ತಲೆ ಸುತ್ತು ಹಾಗೂ ತಿವಿದ ಗಾಯವಾಗಿದ್ದರೆ ವೀಳ್ಯದೆಲೆಯನ್ನು ಸೇವಿಸಬಾರದು. ವೀಳ್ಯೆದೆಲೆಯನ್ನು ಹೆಚ್ಚಾಗಿ ಬಳಸಿದಲ್ಲಿ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.